ಐಪಿಎಲ್ 2022ರ (IPL 2022) 15ನೇ ಆವೃತ್ತಿಯ 45ನೇ ಪಂದ್ಯದಲ್ಲಿ ಇಂದು ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG vs DC) ತಂಡಗಳು ಸೆಣಸಾಡಲಿವೆ. ಇಂದಿನ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಎರಡೂ ತಂಡಗಳು ತಮ್ಮ ಹಿಂದಿನ ಪಂದ್ಯದಲ್ಲಿ ಗೆಲುವನ್ನು ಕಂಡಿದ್ದು, ಇಂದಿನ ಪಂದ್ಯದಲ್ಲಿ ಆ ಜಯವನ್ನು ಮುಂದುವರೆಸಿಕೊಂಡು ಹೋಗುವ ನಿರೀಕ್ಷೆಯಲ್ಲಿದೆ. ಇನ್ನು, ಉಭಯ ತಂಡಗಳೆರಡಕ್ಕೂ ಇಂದಿನ ಪಂದ್ಯ ಮಹತ್ವದಾಗಿದ್ದು, ಪ್ಲೇ ಆಫ್ (PlayOff) ಹಂತಕ್ಕೆ ಏರಲು ಇಂದಿನ ಗೆಲುವು ಪ್ರಮುಖಪಾತ್ರ ವಹಿಸುತ್ತದೆ. ಲಕ್ನೋ (LSG) ತಂಡ ಇಂದಿನ ಪಂದ್ಯ ಗೆದ್ದಲ್ಲಿ 2ನೇ ಸ್ಥಾನಕ್ಕೆ ಏರುವ ಮೂಲಕ ಪ್ಲೇ ಆಫ್ ಹಾದಿಯನ್ನು ಸುಗಮಗೊಳಿಸಿಕೊಳ್ಳಲಿದೆ. ಅಂತೆಯೇ ಡೆಲ್ಲಿ ಸಹ ಜಯ ದಾಖಲಿಸಿದ್ದಲ್ಲಿ4ನೇ ಸ್ಥಾನಕ್ಕೆ ಏರಿಕೆ ಕಾಣಲಿದೆ. ಹಾಗಿದ್ದರೆ ಉಭಯ ತಂಡಗಳ ಬಲಾಬಲ ಹೇಗಿರಲಿದೆ ಎಂದು ನೋಡೋಣ.
ಪಂದ್ಯದ ವಿವರ:
ಐಪಿಎಲ್ 2022ರ 45ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಸೆಣಸಾಡಲಿವೆ. ಇಂದಿನ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 3 ಗಂಟೆಗೆ ಟಾಸ್ ಮತ್ತು 3:30ಕ್ಕೆ ಪಂದ್ಯ ಆರಂಭವಾಗಲಿದೆ.
ಪಿಚ್ ವರದಿ:
ವಾಂಖೆಡೆ ಪಿಚ್ ನಿಜವಾಗಿಯೂ ಬ್ಯಾಟಿಂಗ್ಗೆ ಉತ್ತಮವಾಗಿದ್ದು, ದೊಡ್ಡ ಸ್ಕೋರ್ ಬರುವ ನಿರೀಕ್ಷೆಯಿದೆ. ಇನ್ನು, ರಾತ್ರಿಯ ಪಂದ್ಯವಾಗಿರುವುದರಿಂದ ತೇವಾಂಶವು ಪಂದ್ಯದ ಮೇಲೆ ಪರಿಣಾಮ ಬೀರಲಿದೆ. ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಮಾಡುವ ನಿರೀಕ್ಷೆಯಿದೆ.
ಇದನ್ನೂ ಓದಿ: Virat Kohli: ವಿರಾಟ್ ಕೊಹ್ಲಿ ಬ್ಯಾಟಿಂಗ್ ಕುರಿತು ಮಾತನಾಡಿದ ಟೀಂ ಇಂಡಿಯಾ ಮಾಜಿ ಆಟಗಾರ
DC vs LSG ಹೆಡ್ ಟು ಹೆಡ್:
ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಒಟ್ಟು 1 ಪಂದ್ಯದಲ್ಲಿ ಮುಖಾಮುಖಿಯಾಗಿದ್ದವು. ಇದರಲ್ಲಿ ಡೆಲ್ಲಿ ವಿರುದ್ದ ಲಕ್ನೋ ತಂಡವು ಜಯ ಗಳಿಸಿತ್ತು. ಹೀಗಾಗಿ ಇಂದಿನ ಪಂದ್ಯದ ಮೇಲೆ ಡೆಲ್ಲಿ ಗೆಲುವಿನ ಕಣ್ಣಿಟ್ಟಿದ್ದು, ಪಂದ್ಯದ ಮೇಲೆ ಹೆಚ್ಚಿನ ನಿರೀಕ್ಷೆಯಿದೆ.
ಐಪಿಎಲ್ 2022ರಲ್ಲಿ ಉಭಯ ತಂಡಗಳ ಪ್ರದರ್ಶನ:
ಡೆಲ್ಲಿ ಕ್ಯಾಪಿಟಲ್ಸ್ ತಂಡವು ಈ ಬಾರಿ ಐಪಿಎಲ್ ನಲ್ಲಿ ಆಡಿರುವ 8 ಪಂದ್ಯ ಪಂದ್ಯಗಳಲ್ಲಿ 4 ಪಂದ್ಯದಲ್ಲಿ ಗೆದ್ದು 4ರಲ್ಲಿ ಸೋತಿದ್ದು, 8 ಅಂಕಗಳೊಂದಿಗೆ 6ನೇ ಸ್ಥಾನದಲ್ಲಿದೆ. ಇನ್ನು, ಲಕ್ನೋ ಸೂಪರ್ ಜೈಂಟ್ಸ್ ತಂಡವು ಆಡಿರುವ 9 ಪಂದ್ಯಗಳಲ್ಲಿ 6 ಪಂದ್ಯಗಳನಲ್ಲಿ ಗೆದ್ದು 3ರಲ್ಲಿ ಸೋತಿದೆ. ಒಟ್ಟು 12 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಹೀಗಾಗಿ ಇಂದಿನದ ಮೇಲೆ ಹೆಚ್ಚಿನ ನಿರೀಕ್ಷೆ ಇದ್ದು, ಲಕ್ನೋ ತಂಡದ ಇಂದಿನ ಫೆವರೇಟ್ ತಂಡವಾಗಿದೆ.
ಇದನ್ನೂ ಓದಿ: IPL 2022 MI vs RR: ರೋಹಿತ್ ಬರ್ತಡೇಗೆ ಮುಂಬೈ ಟೀಂ ಗೆಲುವಿನ ಗಿಫ್ಟ್, ರಾಜಸ್ಥಾನ್ ತಂಡಕ್ಕೆ ಮತ್ತೊಂದು ಸೋಲು
DC vs LSG ಸಂಭಾವ್ಯ ತಂಡ:
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ರಿಷಭ್ ಪಂತ್ (c & wk), ಲಲಿತ್ ಯಾದವ್, ರೋವ್ಮನ್ ಪೊವೆಲ್, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಮುಸ್ತಾಫಿಜುರ್ ರೆಹಮಾನ್, ಚೇತನ್ ಸಕರಿಯಾ.
ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್ (WK), ಕೆಎಲ್ ರಾಹುಲ್ (c), ದೀಪಕ್ ಹೂಡಾ, ಮಾರ್ಕಸ್ ಸ್ಟೋನಿಸ್, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ಜೇಸನ್ ಹೋಲ್ಡರ್, ದುಷ್ಮಂತ ಚಮೀರಾ, ರವಿ ಬಿಷ್ಣೋಯ್, ಅವೇಶ್ ಖಾನ್, ಮೊಹ್ಸಿನ್ ಖಾನ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ