ಐಪಿಎಲ್ 2022ರ (IPL 2022) 15ನೇ ಆವೃತ್ತಿಯ 54ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ (SRH) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಗಳು ಸೆಣಸಾಡಲಿವೆ. ಈ ಪಂದ್ಯವು ಮುಂಬೈನ (Mumbai) ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆಯಲಿದೆ. ಇನ್ನು, ಪಾಫ್ ಡುಪ್ಲೇಸಿಸ್ ನಾಯಕತ್ವದ ಆರ್ಸಿಬಿ ತಂಡಕ್ಕೆ ಹಾಗೂ ಕೇನ್ ವಿಲಿಯಂಸನ್ ನೇತೃತ್ವದ ಹೈದರಾಬಾದ್ ತಂಡಕ್ಕೆ ಇಂದಿನ ಪಂದ್ಯ ಬಹಳ ಪ್ರಮುಖವಾಗಿದ್ದು, ಬೆಂಗಳೂರು ತಂಡವು ಇಂದಿನ ಪಂದ್ಯ ಗೆಲ್ಲುವ ಮೂಲಕ ಪ್ಲೇ ಆಫ್ ಹಂತದ ಹಾದಿಯನ್ನು ಸುಗಮಗೊಳಿಸಕೊಳ್ಳಬೇಕಿದೆ. ಅಲ್ಲದೇ ಹೈದರಾಬಾದ್ ತಂಡಕ್ಕೂ ಇದೇ ಪರಿಸ್ಥಿತಿ ಇದ್ದು, ಉಭಯ ತಂಡಗಳೆರಡಕ್ಕೂ ಇದು ಮಹತ್ವದ ಪಂದ್ಯವಾಗಿರುವುದರಿಂದ ನಿರೀಕ್ಷೆ ಹೆಚ್ಚಿದೆ. ಹಾಗಿದ್ದರೆ ಉಭಯ ತಂಡಗಳ ಬಲಾಬಲ ಹೇಗಿದೆ ನೋಡೋಣ.
ಪಂದ್ಯದ ವಿವರ:
ಐಪಿಎಲ್ 2022ರ 54ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಸೆಣಸಾಡಲಿವೆ. ಈ ಪಂದ್ಯವು ಮುಂಬೈನ ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಟಾಸ್ ಮತ್ತು 3:30ಕ್ಕೆ ಪಂದ್ಯ ಆರಂಭವಾಗಲಿದೆ.
ಪಿಚ್ ವರದಿ:
ವಾಂಖೆಡೆ ಮೈದಾನವು ಹೆಚ್ಚು ಬ್ಯಾಟ್ಸ್ಮನ್ ಸ್ನೇಹಿಯಾಗಿದ್ದು, ಆದಾಗ್ಯೂ, ಇದು ದಿನದ ಆಟವಾಗಿರುವುದರಿಂದ, ಬ್ಯಾಟಿಂಗ್ ಮಾಡಲು ಟ್ರ್ಯಾಕ್ ಸ್ವಲ್ಪ ಉತ್ತಮವಾಗಬಹುದು. ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.
ಇದನ್ನೂ ಓದಿ: IPL 2022 LSG vs KKR: ಲಕ್ನೋ ದಾಳಿಗೆ ಬೆದರಿದ ಕೋಲ್ಕತ್ತಾ, ಗೆದ್ದು ಬೀಗಿದ ರಾಹುಲ್ ಪಡೆ
SRH vs RCB ಹೆಡ್ ಟು ಹೆಡ್:
ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಈವರೆಗೆ ಐಪಿಎಲ್ ನಲ್ಲಿ ಒಟ್ಟಾರೆಯಾಗಿ 20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದವು. ಇದರಲ್ಲಿ 12 ಪಂದ್ಯ ಹೈದರಾಬಾದ್ ತಂಡ ಗೆದ್ದಿದೆ. ಉಳಿದ 8 ಪಂದ್ಯಗಳಲ್ಲಿ ಬೆಂಗಳೂರು ತಂಡ ಗೆದ್ದಿದೆ. ಕಳೆದ ಬಾರಿ ಆಡಿದ್ದ 1 ಪಂದ್ಯದಲ್ಲಿ ಹೈದರಾಬಾದ್ ಪಂದ್ಯ ಗೆದ್ದಿದೆ.
ಐಪಿಎಲ್ 2022ರಲ್ಲಿ ಉಭಯ ತಂಡಗಳ ಪ್ರದರ್ಶನ:
ಇನ್ನು, ಐಪಿಎಲ್ 2022ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಆಡಿರುವ 11 ಪಂದ್ಯದಲ್ಲಿ 6 ರಲ್ಲಿ ಗೆದ್ದು, 5ರಲ್ಲಿ ಸೋಲುವ ಮೂಲಕ 12 ಅಂಕಗಳೊಂದಿಗೆ 4ನೇ ಸ್ಥಾನದಲ್ಲಿದೆ. ಅದರಂತೆ ಸನ್ ರೈಸರ್ಸ್ ಹೈದರಾಬಾದ್ ತಂಡವು ಆಡಿರುವ ಒಟ್ಟು 10 ಪಂದ್ಯದಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋಲುವ ಮೂಲಕ 10 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
ಇದನ್ನೂ ಓದಿ: ಇಂಗ್ಲೆಂಡ್ ನಂತರ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ Team India, ಸಂಪೂರ್ಣ ವೇಳಾಪಟ್ಟಿ ಬಿಡುಗಡೆ
SRH vs RCB ಸಂಭಾವ್ಯ ತಂಡ:
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (c), ವಿರಾಟ್ ಕೊಹ್ಲಿ, ರಜತ್ ಪಾಟಿದಾರ್, ಗ್ಲೆನ್ ಮ್ಯಾಕ್ಸ್ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (WK), ಮಹಿಪಾಲ್ ಲೊಮ್ರೋರ್, ವನಿಂದು ಹಸರಂಗ, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್ವುಡ್.
ಸನ್ ರೈಸರ್ಸ್ ಹೈದರಾಬಾದ್: ಅಭಿಷೇಕ್ ಶರ್ಮಾ, ಕೇನ್ ವಿಲಿಯಮ್ಸನ್ (c), ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿಕೋಲಸ್ ಪೂರನ್ (WK), ಶಶಾಂಕ್ ಸಿಂಗ್, ಸೀನ್ ಅಬಾಟ್, ಶ್ರೇಯಸ್ ಗೋಪಾಲ್, ಭುವನೇಶ್ವರ್ ಕುಮಾರ್, ಟಿ ನಟರಾಜನ್/ಕಾರ್ತಿಕ್ ತ್ಯಾಗಿ, ಉಮ್ರಾನ್ ಮಲಿಕ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ