ಐಪಿಎಲ್ 2022ರ (IPL 2022) 15ನೇ ಆವೃತ್ತಿಯ 66ನೇ ಪಂದ್ಯದಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ಸೆಣಸಾಡಲಿವೆ. ಇಂದಿನ ಪಂದ್ಯವು ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ (D Y Patil Sports) ಅಕಾಡೆಮಿಯಲ್ಲಿ ನಡೆಯಲಿದೆ. ಈಗಾಗಲೇ ಪ್ಲೇ ಆಫ್ ಹೊಸ್ತಿಲಿನಲ್ಲಿರುವ ಕನ್ನಡಿಗ ಕೆಎಲ್ ರಾಹುಲ್ (KL Rahul) ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಇಂದಿನ ಪಂದ್ಯ ಗೆಲ್ಲುವ ಮೂಲಕ ಪ್ಲೇ ಆಫ್ ಹಂತಕ್ಕೆ ಏರಲು ಕಾತುರವಾಗಿದೆ. ಇತ್ತ, ಶ್ರೇಯಸ್ ಐಯ್ಯರ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಇನ್ನೂ ಪ್ಲೇ ಆಫ್ ಕನಸು ಜೀವಂತವಾಗಿದ್ದು, ಇಂದಿನ ಪಂದ್ಯವನ್ನು ಹೆಚ್ಚಿನ ರನ್ ರೇಟ್ ಮೂಲಕ ಗೆದ್ದು, ಪ್ಲೇ ಆಫ್ ಗೆ ತಲುಪಲು ಎದುರು ನೋಡುತ್ತಿದೆ. ಹಾಗಿದ್ದಲ್ಲಿ ಉಭಯ ತಂಡಗಳ ಬಲಾಬಲ ಹೇಗಿದೆ ಎಂದು ನೋಡೋಣ.
ಪಂದ್ಯದ ವಿವರ:
ಐಪಿಎಲ್ 2022ರ 66ನೇ ಪಂದ್ಯದಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಡಲಿವೆ. ಇಂದಿನ ಪಂದ್ಯವು ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆಯಲಿದೆ. ಪಂದ್ಯವು ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ.
ಪಿಚ್ ವರದಿ:
ಡಾ. ಡಿವೈ ಪಾಟೀಲ್ ಅಕಾಡೆಮಿಯಲ್ಲಿನ ವಿಕೆಟ್ ನಿಧಾನಗತಿಯ ಬೌಲರ್ಗಳಿಗೆ ಸಹಾಯ ಮಾಡಿದೆ. ಹೀಗಾಗಿ ಇಲ್ಲಿ ಹೆಚ್ಚು ರನ್ ಗಳಿಸುವುದು ಕಷ್ಟಕರವಾಗುತ್ತದೆ. ಅಲ್ಲದೇ ತೇವಾಂಶವು ಹೆಚ್ಚು ಪರಿಣಾಮ ಬೀರುವುದರಿಂದ ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ: Shikhar Dhawan: ಬಾಲಿವುಡ್ಗೆ ಎಂಟ್ರಿ ನೀಡಲಿದ್ದಾರೆ ಗಬ್ಬರ್ ಸಿಂಗ್, ಈ ವರ್ಷವೇ ಫಿಲ್ಮ್ ಬಿಡುಗಡೆಯಂತೆ
ಐಪಿಎಲ್ 2022ರಲ್ಲಿ ಉಭಯ ತಂಡಗಳ ಪ್ರದರ್ಶನ:
ಇನ್ನು, ಈ ಬಾರಿ ಐಪಿಎಲ್ 2022ರ 15ನೇ ಆವೃತ್ತಿಯಲ್ಲಿ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಹೊಸ ತಂಡವಾಗಿದ್ದರೂ ಉತ್ತಮ ಪ್ರದರ್ಶನ ತೋರುತ್ತಿದೆ. ಈಗಾಗಲೇ ಟೂರ್ನಿಯಲ್ಲಿ 13 ಪಂದ್ಯಗಳನ್ನಾಡಿದ್ದು, ಇದರಲ್ಲಿ 8 ಪಂದ್ಯಗಳನ್ನು ಗೆದ್ದು, 5ರಲ್ಲಿ ಸೋತಿದೆ. ಈ ಮೂಲಕ ಐಪಿಎಲ್ 2022ರ ಅಂಕಪಟ್ಟಿಯಲ್ಲಿ ಲಕ್ನೋ 3ನೇ ಸ್ಥಾನದಲ್ಲಿದೆ. ಅದರಂತೆ ಶ್ರೇಯಸ್ ಐಯ್ಯರ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಆಡಿರುವ ಒಟ್ಟು 13 ಪಂದ್ಯಗಳಲ್ಲಿ 6ರಲ್ಲಿ ಗೆದ್ದು, 7ರಲ್ಲಿ ಸೋಲುವ ಮೂಲಕ 12 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
ಹೀಗಾಗಿಇಂದಿನ ಪಂದ್ಯ ಗೆದ್ದಲ್ಲಿ 14 ಅಂಕಗಳೊಂದಿಗೆ ಪಾಯಿಂಟ್ ಟೇಬಲ್ ನಲ್ಲಿ ಮೇಲೆರಿದರೂ ರನ್ ರೇಟ್ ಪ್ರಮುಖ ಪಾತ್ರ ವಹಿಸಲಿದೆ, ಆದರೆ ಲಕ್ನೋ ತಂಡಕ್ಕೆ ಇಂದಿನ ಪಂದ್ಯ ಗೆದ್ದಲ್ಲಿ ನೇರವಾಗಿ ಪ್ಲೇ ಆಫ ಹಂತ ತಲುಪಲಿದೆ. ಹೀಗಾಗಿ ಇಂದಿನ ಪಂದ್ಯದ ಮೇಲೆ ಹೆಚ್ಚಿನ ನಿರೀಕ್ಷೆಯಿದ್ದು, ಲಕ್ನೋ ಪ್ಲೇ ಆಫ್ ಹಂತಕ್ಕೆ ತಲುಪಲಿದೆಯೇ ಎಂದು ಕಾದು ನೋಡಬೇಕಿದೆ.
ಇದನ್ನೂ ಓದಿ: IPL 2022 MI vs SRH: ಉಮ್ರಾನ್ ಮಲಿಕ್ ವೇಗಕ್ಕೆ ಬೆಚ್ಚಿದ ಮುಂಬೈ, ರೋಚಕ ಗೆಲುವು ದಾಖಲಿಸಿದ ಹೈದರಾಬಾದ್
KKR vs LSG ಸಂಭಾವ್ಯ ತಂಡ:
ಕೋಲ್ಕತ್ತಾ ನೈಟ್ ರೈಡರ್ಸ್: ವೆಂಕಟೇಶ್ ಅಯ್ಯರ್, ಬಾಬಾ ಇಂದ್ರಜಿತ್, ಶ್ರೇಯಸ್ ಅಯ್ಯರ್ (c), ನಿತೀಶ್ ರಾಣಾ, ಸ್ಯಾಮ್ ಬಿಲ್ಲಿಂಗ್ಸ್ (wk), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಉಮೇಶ್ ಯಾದವ್, ಟಿಮ್ ಸೌಥಿ, ವರುಣ್ ಚಕ್ರವರ್ತಿ.
ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್ (WK), ಕೆಎಲ್ ರಾಹುಲ್ (C), ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಆಯುಷ್ ಬಡೋನಿ, ಮಾರ್ಕಸ್ ಸ್ಟೋನಿಸ್, ಜೇಸನ್ ಹೋಲ್ಡರ್, ಮೊಹ್ಸಿನ್ ಖಾನ್, ರವಿ ಬಿಷ್ಣೋಯ್, ದುಷ್ಮಂತ ಚಮೀರಾ, ಅವೇಶ್ ಖಾನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ