ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಕಳಪೆ ಪ್ರದರ್ಶನ: ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ ಕೊಹ್ಲಿ

news18
Updated:May 24, 2018, 9:16 PM IST
ಈ ಬಾರಿಯ ಐಪಿಎಲ್​ನಲ್ಲಿ ಆರ್​ಸಿಬಿ ಕಳಪೆ ಪ್ರದರ್ಶನ: ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ ಕೊಹ್ಲಿ
news18
Updated: May 24, 2018, 9:16 PM IST
ನ್ಯೂಸ್ 18 ಕನ್ನಡ

ನವ ದೆಹಲಿ (ಮೇ. 24): ಈ ಬಾರಿಯ ಐಪಿಎಲ್ ಟೂರ್ನಿಯಲ್ಲೂ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಕಪ್ ಗೆಲ್ಲಲು ಸಾಧ್ಯವಾಗಿಲ್ಲ. ಅಲ್ಲದೆ ಪ್ಲೇ ಆಫ್ ಹಂತಕ್ಕೇರಲು ವಿಫಲವಾಯಿತು. ಇದಕ್ಕಾಗಿ ಆರ್​ಸಿಬಿ ತಂಡದ ನಾಯಕ ವಿರಾಟ್ ಕೊಹ್ಲಿ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ.

‘ಈ ಸಲದ ಐಪಿಎಲ್ ಟೂರ್ನಿಯಲ್ಲಿ ನಾವು ಉತ್ತಮ ಪ್ರದರ್ಶನ ತೋರಲಿಲ್ಲ. ಇದರಿಂದ ನನಗೆ ತುಂಬಾ ನೋವಾಗಿದೆ. ನಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಆಡಲು ವಿಫಲರಾಗಿದ್ದೇವೆ. ಹಾಗಾಗಿ ಅಭಿಮಾನಿಗಳಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಕೊಹ್ಲಿ ತಮ್ಮ ಟ್ಟಿಟರ್ ಖಾತೆಯಲ್ಲಿ ಟ್ವೀಟ್ ಮಾಡಿ ವಿಡಿಯೋ ಹಂಚಿಕೊಂಡಿದ್ದಾರೆ.

‘ಪ್ರತಿ ಪಂದ್ಯದಲ್ಲು ಗೆಲುವಿಗಾಗಿ ಕಠಿಣ ಹೋರಾಟ ನಡೆಸಿದ್ದೆವು. ನಾವು ಅವಕಾಶಗಳನ್ನು ಬಾಚಿಕೊಳ್ಳಬಹುದಿತ್ತು. ಆದರೆ ಅಭಿಮಾನಿಗಳ ಆಸೆಯನ್ನು ನಿರಾಸೆ ಮಾಡಿದ್ದಕ್ಕೆ ಬೇಸರವಿದೆ. ನಮ್ಮ ತಂಡದ ಪ್ರದರ್ಶನ ನನಗೆ ತೃಪ್ತಿ ತಂದಿಲ್ಲ. ಆಟ ಎಂದ ಮೇಲೆ ಸೋಲು-ಗೆಲುವು ಸಹಜ. ಈ ಆವೃತ್ತಿಯ ತಪ್ಪನ್ನು ತಿಳಿದುಕೊಂಡು ಮುಂದಿನ ಬಾರಿ ಕಂಡಿತವಾಗಿಯು ಉತ್ತಮ ಪ್ರದರ್ಶನ ತೋರುತ್ತೇವೆ’ ಎಂದು ಭರವಸೆ ನೀಡಿದ್ದಾರೆ.

 ಈ ಬಾರಿಯ ಐಪಿಎಲ್​​ನಲ್ಲಿ ಆರ್​ಸಿಬಿ 14 ಪಂದ್ಯಗಳನ್ನು ಆಡಿದ್ದು 6 ರಲ್ಲಿ ಜಯ ಗಳಿಸಿ ಉಳಿದ 8 ಪಂದ್ಯದಲ್ಲಿ ಸೋಲು ಕಂಡು ಅಂಕ ಪಟ್ಟಿಯಲ್ಲಿ ಆರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತ್ತು. ಕೊಹ್ಲಿ ಒಟ್ಟು 14 ಪಂದ್ಯಗಳಲ್ಲಿ 548 ರನ್ ಕಲೆಹಾಕಿದ್ದರು.
First published:May 24, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ
Loading...