ಐಪಿಎಲ್ 2022ರ (IPL 2022) 15ನೇ ಆವೃತ್ತಿಯ 69ನೇ ಪಂದ್ಯದಲ್ಲಿ ಇಂದು ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ (MI vs DC) ತಂಡಗಳು sಎಣಸಾಡಿದವು. ಇಂದಿನ ಪಂದ್ಯವು ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಮೊದಲು ಬೌಲಿಂಗ್ ಆಯ್ದುಕೊಂಡರು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡವು ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡವು ನಿಗದಿತ 19.5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 160 ರನ್ ಗಳಿಸುವ ಮೂಲಕ ಮುಂಬೈ ತಂಡ 5 ವಿಕೆಟ್ ಗಳ ಜಯ ದಾಖಲಿಸಿತು. ಈ ಮೂಲಕ ಡೆಲ್ಲಿ ಸೋಲಿನಿಂದ ಆರ್ಸಿಬಿ ಫ್ಲೇ ಆಫ್ ಪ್ರವೇಶಿಸಿತು.
ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ:
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು ನಿಗದಿತ 20 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು.ಡೆಲ್ಲಿ ಪರ ಪ್ರಥ್ವಿ ಶಾ 24 ರನ್, ಡೇವಿಡ್ ವಾರ್ನರ್ 5 ರನ್, ನಾಯಕ ರಿಷಭ್ ಪಂತ್ 39 ರನ್, ಸರ್ಫರಾಜ್ ಖಾನ್ 10 ರನ್, ರೋವಮನ್ ಪೋವೆಲ್ 34 ಎಸೆತದಲ್ಲಿ 43 ರನ್, ಅಕ್ಷರ್ ಪಟೇಲ್ 19 ರನ್, ಶಾರ್ದೂಲ್ ಠಾಕೂರ್ 4 ರನ್ ಗಳಿಸುವ ಮೂಲಕ 159 ರನ್ ಗಳ ಸಾಧಾರಣ ಮೊತ್ತ ಕಲೆಹಾಕಿತು.
ಮಿಂಚಿದ ಬೂಮ್ರಾ:
ಇನ್ನು, ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡ ಮೊದಲು ಬೌಲಿಂಗ್ ಮಾಡಿತು. ಡೆಲ್ಲಿ ಬ್ಯಾಟ್ಸ್ಮನ್ ಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾದ ಮುಂಬೈ ಬೌಲರ್ ಗಳು ಡೆಲ್ಲಿ ಅನ್ನು ಸಾಧಾರಣ ಮೊತ್ತಕ್ಕೆ ಕಟ್ಟಿ ಹಾಕುವಲ್ಲಿ ಸಫಲರಾದರು. ಮುಂಬೈ ಪರ ಉತ್ತಮ ಬೌಲಿಂಗ್ ಮಾಡಿದ ಜಸ್ಪ್ರಿತ್ ಬೂಮ್ರಾ 4 ಓವರ್ ಮಾಡಿ 25 ರನ್ ನೀಡಿ 3 ವಿಕೆಟ್ ಪಡೆದರು. ಉಳಿದಂತೆ ರಾಮ್ದೀಪ್ ಸಿಂಗ್ 2 ವಿಕೆಟ್ ಪಡೆದರೆ, ಡೇನಿಯಲ್ ಸಾಮ್ಸ್ ಮತ್ತು ಮಾಯಾಂಕ್ ಮಾರ್ಕಂಡೆ ತಲಾ 1 ವಿಕೆಟ್ ಪಡೆದು ಮಿಂಚಿದರು.
ಇದನ್ನೂ ಓದಿ: Deepak Chahar: ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ ಟೀಂ ಇಂಡಿಯಾ ವೇಗಿ
ಭರ್ಜರಿ ಬ್ಯಾಟಿಂಗ್ ಮಾಡಿದ ಮುಂಬೈ:
ಇನ್ನು, ಡೆಲ್ಲಿ ನೀಡಿದ್ದ 159 ರನ್ ಗಳ ಸಾಧಾರಣ ಮೊತ್ತ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡಕ್ಕೆ ಆರಂಭಿಕ ಆಘಾತವಾಯಿತು. ನಾಯಕ ರೋಹಿತ್ ಶರ್ಮಾ ಕೇವಲ 2 ರನ್ ಗಳಿಸಿ ಔಟಾದರು. ನಂತರದಲ್ಲಿ ಇಶಾನ್ ಕಿಶನ್ 35 ಎಸೆತದಲ್ಲಿ 48 ರನ್ಮತ್ತು ಡೇವಿಡ್ ಬ್ರೇವಿಸ್ 37 ರನ್ ಗಳಸಿ ತಂಡದ ಮೊತ್ತ ಹೆಚ್ಚಿಸಲು ಸಹಕಾರಿಯಾದರು. ಅಂತಿಮವಾಗಿ ಅಬ್ಬರಿಸಿದ ಡಟೀಮ್ ಡೇವಿಡ್ ಕೇವಲ 11 ಎಸೆತದಲ್ಲಿ 4 ಸಿಕ್ಸ್ ಮತ್ತು 2 ಫೋರ್ ಮೂಲಕ 34 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಕೊನೆಯಲ್ಲಿ ತಿಲಕ್ ವರ್ಮಾ ರನ್ ಮತ್ತು ರಮಣದೀಪ್ ಸಿಂಗ್ ರನ್ ಗಳಸಿದರು.
ಇದನ್ನೂ ಓದಿ: IPL 2022 CSK vs RR: ಫ್ಲೇ ಆಫ್ ಹಂತಕ್ಕೆ ತಲುಪಿದ ರಾಜಸ್ಥಾನ್, ಅಂತಿಮ ಪಂದ್ಯದಲ್ಲಿಯೂ ಸೋತ ಸಿಎಸ್ಕೆ
ಫ್ಲೇ ಆಪ್ ಪ್ರವೇಶಿಸಿದ RCB:
ಇನ್ನು, ಇಂದಿನ ಪಂದ್ಯದ ಫಲಿತಾಂಶದ ಮೇಲೆ RCB ಫ್ಲೇ ಆಫ್ ಭವಿಷ್ಯ ನಿರ್ಧವಾಗಿತ್ತು. ಆದರೆ ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲ್ಲುವ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ಸೋಲಿನಿಂದ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಫ್ಲೇ ಆಫ್ ಪ್ರವೇಶಿಸಿದೆ. ಫ್ಲೇ ಆಫ್ ಪಂದ್ಯದಲ್ಲಿ ಬೆಂಗಳೂರು ತಂಡವು ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ. ಈ ಪಂಂದ್ಯವು ಮೇ 25ರಂದು ಕೋಲ್ಕತ್ತಾದ ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ