ಐಪಿಎಲ್ 2022ರ (IPL 2022) 15ನೇ ಆವೃತ್ತಿಯಲ್ಲಿ ಇಂದು 2 ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯದಲ್ಲಿ 62ನೇ ಮ್ಯಾಚ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ (CSK vs GT) ನಡುವೆ ನಡೆಯಲಿದೆ. 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (LSG vs RR) ಪಂದ್ಯ ನಡೆಯಲಿದೆ. ಚೆನ್ನೈ ಮತ್ತು ಗುಜರಾತ್ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಈಗಾಗಲೇ ಫ್ಲೇ ಆಫ್ ಹಂತಕ್ಕೆ ತಲುಪಿರುವ ಗುಜರಾತ್ ತಂಡಕ್ಕೆ ಇಂದಿನ ಪಂದ್ಯವು ಔಪಚಾರಿಕವಾಗಿದ್ದರೆ, ಇತ್ತ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ಚೆನ್ನೈ (CSK) ತಂಡಕ್ಕೂ ಔಪಚಾರಿಕೆ ಪಂದ್ಯ ಎನ್ನಬಹುದಾಗಿದೆ. ಹಾಗಿದ್ದರೆ ಉಭಯ ತಂಡಗಳ ಈವರೆಗಿನ ಪ್ರದರ್ಶನ ಮತ್ತು ಬಲಾಬಲ ಹೇಗಿದೆ ನೋಡೋಣ.
ಪಂದ್ಯದ ವಿವರ:
ಐಪಿಎಲ್ 2022ರ 15ನೇ ಆವೃತ್ತಿಯ 62ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಲಿವೆ . ಇಂದಿನ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ.ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಟಾಸ್ ಮತ್ತು 3:30ಕ್ಕೆ ಪಂದ್ಯ ಆರಂಭವಾಗಲಿದೆ.
ಪಿಚ್ ವರದಿ:
ವಾಂಖೆಡೆ ಸ್ಟೇಡಿಯಂ ಹೆಚ್ಚಿನ ಸ್ಕೋರಿಂಗ್ ಪಂದ್ಯ ಆಗುವ ಸಾಧ್ಯತೆ ಇದೆ. ಇದು ದಿನದ ಆಟವಾದ್ದರಿಂದ ಇಬ್ಬನಿ ಅಂಶ ಪಂದ್ಯದ ಮೇಲೆ ಪರಿಣಾಮ ಬೀರುವುದಿಲ್ಲ. ಟಾಸ್ ಗೆದ್ದ ನಾಯಕನು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಹವಾಮಾನ ವರದಿ:
ಪಂದ್ಯದ ದಿನದಂದು ತಾಪಮಾನವು 58% ಆರ್ದ್ರತೆ ಮತ್ತು 18 ಕಿಮೀ/ಗಂ ಗಾಳಿಯ ವೇಗದೊಂದಿಗೆ 29 °C ಆಸುಪಾಸಿನಲ್ಲಿ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ. ಆಟದ ಸಮಯದಲ್ಲಿ ಮಳೆಯಾಗುವ ಸಾಧ್ಯತೆಗಳಿಲ್ಲ.
CSK vs GT ಹೆಡ್ ಟು ಹೆಡ್:
ಎಂಎಸ್ ಧೋನಿ ನಾಯಕಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಾರ್ದಿಕ್ ಪಾಂಡ್ಯ ನೇತೃತ್ವದ ಗುಜರಾತ್ ಟೈಟನ್ಸ್ ತಂಡಗಳು ಈವರೆಗೆ ಒಟ್ಟು 1 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಗುಜರಾಥ್ ಟೈಟನ್ಸ್ ತಂಡವು ಚೆನ್ನೈ ವಿರುದ್ಧ 3 ವಿಕೆಟ್ ಗಳಿಂದ ಜಯ ದಾಖಲಿಸಿದೆ. ಇಂದಿನ ಪಂದ್ಯದಲ್ಲಿ ಚೆನ್ನೈ ಈ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಹವಣಿಸುತ್ತಿದೆ.
ಐಪಿಎಲ್ 2022ರಲ್ಲಿ ಉಭಯ ತಂಡಗಳ ಪ್ರದರ್ಶನ:
ಇನ್ನು, ಈ ಬಾರಿ ಐಪಿಎಲ್ ನಲ್ಲಿ 12 ಪಂದ್ಯಗಳನ್ನಾಡಿರುವ ಗುಜರಾತ್ ತಂಡವು 9 ಪಂದ್ಯಗಳನ್ನು ಗೆದ್ದು, ಕೇಔಲ 3 ಪಂದ್ಯದಲ್ಲಿ ಸೋಲುವ ಮೂಲಕ 18 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿರುವುದಲ್ಲದೆ ಪ್ಲೇ ಆಫ್ಗೆ ಸಹ ಲಗ್ಗೆ ಇಟ್ಟಿದೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಈ ಬಾರಿ ಕಳಪೆ ಪ್ರದರ್ಶನದ ಮೂಲಕ ಆಡಿರುವ 12 ಪಂದ್ಯದಲ್ಲಿ 4ರಲ್ಲಿ ಗೆದ್ದು, 8ರಲ್ಲಿ ಸೋತು 8 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಈಗಾಗಲೇ ಸಿಎಸ್ಕೆ ತಂಡ ಟೂರ್ನಿಯಿಂದ ಹೊರಬಿದ್ದಿದೆ.
ಇದನ್ನೂ ಓದಿ: ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದ Monkeygate ವಿವಾದ, ಏನಿದು ಬಜ್ಜಿ - ಸೈಮಂಡ್ಸ್ ನಡುವಿನ ಕಾಂಟ್ರವರ್ಸಿ?
CSK vs GT ಸಂಭಾವ್ಯ ತಂಡ:
ಚೆನ್ನೈ ಸೂಪರ್ ಕಿಂಗ್ಸ್: ರುತುರಾಜ್ ಗಾಯಕ್ವಾಡ್ , ಡೆವೊನ್ ಕಾನ್ವೇ, ರಾಬಿನ್ ಉತ್ತಪ್ಪ, ಅಂಬಟಿ ರಾಯುಡು, ಮೊಯಿನ್ ಅಲಿ, ಎಂಎಸ್ ಧೋನಿ (ಸಿ & ವಾರ), ಶಿವಂ ದುಬೆ, ಡ್ವೇನ್ ಬ್ರಾವೋ, ಮಹೇಶ್ ತೀಕ್ಷಣ, ಸಿಮರ್ಜೀತ್ ಸಿಂಗ್, ಮುಖೇಶ್ ಚೌಧರಿ.
ಗುಜರಾತ್ ಟೈಟನ್ಸ್: ವೃದ್ಧಿಮಾನ್ ಸಹಾ (ವಾರ), ಶುಭಮನ್ ಗಿಲ್, ಮ್ಯಾಥ್ಯೂ ವೇಡ್, ಹಾರ್ದಿಕ್ ಪಾಂಡ್ಯ (ಸಿ), ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಮೊಹಮ್ಮದ್ ಶಮಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ