ಐಪಿಎಲ್ 2022ರ (IPL 2022) 15ನೇ ಆವೃತ್ತಿಯ 47ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (KKR vs RR) ತಂಡಗಳು ಸೆಣಸಾಡಲಿವೆ. ಇಂದಿನ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಈಗಾಗಲೇ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ರಾಜಸ್ಥಾನ್ ರಾಯಲ್ಸ್ (RR) ತಂಡವು ಇಂದಿನ ಪಂದ್ಯವನ್ನು ಗೆದ್ದು, ಪ್ಲೇ ಆಫ್ ಹಾದಿಯನ್ನು ಸುಗಮಗೊಳಿಸಿಕೊಳ್ಳು ಆಲೋಚಿಸುತ್ತಿದೆ. ಅಂತೆಯೇ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಕ್ಕೆ ಇಂದಿನ ಪಂದ್ಯ ಮಹತ್ವದಾಗಿದ್ದು, ಇಂದಿನ ಪಂದ್ಯ ಗೆಲ್ಲುವ ಮೂಲಕ ಪ್ಲೇ ಆಫ್ ಹಂತಕ್ಕೆ ತಲುಪುವ ಸಾಧ್ಯತೆಗೆ ಹತ್ತಿರವಾಗುತ್ತಿದೆ. ಹಾಗಿದ್ದರೆ ಉಭಯ ತಂಡಗಳ ಹೆಡ್ ಟು ಹೆಡ್ ಹೇಗಿದೆ ನೋಡಿ.
ಪಂದ್ಯದ ವಿವರ:
ಐಪಿಎಲ್ 2022ರ 47ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಸೆಣಸಾಡಲಿವೆ. ಇಂದಿನ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಮುಖಾಮುಖಿಯಾಗಲಿವೆ. ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ.
ಪಿಚ್ ವರದಿ:
ವಾಂಖೆಡೆ ಮೈದಾನದಲ್ಲಿ ಮತ್ತೊಂದು ದೊಡ್ಡ ಮೊತ್ತದ ಪಂದ್ಯ ಆಗುವ ನಿರೀಕ್ಷೆಯಿದೆ. ಬ್ಯಾಟರ್ ಗಳಿಗೆ ಹೆಚ್ಚಿನ ಉತ್ತಮವಾಗಿರುವ ಪಿಚ್ ಇದಾಗಿದ್ದು, ಟಾಸ್ ಗೆದ್ದ ತಂಡವು ಇಬ್ಬನಿ ಅಂಶವನ್ನು ಪರಿಗಣಿಸಿ ಬೌಲಿಂಗ್ ಆಯ್ಕೆ ಮಾಡುವ ಸಾಧ್ಯತೆಗಳಿವೆ.
ಇದನ್ನೂ ಓದಿ: IPL 2022: ಪ್ಲೇ ಆಫ್ ಪ್ರವೇಶಿಸಲಿದ್ಯಾ RCB? ಏನು ಹೇಳುತ್ತಿದೆ ಐಪಿಎಲ್ ಅಂಕಪಟ್ಟಿ
RR vs KKR ಹೆಡ್ ಟು ಹೆಡ್:
ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಈಗಾಗಲೇ ಐಪಿಎಲ್ ನಲ್ಲಿ ಒಟ್ಟು 25 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಕೆಕೆಆರ್ 13 ಬಾರಿ ಮತ್ತು ಆರ್ಆರ್ 12 ಬಾರಿ ಗೆಲುವು ದಾಖಲಿಸಿದೆ. ಈ ಬಾರಿಯೂ ಒಂದು ಪಂದ್ಯದಲ್ಲಿ ಸೆಣಸಾಡಿದ್ದು, ಅದರಲ್ಲಿ ಕೊಲ್ಕತ್ತಾ ತಂಡವು ಗೆದ್ದು ಬೀಗಿದೆ. ಹೀಗಾಗಿ ಇಂದಿನ ಪಂದ್ಯವನ್ನು ಗೆಲ್ಲುವ ಮೂಲಕ ಹಿಂದಿನ ಪಂದ್ಯದ ಸೇಡನ್ನು ತೀರಿಸಿಕೊಳ್ಳಲು ಸಿದ್ಧವಾಗಿದೆ. ಇನ್ನು, ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಓಪನರ್ ಜೋಸ್ ಬಟ್ಲರ್ ಮೇಲೆ ಹೆಚ್ಚಿನ ನೀರಿಕ್ಷೆಯಿದೆ.
ಐಪಿಎಲ್ 2022ರಲ್ಲಿ ಉಭಯ ತಂಡಗಳ ಪ್ರದರ್ಶನ:
ಈ ಬಾರಿ ರಾಜಸ್ಥಾನ್ ತಂಡವು ಹೆಚ್ಚು ಬಲಿಷ್ಠವಾಗಿ ಕಾಣುತ್ತಿದ್ದು, ಆಡಿರುವ 9 ಪಂದ್ಯಗಳಲ್ಲಿ 6ರಲ್ಲಿ ಗೆದ್ದು, 5ರಲ್ಲಿ ಸೋತಿದ್ದು12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯ ಗೆದ್ದಲ್ಲಿ ಆರ್ಆರ್ ತಂಡಕ್ಕೆ ಪ್ಲೇ ಆಫ್ ಹಾದಿ ಸುಗಮವಾಗಲಿದೆ. ಅದರಂತೆ ಕೊಲ್ಕತ್ತಾ ಒಟ್ಟು 9 ಪಂದ್ಯಗಳನ್ನಾಡಿದ್ದು, 3ರಲ್ಲಿ ಗೆದ್ದು, 6ರಲ್ಲಿ ಸೋಲುವ ಮೂಲಕ ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ.
ಇದನ್ನೂ ಓದಿ: IPL 2022 DC vs KKR Head to Head: ಡೆಲ್ಲಿ vs ಕೋಲ್ಕತ್ತಾ ಕದನದಲ್ಲಿ ಗೆಲ್ಲುವವರು ಯಾರು?
KKR vs RR ಸಂಭಾವ್ಯ ಪ್ಲೇಯಿಂಗ್ 11:
ಕೋಲ್ಕತ್ತಾ ನೈಟ್ ರೈಡರ್ಸ್: ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ಸಿ), ನಿತೀಶ್ ರಾಣಾ, ಶೆಲ್ಡನ್ ಜಾಕ್ಸನ್ (ವಿಕೆ), ರಿಂಕು ಸಿಂಗ್, ಆಂಡ್ರೆ ರಸೆಲ್, ಪ್ಯಾಟ್ ಕಮಿನ್ಸ್, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ.
ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (c & wk), ಡೇರಿಲ್ ಮಿಚೆಲ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಕುಲದೀಪ್ ಸೇನ್
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ