ಐಪಿಎಲ್ 2022ರ (IPL 2022) 15ನೇ ಆವೃತ್ತಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಇಂದು ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ತಂಡಗಳು ಸೆಣಸಾಡಲಿವೆ. ಇಂದಿನ ಪಂದ್ಯವು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ (Narendra Modi Stadium) ನಡೆಯಲಿದೆ. ಎರಡೂ ತಂಡಗಳು ಈ ಋತುವಿನಲ್ಲಿ ಉತ್ತಮ ಪ್ರದರ್ಶನ ನೀಡಿವೆ. ಹೀಗಾಗಿ ಈ ಪಂದ್ಯದ ಮೇಲೆ ಹೆಚ್ಚಿನ ನಿರೀಕ್ಷೆಯಿದೆ. ರಾಜಸ್ಥಾನ ಮತ್ತು RCB ಎರಡಕ್ಕೂ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ವಿಜೇತ ತಂಡ ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಆಡಲಿದೆ. ಗುಜರಾತ್ ಟೈಟಾನ್ಸ್ ಮೊದಲ ಕ್ವಾಲಿಫೈಯರ್ ನಲ್ಲಿ ರಾಜಸ್ಥಾನವನ್ನು ಸೋಲಿಸಿತ್ತು. ಆರ್ಸಿಬಿ ಎಲಿಮಿನೇಟರ್ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ಅನ್ನು ಸೋಲಿಸಿದೆ.
ಪಂದ್ಯದ ವಿವರ:
ಐಪಿಎಲ್ 2022ರ 15ನೇ ಆವೃತ್ತಿಯ ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಾಡಲಿವೆ. ಇಂದಿನ ಪಂದ್ಯವು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಟಾಸ್ ಮತ್ತು 7:30ಕ್ಕೆ ಪಂದ್ಯ ಆರಂಭವಾಗಲಿದೆ.
ಪಿಚ್ ವರದಿ:
ಈ ಐಪಿಎಲ್ ಪಂದ್ಯಾವಳಿಯ ಮೊದಲ ಪಂದ್ಯ ಇದಾಗಿದೆ. ಇನ್ನು, ಪಿಚ್ ಬ್ಯಾಟರ್ಗಳಿಗೆ ಹೆಚ್ಚಿನ ಬೆಂಬಲ ನೀಡುವ ನಿರೀಕ್ಷೆಯಿದೆ. ಮಧ್ಯಮ ಓವರ್ಗಳಲ್ಲಿ ಸ್ಪಿನ್ನರ್ಗಳು ಪ್ರಮುಖ ಪಾತ್ರ ವಹಿಸಬಹುದು. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ: Rajat Patidar: RCB ಆಟಗಾರನ ಬದುಕು ಬದಲಿಸಿತು ಒಂದೇ ಒಂದು ಫೋನ್ ಕಾಲ್; IPLಗಾಗಿ ಮದುವೆ ಪೋಸ್ಟ್ಪೋನ್
RR vs RCB ಹೆಡ್ ಟು ಹೆಡ್:
ರಾಜಸ್ಥಾನ್ ಮತ್ತು ಬೆಂಗಳೂರು ತಂಡಗಳು ಈವರೆಗೆ ಐಪಿಎಲ್ ನಲ್ಲಿ 24 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ 11 ರಾಜಸ್ಥಾನ್ ಮತ್ತು 13 ಪಂದ್ಯಗಳನ್ನು ಆರ್ಸಿಬಿ ಗೆದ್ದಿದೆ. ಅಲ್ಲದೇ ಈ ಬಾರಿ 2 ಸಲ ಮುಖಾಮುಖಿಯಾಗಿದ್ದು, ಉಭಯ ತಂಡಗಳು ತಲಾ ಒಂದೊಂದು ಪಂದ್ಯಗಳನ್ನು ಗೆದ್ದಿದೆ.
ಐಪಿಎಲ್ 2022ರಲ್ಲಿ ಉಭಯ ತಂಡಗಳ ಪ್ರದರ್ಶನ:
ರಾಜಸ್ಥಾನ್ ರಾಯಲ್ಸ್ ಲೀಗ್ ಹಂತದಲ್ಲಿ 14 ಪಂದ್ಯಗಳಲ್ಲಿ 9 ರಲ್ಲಿ ಗೆದ್ದು 5 ರಲ್ಲಿ ಸೋತಿದೆ. ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿತ್ತು. ಏತನ್ಮಧ್ಯೆ, ಆರ್ಸಿಬಿ 14 ಪಂದ್ಯಗಳಲ್ಲಿ 8ರಲ್ಲಿ ಗೆಲುವು ಮತ್ತು 6 ಸೋಲುಗಳೊಂದಿಗೆ ನಾಲ್ಕನೇ ಸ್ಥಾನದ ಮೂಲಕ ಫ್ಲೇ ಆಫ್ ಪ್ರವೇಶಿಸಿತ್ತು. ಇನ್ನು ಇಂದಿನ ಪಂದ್ಯದಲ್ಲಿ ಆರ್ಸಿಬಿ ಪರ ರಜತ್ ಪಟೆದಾರ್ ಮತ್ತು ರಾಜಸ್ಥಾನ್ ಪರ ಬಟ್ಲರ್ ಆಟದ ಮೇಲೆ ಹೆಚ್ಚಿನ ನಿರೀಕ್ಷೆಗಳಿದೆ.
ಇದನ್ನೂ ಓದಿ: IPL 2022 RCB: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ವಿರಾಟ್ ಅಭಿಮಾನಿ, ವಿಡಿಯೋ ವೈರಲ್
RR vs RCB ಸಂಭವನೀಯ ತಂಡ:
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (c), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (WK), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್ವುಡ್, ಮೊಹಮ್ಮದ್ ಸಿರಾಜ್.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (c & wk), ದೇವದತ್ ಪಡಿಕ್ಕಲ್, ರವಿಚಂದ್ರನ್ ಅಶ್ವಿನ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಓಬೇದ್ ಮೆಕಾಯ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ