ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ ರಾಯಲ್ಸ್ (RCB vs RR) ನಡುವಿನ ಎರಡನೇ ಕ್ವಾಲಿಫೈಯರ್ ಪಂದ್ಯಕ್ಕೆ ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಗೆಲ್ಲುವ ತಂಡ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ (GT) ವಿರುದ್ಧ ಆಡಲಿದೆ. ಎರಡೂ ತಂಡಗಳಿಗೆ ಈ ನಿರ್ಣಾಯಕ ಪಂದ್ಯಕ್ಕೂ ಮುನ್ನ RCB ತಂಡಕ್ಕೆ ಆಘಾತ ಎದುರಾಗಿತ್ತು. ಆರ್‌ಸಿಬಿಯ ಪ್ರಮುಖ ಆಟಗಾರ ದಿನೇಶ್ ಕಾರ್ತಿಕ್ (Dinesh Karthik) ನಿಯಮ ಉಲ್ಲಂಘಿಸಿದ ಆರೋಪ ಸಾಬೀತಾಗಿದೆ. ಅಲ್ಲದೇ ಈ ವೇಳೆ ಇಂದಿನ ಪ್ರಮುಖ ಪಂದ್ಯದಲ್ಲಿ ಆರ್ಸಿಬಿ ಪರ ದಿನೇಶ್ ಕಾರ್ತಿಕ್ ಕಣಕ್ಕೀಳಿಯಲಿದ್ದಾರೋ ಇಲ್ಲವವೋ ಎಂಬ ಸಂಶಯ ಮೂಡಿತ್ತು. ಆದರೆ ಇದಕ್ಕೆ ಉತ್ತರ ಸಿಕ್ಕಿದ್ದು, ಕಾರ್ತಿಕ್ ಇಂದಿನ ಪಂದ್ಯವನ್ನು ಆಡುತ್ತಿರುವುದಾಗಿ ತಿಳಿದುಬಂದಿದೆ.
ನಿಯಮ ಉಲ್ಲಂಘಿಸಿದ ಕಾರ್ತಿಕ್:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ ನಡುವಿನ ಎಲಿಮಿನೇಟರ್ ಪಂದ್ಯ ಬುಧವಾರ ಕೋಲ್ಕತ್ತಾದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಕಾರ್ತಿಕ್ ನಿಯಮ ಉಲ್ಲಂಘಿಸಿರುವುದು ಬಹಿರಂಗವಾಗಿದೆ. ಈ ವೇಳೆ ಪಂದ್ಯದ ಅಧಿಕಾರಿಗಳು ಕಾರ್ತಿಕ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ಆರ್ಟಿಕಲ್ 2.3 ರ ಅಡಿಯಲ್ಲಿ ಲಿವರ್ 1 ಪ್ರಕರಣದಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಕಾರ್ತಿಕ್ ಕೂಡ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ ಎಂದು ಐಪಿಎಲ್ ಬಿಡುಗಡೆ ಮಾಡಿರುವ ಹೇಳಿಕೆ ತಿಳಿಸಿದೆ. ಲೆವೆಲ್ 1 ಪ್ರಕರಣದಲ್ಲಿ ಮ್ಯಾಚ್ ರೆಫರಿಯ ನಿರ್ಧಾರವೇ ಅಂತಿಮವಾಗಿರುತ್ತದೆ. ಆದರೆ ಸದ್ಯ ಮ್ಯಾಚ್ ರೆಫರಿಯ ನಿರ್ಧಾರದಂತೆ ಕಾರ್ತಿಕ್ ಗೆ ಕೇವಲ ವಾಗ್ದಂಡನೆ ನೀಡಲಾಗಿದೆ.
ಇದನ್ನೂ ಓದಿ: Jos Buttler: ಜೋಸ್ ಬಟ್ಲರ್ ನನ್ನ 2ನೇ ಪತಿ, ವೈರಲ್ ಆಯ್ತು ಸ್ಟಾರ್ ಕ್ರಿಕೆಟಿಗನ ಪತ್ನಿ ಹೇಳಿಕೆ
ಅಷ್ಟಕ್ಕೂ ಕಾರ್ತಿಕ್ ಮಾಡಿದ್ದಾದರೂ ಏನು?:
ಲಕ್ನೋ ವಿರುದ್ಧದ ಪಂದ್ಯದಲ್ಲಿ ರಜತ್ ಪಾಟಿದಾರ್ ಮತ್ತು ದಿನೇಶ್ ಕಾರ್ತಿಕ್ ಉತ್ತಮ ಜೊತೆಯಾಟವಾಡಿದರು. ಆಧರೆ ಬ್ಯಾಟಿಂಗ್ ವೇಳೆ ದಿನೇಶ್ ಕಾರ್ತಿಕ್ ಬಳಸಿದ ಅಶ್ಲೀಲ ಪದವೊಂದು ಸ್ಟಂಪ್ ಮೈಕ್ ನಲ್ಲಿ ದಾಖಲಾಗಿದೆ. ಇದನ್ನು ಪರಿಶೀಲಿಸಿದ ಮ್ಯಾಚ್ ರೆಫರಿ ದಿನೇಶ್ ಕಾರ್ತಿಕ್ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಆದರೆ ಅಂತಿಮವಾಗಿ ಕೇವಲ ಕಾರ್ತಿಕ್ ಗೆ ವಾಗ್ದಂಡನೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಇಂದಿನ ಪಂದ್ಯ ಆಡ್ತಾರಾ ಕಾರ್ತಿಕ್?:
ಹೌದು, ಐಪಿಎಲ್ ನಿಯಮ ಉಲ್ಲಂಘಿಸಿರುವುದಕ್ಕೆ ಇಂದಿನ ಪಂದ್ಯವನ್ನು ಆಡ್ತಾರಾ ಕಾರ್ತಿಕ್ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮಾಡಿದೆ. ಆಧರೆ ಇದಕ್ಕೆ ಉತ್ತರವೆಂಬಂತೆ ಇಂದಿನ ಪಮದ್ಯದಲ್ಲಿ ಕಾರ್ತಿಕ್ ಆಡುತ್ತಿರುವುದಾಗಿ ತಿಳಿದುಬಂದಿದೆ. ಅಲ್ಲದೇ ಕಾರ್ತಿಕ್ ಗೆ ಕೇಳವ ವಾಗ್ದಂಡನೆ ಮಾಡಲಾಗಿದ್ದು, ಯಾವುದೇ ರಿತಿಯಲ್ಲಿ ಪಂದ್ಯದಿಂದ ನಿಷೇಧ ಹೇರಲಾಗಿಲ್ಲ ಎಂದು ತಿಳಿದುಬಂದಿದೆ. ಹೀಗಾಗಿ ರಾಜಸ್ಥಾನ್ ವಿರುದ್ಧದ ಪಂದ್ಯದಲ್ಲಿ ಡಿಕೆ ಕಣಕ್ಕಿಳಿಯಲಿದ್ದಾರೆ.
ಇದನ್ನೂ ಓದಿ: Harbhajan Singh: ಈ ಬಾರಿ ಕಪ್ ಗೆಲ್ಲೋದು RCB ತಂಡವಂತೆ, ಭವಿಷ್ಯ ನುಡಿದ ಹರ್ಭಜನ್ ಸಿಂಗ್
RR vs RCB ಸಂಭವನೀಯ ತಂಡ:
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (c), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (WK), ಶಹಬಾಜ್ ಅಹ್ಮದ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಜೋಶ್ ಹ್ಯಾಜಲ್‌ವುಡ್, ಮೊಹಮ್ಮದ್ ಸಿರಾಜ್.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (c & wk), ದೇವದತ್ ಪಡಿಕ್ಕಲ್, ರವಿಚಂದ್ರನ್ ಅಶ್ವಿನ್, ಶಿಮ್ರಾನ್ ಹೆಟ್ಮೆಯರ್, ರಿಯಾನ್ ಪರಾಗ್, ಟ್ರೆಂಟ್ ಬೌಲ್ಟ್, ಪ್ರಸಿದ್ಧ್ ಕೃಷ್ಣ, ಯುಜ್ವೇಂದ್ರ ಚಾಹಲ್, ಓಬೇದ್ ಮೆಕಾಯ್.
ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್:
ಇನ್ನು, ಪಂದ್ಯ ಆರಂಭವಾಗಲಿದ್ದು, ಈಗಾಗಲೇ ಟಾಸ್ ಗೆದ್ದ ರಾಜಸ್ಥಾನ್ ತಂಡದ ನಾಯಕ ಸಂಜು ಸ್ಯಾಮ್ಸನ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರ್ಸಿಬಿ ಮೊಲದು ಬ್ಯಾಟಿಂಗ್ ಮಾಡಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ