IPL 2022 KKR vs RR: ಗೆಲುವಿನ ಲಯಕ್ಕೆ ಮರಳಿದ ಕೋಲ್ಕತ್ತಾ, ರಾಜಸ್ಥಾನ್ ತಂಡಕ್ಕೆ ಮತ್ತೊಂದು ಸೋಲು
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 152 ರನ್ ಗಳ ಸಾಧಾರಣ ಮೊತ್ತ ಕಲೆಹಾಕಿತು. ಈ ಮೊತ್ತ ಬೆನ್ನತ್ತಿದ ಕೊಲ್ಕತ್ತಾ ತಂಡವು 19.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 158 ರನ್ ಗಳಿಸುವ ಮೂಲಕ 7 ವಿಕೆಟ್ ಗಳ ಜಯ ದಅಖಲಿಸಿತು.
ಐಪಿಎಲ್ 2022ರ 15ನೇ ಆವೃತ್ತಿಯ 47ನೇ ಪಂದ್ಯದಲ್ಲಿ ಇಂದು ರಾಜಸ್ಥಾನ್ ರಾಯಲ್ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಂಬೈನ ವಾಂಖೆಡೆ ಸ್ಟೇಡಿಯಂ ನಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಕೊಲ್ಕತ್ತಾ ತಂಡದ ನಾಯಕ ಶ್ರೇಯಸ್ ಐಯ್ಯರ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 152 ರನ್ ಗಳ ಸಾಧಾರಣ ಮೊತ್ತ ಕಲೆಹಾಕಿತು. ಈ ಮೊತ್ತ ಬೆನ್ನತ್ತಿದ ಕೊಲ್ಕತ್ತಾ ತಂಡವು 19.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 158 ರನ್ ಗಳಿಸುವ ಮೂಲಕ 7 ವಿಕೆಟ್ ಗಳ ಜಯ ದಅಖಲಿಸಿತು.
ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್:
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 152 ರನ್ ಗಳ ಸಾಧಾರಣ ಮೊತ್ತ ಕಲೆಹಾಕಿತು.ರಾಜಸ್ಥಾನ್ ಪರ ನಾಯಕ ಸಂಜು ಸ್ಯಾಮ್ಸನ್ ಆಕರ್ಷಕ ಅರ್ಧಶತಕ ಸಿಡಿಸಿ ಮಿಂಚಿದರು. ಸ್ಯಾಮ್ಸನ್ 49 ಎಸೆತದಲ್ಲಿ 1 ಸಿಕ್ಸ್ ಮತ್ತು 7 ಫೋರ್ ಮೂಲಕ 54 ರನ್ ಗಳಿಸಿ ಮಿಂಚಿದರು. ಉಳಿದಂತೆ ಆರೆಂಜ್ ಕ್ಯಾಪ್ ಹೋಲ್ಡರ್ ಜೋಸ್ ಬಟ್ಲರ್ 22 ರನ್, ದೇವದತ್ ಪಡ್ಡಿಕಲ್ 2 ರನ್, ಕರಣ್ ನಾಯರ್ 13 ರನ್, ರಿಯಾನ್ ಪರಾಗ್ 19 ರನ್ ಹಾಗೂ ಹಿಟ್ಮಾಯರ್ 27 ರನ್ ಕೊನೆಯಲ್ಲಿ ರವಿಚಂದ್ರನ್ ಅಶ್ವೀನ್ 6 ರನ್ ಗಳಸಿದರು.
ಉತ್ತಮ ಬೌಲಿಂಗ್ ಮಾಡಿದ ಕೆಕೆಆರ್:
ಇನ್ನು, ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಬೌಲರ್ ಗಳು ಸಂಘಟಿತ ಪ್ರದರ್ಶನ ತೋರುವ ಮೂಲಕ ರಾಜಸ್ಥಾನ್ ತಂಡವನ್ನು ಸಾಧಾರಣ ಮೊತ್ತಕ್ಕೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಕೆಕೆಆರ್ ಪರ ಟಿಮ್ ಸೌಥಿ 2 ವಿಕೆಟ್, ಉಮೇಶ್ ಯಾದವ್, ಅಂಕುಲ್ ರಾಯ್ ಮತ್ತು ಶಿವಂ ಮಾವಿ ತಲಾ 1 ವಿಕೆಟ್ ಪಡೆದು ಮಿಂಚಿದರು.
ರಾಜಸ್ಥಾನ್ ರಾಯಲ್ಸ್ ನೀಡಿದ 152 ರನ್ ಗಳನ್ನು ಬೆನ್ನತ್ತಿದ ಕೋಲ್ಕತ್ತಾ ತಂಡಕ್ಕೆ ಉತ್ತಮ ಆರಂಭ ದೊರಕಲಿಲ್ಲ. ಆರಂಭಿಕರಾದ ಬಾಬಾ ಇಂದ್ರಜಿತ್ 15 ರನ್ ಮತ್ತು ಆರೋನ್ ಪಿಂಚ್ ಕೇವಲ 4 ರನ್ ಗಳಿಸಿ ಫೆವೆಲಿಯನ್ ಅತ್ತ ಹೆಜ್ಜೆ ಹಾಕಿದರು. ಆದರೆ ನಂತರ ನಾಯಕ ಶ್ರೇಯಸ್ ಅಯ್ಯರ್ 34 ರನ್ ಗಳಸಿವ ಮೂಲಕ ಕೊಂಚ ಆಸರೆಯಾದರು. ಆದರೆ ಕೊನೆಯಲ್ಲಿ ನಿತೀಶ್ ರಾಣಾ 48 ರನ್ ಮತ್ತು ರಿಂಕು ಸಿಂಗ್ 42 ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.
ರಾಜಸ್ಥಾನ್ ತಂಡದ ಬೌಲರ್ ಗಳು ತಂಡದ ಮೊತ್ತವನ್ನು ಡಿಫೆಂಡ್ ಮಾಡಿಕೊಳ್ಳುವಲ್ಲಿ ಎಡವಿದರು. ಆರ್ಆರ್ ಪರ ಯಾವಬ್ಬ ಬೌಲರ್ ಸಹ ಕೋಲ್ಕತ್ತಾ ತಂಡವನ್ನು ಕಟ್ಟಿಹಾಕಯವಲ್ಲಿ ಯಶಸ್ವಿಯಾಗಲಿಲ್ಲ. ಇನ್ನು, ಆರ್ ಆರ್ ಪರ ಟ್ರೆಂಟ್ ಬೌಲ್ಟ್, ಪ್ರಸಿದ್ಧ ಕೃಷ್ಣ ಮತ್ತು ಕುಲದೀಪ್ ಸೆನ್ ತಲಾ 1 ವಿಕೆಟ್ ಪಡೆದರು.
ಕೋಲ್ಕತ್ತಾಗೆ ಪ್ಲೇ ಆಫ್ ಆಸೆ ಜೀವಂತ:
ಇನ್ನು, ಇಂದಿನ ಪಂದ್ಯ ಗೆಲ್ಲುವ ಮೂಲಕ ಕೋಲ್ಕತ್ತಾ ತಂಡವು ಪ್ಲೇ ಆಫ್ ಹಂತಕ್ಕೆ ಏರುವ ಕನಸು ಜೀವಂತವಾಗಿ ಉಳಿಸಿಕೊಂಡಿದೆ. ಇನ್ನು ಮುಂದಿನ ಅಷ್ಟೂ ಪಂದ್ಯವನ್ನು ಗೆದ್ದಲ್ಲಿ ಕೆಕೆಆರ್ ಗೆ ಪ್ಲೇ ಆಫ್ ಹೋಗುವ ಸಾಧ್ಯತೆಗಳಿವೆ.
Published by:shrikrishna bhat
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ