IPL 2022 PBKS vs RR: ಪಂಜಾಬ್ ತಂಡಕ್ಕೆ ರಾಜಸ್ಥಾನ್ ಸವಾಲ್, ಹೇಗಿದೆ ಉಭಯ ತಂಡಗಳ ಬಲಾಬಲ

ಐಪಿಎಲ್ 2022ರ (IPL 2022) 15ನೇ ಆವೃತ್ತಿಯ 52ನೇ ಪಂದ್ಯದಲ್ಲಿ ಇಂದು ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಪಂಜಾಬ್ ಕಿಂಗ್ಸ್ (PBKS) ತಂಡಗಳು ಸೆಣಸಾಡಲಿವೆ.

PBKS vs RR

PBKS vs RR

  • Share this:
ಐಪಿಎಲ್ 2022ರ (IPL 2022) 15ನೇ ಆವೃತ್ತಿಯ 52ನೇ ಪಂದ್ಯದಲ್ಲಿ ಇಂದು ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಪಂಜಾಬ್ ಕಿಂಗ್ಸ್ (PBKS) ತಂಡಗಳು ಸೆಣಸಾಡಲಿವೆ. ಮುಂಬೈನ (Mumbai) ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿವೆ. ಈಗಾಗಲೇ ಪ್ಲೇ ಆಫ್ ಹಂತಗಳು ಅಂತಿಮ ಹಂತಕ್ಕೆ ತಲುಪಿದ್ದು, ರಾಜಸ್ಥಾನ ಮತ್ತು ಪಂಜಾಬ್ ತಂಡಗಳು ಪ್ಲೇ ಆಫ್ ಗಾಗಿ ಇಂದಿನ ಪಂದ್ಯ ಎರಡೂ ತಂಡಗಳಿಗೂ ಮಹತ್ವದ್ದಾಗಿದೆ. ಹೀಗಾಗಿ ಇಂದಿನ ಪಂದ್ಯದ ಮೇಲೆ ಹೆಚ್ಚಿನ ನಿರೀಕ್ಷೆಗಳಿವೆ. ಈಗಾಗಲೇ ಟಾಸ್ ಗೆದ್ದಿರುವ ಪಂಜಾಬ್ ತಂಡದ ನಾಯಕ ಮಾಯಾಂಕ್ ಅರ್ಗವಾಲ್ (Mayank Agarwal) ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಪಂದ್ಯದ ವಿವರ:

ಐಪಿಎಲ್ 2022ರ (IPL 2022) 15ನೇ ಆವೃತ್ತಿಯ 52ನೇ ಪಂದ್ಯದಲ್ಲಿ ಇಂದು ರಾಜಸ್ಥಾನ್ ರಾಯಲ್ಸ್ (RR) ವಿರುದ್ಧ ಪಂಜಾಬ್ ಕಿಂಗ್ಸ್ (PBKS) ತಂಡಗಳು ಸೆಣಸಾಡಲಿವೆ. ಮುಂಬೈನ (Mumbai) ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿವೆ. ಈಗಾಗಲೇ ಟಾಸ್ ಟಾಸ್ ಗೆದ್ದಿರುವ ಪಂಜಾಬ್ ತಂಡದ ನಾಯಕ ಮಾಯಾಂಕ್ ಅರ್ಗವಾಲ್ (Mayank Agarwal) ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಪಿಚ್ ವರದಿ:
ವಾಂಖೆಡೆ ಸ್ಟೇಡಿಯಂ ಕೆಲವು ಹೆಚ್ಚಿನ ಸ್ಕೋರ್ ಆಗುವ ನಿರೀ್ಕಷೆಯಿದೆ. ಅಲ್ಲದೇ ಮದ್ಯಾಹ್ನದ ಪಂದ್ಯವಾಗಿರುವುದರಿಂದ ತೇವಾಂಶ ಹೆಚ್ಚು ಪರಿಣಾಮ ಬೀರುವುದಿಲ್ಲ.

ಇದನ್ನೂ ಓದಿ: IPL 2022 GT vs MI: ಸತತ 2ನೇ ಸೋಲು ಕಂಡ ಗುಜರಾತ್, ಗೆದ್ದು ಬೀಗಿದ ಮುಂಬೈ ಇಂಡಿಯನ್ಸ್

ಉಭಯ ತಂಡಗಳ ಐಪಿಎಲ್ 2022ರ ಪ್ರದರ್ಶನ:

ಮಯಾಂಕ್ ಅಗರ್ವಾಲ್ ನೇತೃತ್ವದ ಪಂಜಾಬ್ ಕಿಂಗ್ಸ್ ಟೂರ್ನಿಯಲ್ಲಿ ಇದುವರೆಗೆ 10 ಪಂದ್ಯಗಳನ್ನು ಆಡಿದೆ. ಅವರು 5 ಗೆಲುವು ಮತ್ತು 5 ಸೋಲುಗಳನ್ನು ಹೊಂದಿದ್ದಾರೆ ಮತ್ತು 10 ಅಂಕಗಳನ್ನು ಹೊಂದಿದ್ದಾರೆ. ರಾಜಸ್ಥಾನ್ ರಾಯಲ್ಸ್ ತಂಡವನ್ನು ಸಂಜು ಸ್ಯಾಮ್ಸನ್ ಮುನ್ನಡೆಸುತ್ತಿದ್ದಾರೆ. 10 ಪಂದ್ಯಗಳಲ್ಲಿ 6 ಗೆಲುವು ಮತ್ತು 4 ಸೋಲುಗಳೊಂದಿಗೆ, ಅವರು ಅವರೊಂದಿಗೆ 12 ಅಂಕಗಳನ್ನು ಹೊಂದಿದ್ದಾರೆ.

PBKS vs RR ಹೆಡ್ ಟು ಹೆಡ್​:

ಪಂಜಾಬ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡವು ಈವರೆಗೆ ಒಟ್ಟು 23 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಪಂಜಾಬ್ 10 ಮತ್ತು ರಾಜಸ್ಥಾನ್ 13 ಪಂದ್ಯಗಳಲ್ಲಿ ಗೆದ್ದಿದ್ದು, ಅಂಕಿಅಂಶಗಳ ಪ್ರಕಾರ ರಾಜಸ್ಥಾನ್ ತಂಡವು ಹೆಚ್ಚು ಪ್ರಭಲವಾಗಿದೆ. ಕಳೆದ ವರ್ಷದಲ್ಲಿ ನಡೆದ 2 ಪಂದ್ಯದಲ್ಲಿ ಉಭಯ ತಂಡಗಳು ತಲಾ 1 ಪಂದ್ಯವನ್ನು ಗೆದ್ದಿದೆ.

ಇದನ್ನೂ ಓದಿ: IPL 2022: ಐಪಿಎಲ್ ಇತಿಹಾಸದಲ್ಲಿ 2ನೇ ಅತಿ ವೇಗದ ಬಾಲ್ ಮಾಡಿದ ಭಾರತೀಯ ಬೌಲರ್

PBKS vs RR ಸಂಭಾವ್ಯ ತಂಡ:

ಪಂಜಾಬ್ ಕಿಂಗ್ಸ್: ಮಯಾಂಕ್ ಅಗರ್ವಾಲ್ (c), ಶಿಖರ್ ಧವನ್, ಜಾನಿ ಬೈರ್‌ಸ್ಟೋ, ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (WK), ರಿಷಿ ಧವನ್, ಕಗಿಸೊ ರಬಾಡ, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್, ಸಂದೀಪ್ ಶರ್ಮಾ.

ರಾಜಸ್ಥಾನ್ ರಾಯಲ್ಸ್: ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (c & wk), ಕರುಣ್ ನಾಯರ್ / ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಕುಲದೀಪ್ ಸೇನ್.
Published by:shrikrishna bhat
First published: