IPL 2022 LSG vs RR: ಪ್ಲೇ ಆಫ್ ಹಂತಕ್ಕೇರಲು ಲಕ್ನೋ - ರಾಜಸ್ಥಾನ್ ಫೈಟ್, ಹೇಗಿದೆ ಉಭಯ ತಂಡಗಳ ಬಲಾಬಲ

ಐಪಿಎಲ್ 2022ರ (IPL 2022) 15ನೇ ಆವೃತ್ತಿಯಲ್ಲಿ ಇಂದು 2 ಪಂದ್ಯಗಳು ನಡೆಯಲಿದೆ. 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (LSG vs RR) ಪಂದ್ಯ ನಡೆಯಲಿದೆ.

RR vs LSG

RR vs LSG

  • Share this:
ಐಪಿಎಲ್ 2022ರ (IPL 2022) 15ನೇ ಆವೃತ್ತಿಯಲ್ಲಿ ಇಂದು 2 ಪಂದ್ಯಗಳು ನಡೆಯಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ (CSK vs GT) ನಡುವೆ ನಡೆಯಲಿದೆ. 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (LSG vs RR) ಪಂದ್ಯ ನಡೆಯಲಿದೆ. ಈ ಪಂದ್ಯವು ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಲಕ್ನೋ ಮತ್ತು ರಾಜಸ್ಥಾನ್ ಎರಡೂ ತಂಡಗಳಿಗೂ ಈ ಪಂದ್ಯ ಅತ್ಯಂತ ಮಹತ್ವದ್ದಾಗಿದ್ದು, ಇಂದಿನ ಪಂದ್ಯ ಗೆದ್ದಲ್ಲಿ ಕನ್ನಡಿಗ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಈ ಬಾರಿ ಐಪಿಎಲ್ ನಲ್ಲಿ ಪ್ಲೇ ಆಫ್ ಹಂತಕ್ಕೆ ತಲುಪುವ 2ನೇ ತಂಡಗವಾಗಲಿದೆ. ಅದರಂತೆ ಒಮ್ಮೆ ರಾಜಸ್ಥಾನ್ ಗೆದ್ದಲ್ಲಿ ಪ್ಲೇ ಆಫ್ ಹಂತ ಖಚಿತವಾಗಲಿದೆ. ಹೀಗಾಗಿ ಇಂದಿನ ಪಂದ್ಯದ ಮೇಲೆ ಹೆಚ್ಚು ನಿರೀಕ್ಷೆಯಿದ್ದು, ಉತ್ತಮ ಪೈಪೋಟಿ ಆಗುವ ಲಕ್ಷಣಗಳಿವೆ. ಹಾಗಿದ್ದಲ್ಲಿ ಉಭಯ ತಂಡಗಳ ಬಲಾಬಲ ಹೇಗಿದೆ ಎಂದು ನೋಡೋಣ.

ಪಂದ್ಯದ ವಿವರ:

ಐಪಿಎಲ್ 2022ರ (IPL 2022) 15ನೇ ಆವೃತ್ತಿಯಲ್ಲಿ ಇಂದು 2 ಪಂದ್ಯಗಳು ನಡೆಯಲಿದೆ. 2ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ (LSG vs RR) ಪಂದ್ಯ ನಡೆಯಲಿದೆ. ಈ ಪಂದ್ಯವು ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ.

ಪಿಚ್ ವರದಿ:

ಬ್ರೆಬೋರ್ನ್ ಸ್ಟೇಡಿಯಂ ಸ್ಥಳದಲ್ಲಿ ಆಡಿದ ಕೊನೆಯ ಪಂದ್ಯದಲ್ಲಿ ಹೆಚ್ಚಿನ ಸ್ಕೋರಿಂಗ್ ಮುಖಾಮುಖಿ ಆಗಿತ್ತು. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ನಿರೀಕ್ಷೆಯಿದೆ.

ಇದನ್ನೂ ಓದಿ: IPL 2022 CSK vs GT: ಬಲಿಷ್ಠ ಗುಜರಾತ್ ತಂಡಕ್ಕೆ ಚೆನ್ನೈ ಸವಾಲ್, ಹೇಗಿರಲಿದೆ ಉಭಯ ತಂಡಗಳ ಪ್ಲೇಯಿಂಗ್ 11

LSG vs RR ಹೆಡ್​ ಟು ಹೆಡ್​:

ಉಭಯ ತಂಡಗಳು ಎರಡೂ ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದು, ಯಾವುದೇ ಹಳೆಯ ಅಂಕಿಅಂಶಗಳು ದಾಖಲಾಗಿಲ್ಲ. ಹೀಗಾಗಿ ಉಭಯ ತಂಡಗಳು ಈ ಬಾರಿ ಐಪಿಎಲ್ ನಲ್ಲಿ ಹೇಗೆ ಪ್ರದರ್ಶನ ತೋರುತ್ತಿವೆ ಎನ್ನುವುದು ಹೆಚ್ಚು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ.

ಐಪಿಎಲ್ 2022ರಲ್ಲಿ ಉಭಯ ತಂಡಗಳ ಪ್ರದರ್ಶನ:

ಉಭಯ ತಂಡಗಳು ಈ ಬಾರಿ ಐಪಿರಲ್ ನಲ್ಲಿ ಉತ್ತಮ ಪ್ರದರ್ಶನ ತೋರುತ್ತಿದೆ. ಅದರಲ್ಲಿಯೂ ಹೊಸ ತಂಡವಾದ ಲ್ಕನೋ ಸೂಪರ್ ಜೈಂಟ್ಸ್ ಸಖತ್ ಆಗಿ ಆಟವಾಡುತ್ತಿದ್ದು, ಈವರಗೆ ಆಡಿದ 12 ಪಂದ್ಯದಲ್ಲಿ 8ರಲ್ಲಿ ಗೆದ್ದು 4ರಲ್ಲಿ ಸೋಲುವ ಮೂಲಕ 16 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಅದರಂತೆ ರಾಜಸ್ಥಾನ್ ರಾಯಲ್ಸ್ ಸಹ ಆಡಿರುವ 12 ಪಂದ್ಯದಲ್ಲಿ 7ರಲ್ಲಿ ಗೆದ್ದು, 5ರಲ್ಲಿ ಸೋಲುವ ಮೂಲಕ 14 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ.

ಇದನ್ನೂ ಓದಿ: IPL 2022 KKR: ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಬಿಗ್ ಶಾಕ್, ಸ್ಟಾರ್ ಆಲ್​ರೌಂಡರ್ ಟೂರ್ನಿಯಿಂದ ಔಟ್

LSG vs RR ಸಂಭಾವ್ಯ ತಂಡ:

ಲಕ್ನೋ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್ (WK), ಕೆಎಲ್ ರಾಹುಲ್ (c), ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಆಯುಷ್ ಬಡೋನಿ, ಮಾರ್ಕಸ್ ಸ್ಟೋನಿಸ್, ಜೇಸನ್ ಹೋಲ್ಡರ್, ಕರಣ್ ಶರ್ಮಾ / ರವಿ ಬಿಷ್ಣೋಯ್, ದುಷ್ಮಂತ ಚಮೀರಾ, ಅವೇಶ್ ಖಾನ್, ಮೊಹ್ಸಿನ್ ಖಾನ್

ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (c & wk), ದೇವದತ್ ಪಡಿಕ್ಕಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಕುಲದೀಪ್ ಸೇನ್.
Published by:shrikrishna bhat
First published: