IPL 2022 MI vs KKR: ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲ್ಲುತ್ತಾ ಕೋಲ್ಕತ್ತಾ? ಹೇಗಿದೆ ಉಭಯ ತಂಡಗಳ ಪ್ಲೇಯಿಂಗ್ 11

ಐಪಿಎಲ್ 2022ರ (IPL 2022) 15ನೇ ಆವೃತ್ತಿಯ 56ನೇ ಪಂದ್ಯದಲ್ಲಿ ಇಂದು ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (MI vs KKR) ತಂಡಗಳು ಸೆಣಸಾಡಲಿವೆ.

MI vs KKR

MI vs KKR

  • Share this:
ಐಪಿಎಲ್ 2022ರ (IPL 2022) 15ನೇ ಆವೃತ್ತಿಯ 56ನೇ ಪಂದ್ಯದಲ್ಲಿ ಇಂದು ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (MI vs KKR) ತಂಡಗಳು ಸೆಣಸಾಡಲಿವೆ. ಈ ಪಂದ್ಯವು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇನ್ನು, ಈಗಾಗಲೇ ಟೂರ್ನಿಯಿಂದ ಹೊರಬಿದ್ದಿರುವ ರೋಹಿತ್ ಶರ್ಮಾ (Rohit Sharma) ನಾಯತಕತ್ವದ ಮುಂಬೈ ಇಂಡಿಯನ್ಸ್ ತಂಡಕ್ಕೆ ಇಂದಿನ ಪಂದ್ಯ ಔಪಚಾರಿಕವಾಗಿದ್ದು, ಕೋಲ್ಕತ್ತಾ ನೈಟ್ ರೈಡರ್ಸ್​ ಗೆ (KKR) ಈ ಪಂದ್ಯ ಮಹತ್ವದ್ದಾಗಿದೆ. ಪ್ಲೇ ಆಫ್ ಹಂತಕ್ಕೆ ತಲುಪಬೇಕಾದಲ್ಲಿ ಕೋಲ್ಕತ್ತಾ ತಂಡವು ಇಂದಿನ ಪಂದ್ಯವನ್ನು ಉತ್ತಮ ರನ್ ರೇಟ್ ನೊಂದಿಗೆ ಗೆಲಲ್ಲೇ ಬೇಕಾದ ಅನಿವಾರ್ಯತೆ ಎದುರಾಗಿದೆ. ಹಾಗಿದ್ದಲ್ಲಿ ಉಭಯ ತಂಡಗಳ ಬಲಾಬಲ ಹೇಗಿದೆ ಎಂದು ನೋಡೋಣ.

ಪಂದ್ಯದ ವಿವರ:

ಐಪಿಎಲ್ 2022ರ 56ನೇ ಪಂದ್ಯದಲ್ಲಿ ಇಂದು ಮುಂಬೈ ಇಂಡಿಯನ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಸೆಣಸಾಡಲಿವೆ. ಈ ಪಂದ್ಯವು ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ.

ಪಿಚ್ ವರದಿ:

ಡಿವೈ ಪಾಟೀಲ್ ಮೈದಾನ ಹೆಚ್ಚಾಗಿ ಬ್ಯಾಟರ್‌ಗಳು ಮತ್ತು ಬೌಲರ್‌ಗಳಿಗೆ ಸಮಾನವಾಗಿ ಸಹಾಯಕವಾಗಿದೆ. ಆದರೆ ಇದು ಸಂಜೆಯ ಆಟವಾದ್ದರಿಂದ ತೇವಾಂಶದ ಮಟ್ಟವು ಹೆಚ್ಚಾಗುವ ನಿರೀಕ್ಷೆಯಿದ್ದು, ಇದರ ಜೊತೆಗೆ ಇಬ್ಬನಿ ಅಂಶವು ಇನ್ಆನಷ್ದ್ದಟು ಪರಿಣಾಮ ಬೀರಲಿದೆ. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಟಡಿಕೊಳ್ಳುವ ಸಾಧ್ಯತೆ ಇದೆ.

ಇದನ್ನೂ ಓದಿ: ಇಂಗ್ಲೆಂಡ್ ನಂತರ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ Team India, ಸಂಪೂರ್ಣ ವೇಳಾಪಟ್ಟಿ ಬಿಡುಗಡೆ

MI vs KKR ಹೆಡ್ ಟು ಹೆಡ್:

ಮುಂಬೈ ಇಂಡಿಯನ್ಸ್ ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಈವರೆಗೆ ಐಪಿಎಲ್ ನಲ್ಲಿ ಒಟ್ಟು 30 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ 22 ಬಾರಿ ಮುಂಬೈ ಗೆದ್ದರೆ, ಕೇವಲ 8 ಬಾರಿ ಕೋಲ್ಕತ್ತಾ ಗೆದ್ದಿದೆ. ಕಳೆದ ಬಾರಿ ನಡೆದ 1 ಪಂದ್ಯವನ್ನೂ ಸಹ ಮುಂಬೈ ಗೆದ್ದುಕೊಂಡಿದೆ. ಅಂಕಿಅಂಶಗಳ ಪ್ರಕಾರ ಕೋಲ್ಕತ್ತಾ ಎದುರು ಮುಂಬೈ ಹೆಚ್ಚು ಬಲಿಷ್ಠವಾಗಿ ಕಾಣುತ್ತದೆ. ಆದರೆ ಈ ಬಾರಿಯ ಪ್ರದರ್ಶನ ಎದುರು ಕೋಲ್ಕತ್ತಾ ಸ್ವಲ್ಪ ಬಲಿಷ್ಠವಾಗಿದೆ.

ಐಪಿಎಲ್ 2022ರಲ್ಲಿ ಉಭಯ ತಂಡಗಳ ಪ್ರದರ್ಶನ:

ಇನ್ನು, ಈ ಬಾರಿ ಐಪಿಎಲ್ ನಲ್ಲಿ ಈಗಾಗಲೇ ಮುಂಬೈ ಇಂಡಿಯನ್ಸ್ ತಂಡವು ಟೂರ್ನಿಯಿಂದ ಹೊರಬಿದ್ದಿದೆ. ಆಡಿರುವ ಒಟ್ಟು 10 ಪಂದ್ಯದಲ್ಲಿ ಕೇವಲ 2ರಲ್ಲಿ ಗೆದ್ದು 8ರಲ್ಲಿ ಸೋಲುವ ಮೂಲಕ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ಸಹ ಸಾಧಾರಣ ಪ್ರದರ್ಶನ ತೋರುತ್ತಿದ್ದು, ಆಡಿರುವ ಒಟ್ಟು 11 ಪಂದ್ಯದಲ್ಲಿ 4ರಲ್ಲಿ ಗೆದ್ದು 7ರಲ್ಲಿ ಸೋಲುವ ಮೂಲಕ 8 ಅಂಕಗಳೊಂದಿಗೆ 8ನೇ ಸ್ಥಾನದಲ್ಲಿದೆ. ಕೋಲ್ಕತ್ತಾ ಪ್ಲೇ ಆಫ್ ಹಂತಕ್ಕೆ ತಲುಪಬೇಕಾದ್ದಲ್ಲಿ ಇಂದಿನ ಪಂದ್ಯ ಸೇರಿ ಮುಂದಿನ ಎಲ್ಲಾ ಪಂದ್ಯಗಳನ್ನೂ ಹೆಚ್ಚಿನ ರನ್ ರೇಟ್​ ನಲ್ಲಿ ಗೆಲ್ಲಬೇಕಿದೆ.

ಇದನ್ನೂ ಓದಿ: IPL 2022: ಗ್ರೀನ್ ಜರ್ಸಿಯಲ್ಲಿ ಕಣಕ್ಕಿಳಿಯಲಿರುವ RCB, ಈ ಜರ್ಸಿಯ ವಿಶೇಷತೆ ಏನು ಗೊತ್ತಾ?

MI vs KKR ಸಂಭಾವ್ಯ ತಂಡ:

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (c), ಇಶಾನ್ ಕಿಶನ್ (WK), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಕೀರಾನ್ ಪೊಲಾರ್ಡ್, ಡೇನಿಯಲ್ ಸಾಮ್ಸ್, ಮುರುಗನ್ ಅಶ್ವಿನ್, ಕುಮಾರ್ ಕಾರ್ತಿಕೇಯ, ಜಸ್ಪ್ರೀತ್ ಬುಮ್ರಾ, ರಿಲೆ ಮೆರೆಡಿತ್.

ಕೋಲ್ಕತ್ತಾ ನೈಟ್ ರೈಡರ್ಸ್: ಅಜಿಂಕ್ಯ ರಹಾನೆ, ವೆಂಕಟೇಶ್ ಅಯ್ಯರ್, ಸ್ಯಾಮ್ ಬಿಲ್ಲಿಂಗ್ಸ್ (WK), ಶ್ರೇಯಸ್ ಅಯ್ಯರ್ (c), ನಿತೀಶ್ ರಾಣಾ, ರಿಂಕು ಸಿಂಗ್, ಅನುಕುಲ್ ರಾಯ್, ಆಂಡ್ರೆ ರಸೆಲ್, ಸುನಿಲ್ ನರೈನ್, ಟಿಮ್ ಸೌಥಿ, ಶಿವಂ ಮಾವಿ/ಉಮೇಶ್ ಯಾದವ್.
Published by:shrikrishna bhat
First published: