ವಿಂಡೀಸ್ ವಿರದ್ಧದ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ: ಮೊದಲ ಬಾರಿ ಪಂತ್​ಗೆ ಸ್ಥಾನ

 • News18
 • Last Updated :
 • Share this:
  ನ್ಯೂಸ್ 18 ಕನ್ನಡ

  ಎರಡನೇ ಟೆಸ್ಟ್ ಆರಂಭಕ್ಕೂ ಮೊದಲೇ ಮುಂಭರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲೆರಡು ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ಪ್ರಕಟಗೊಂಡಿದೆ.

  ನಾಯಕ ವಿರಾಟ್ ಕೊಹ್ಲಿ ಮುಂದಾಳತ್ವದಲ್ಲಿ ಮುನ್ನೆಡೆಯಲಿರುವ ತಂಡದಲ್ಲಿ ಇದೇ ಮೊದಲ ಬಾರಿಗೆ ರಿಷಭ್ ಪಂತ್ ಸೇರಿದಂತೆ 14 ಆಟಗಾರರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಪಂತ್ ಇದೇ ಮೊದಲ ಬಾರಿ ಅಂತರಾಷ್ಟ್ರೀಯ ಏಕದಿನ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ.

  ಇನ್ನುಳಿದಂತೆ ರೋಹಿತ್ ಶರ್ಮಾ, ಶಿಖರ್ ಧವನ್, ಕೆ.ಎಲ್ ರಾಹುಲ್, ಅಂಬಟಿ ರಾಯುಡು, ಮನೀಶ್ ಪಾಂಡೆ, ಎಂ.ಎಸ್. ಧೋನಿ, ರಿಷಭ್ ಪಂತ್, ರವೀಂದ್ರ ಜಡೇಜಾ, ಯುಜವೇಂದ್ರ ಚಹಾಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಖಲೀಲ್ ಅಹ್ಮದ್, ಶಾರ್ದೂಲ್ ಠಾಕೂರ್​​ಗೆ ತಂಡದಲ್ಲಿ ಸ್ಥಾನ ಸಿಕ್ಕಿದೆ.

  ಅ. 21 ರಿಂದ ವೆಸ್ಟ್​ ಇಂಡೀಸ್ ವಿರುದ್ಧ 5 ಪಂದ್ಯಗಳ ಏಕದಿನ ಸರಣಿ ಆರಂಭಗೊಳ್ಳಲಿದ್ದು, ಸದ್ಯ ಮೊದಲ ಎರಡು ಪಂದ್ಯಕ್ಕೆ ಬಿಸಿಸಿಐ ಆಯ್ಕೆ ಸಮಿತಿ ಭಾರತೀಯ ಆಟಗಾರರ ಹೆಸರನ್ನು ಪ್ರಕಟಿಸಿದೆ.

   

  First published: