• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • CSK vs RCB: ಟಾಸ್​ ಗೆದ್ದ ಬೆಂಗಳೂರು, ಚೆನ್ನೈ ವಿರುದ್ಧ ಬಲಿಷ್ಠ ತಂಡ ಕಣಕ್ಕಿಳಿಸಿದ ಆರ್​ಸಿಬಿ; ಇವತ್ತಿನ​ ಮ್ಯಾಚ್​ ನಮ್ದೇ ಅಂದ್ರು ಫ್ಯಾನ್ಸ್

CSK vs RCB: ಟಾಸ್​ ಗೆದ್ದ ಬೆಂಗಳೂರು, ಚೆನ್ನೈ ವಿರುದ್ಧ ಬಲಿಷ್ಠ ತಂಡ ಕಣಕ್ಕಿಳಿಸಿದ ಆರ್​ಸಿಬಿ; ಇವತ್ತಿನ​ ಮ್ಯಾಚ್​ ನಮ್ದೇ ಅಂದ್ರು ಫ್ಯಾನ್ಸ್

ಆರ್​ಸಿಬಿ vs ಚೆನ್ನೈ

ಆರ್​ಸಿಬಿ vs ಚೆನ್ನೈ

IPL 2023, RCB vs CSK: ಉಭಯ ತಂಡಗಳು ಇದುವರೆಗೆ ನಾಲ್ಕು ಪಂದ್ಯಗಳನ್ನು ಆಡಿದ್ದು, ಎರಡು ಗೆಲುವು ದಾಖಲಿಸಿ ಮೂರನೇ ಗೆಲುವಿನ ನಿರೀಕ್ಷೆಯಲ್ಲಿವೆ. ಈಗಾಗಲೇ ಟಾಸ್​ ಆಗಿದ್ದು, ಟಾಸ್​ ಗೆದ್ದ ಆರ್​ಸಿಬಿ ನಾಯಕ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ.

  • Share this:

ಐಪಿಎಲ್ 2023ರ ಕ್ರೇಜ್ ಉತ್ತುಂಗಕ್ಕೇರಿದೆ. ಇಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M. Chinnaswamy Stadium) ಚೆನ್ನೈ ಸೂಪರ್​ ಕಿಂಗ್ಸ್ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು (CSK vs RCB) ನಡುವಿನ ದೊಡ್ಡ ಪಂದ್ಯ ನಡೆಯಲಿದೆ. ಸಿಎಸ್‌ಕೆ ನಾಯಕ ಎಂಎಸ್ ಧೋನಿ (MS Dhoni) ಮತ್ತು ಆರ್‌ಸಿಬಿಯ ಮಾಜಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ (Virat Kohli) ಮೇಲೆ ಎಲ್ಲರ ಕಣ್ಣು ನೆಟ್ಟಿದೆ. ಅಂಕಪಟ್ಟಿಯಲ್ಲಿ ಎರಡೂ ತಂಡಗಳು ಸಮಬಲದಲ್ಲಿವೆ. ಉಭಯ ತಂಡಗಳು ಇದುವರೆಗೆ ನಾಲ್ಕು ಪಂದ್ಯಗಳನ್ನು ಆಡಿದ್ದು, ಎರಡು ಗೆಲುವು ದಾಖಲಿಸಿ ಮೂರನೇ ಗೆಲುವಿನ ನಿರೀಕ್ಷೆಯಲ್ಲಿವೆ. ಈಗಾಗಲೇ ಟಾಸ್​ ಆಗಿದ್ದು, ಟಾಸ್​ ಗೆದ್ದ ಆರ್​ಸಿಬಿ ನಾಯಕ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ.


ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಆದರೆ ಚೆನ್ನೈ ತಂಡದಲ್ಲಿ ಬದಲಾವಣೆಯಾಗಿದ್ದು, ಸಿಸಾಂಡ ಮಗಾಲಾ ಗಾಯಗೊಂಡಿರುವ ಕಾರಣ ಅವರ ಸ್ಥಾನಕ್ಕೆ ಪತಿರಾನ ತಂಡದಲ್ಲಿ ಆಯ್ಕೆಯಾಗಿದ್ದಾರೆ.


ಪಿಚ್​ ವರದಿ:


ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದು ಋತುವಿನ ನಾಲ್ಕನೇ ಪಂದ್ಯವಾಗಿದೆ. ಮೊದಲ ಮೂರು ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 170ಕ್ಕೂ ಹೆಚ್ಚು ರನ್ ಗಳಿಸುವಲ್ಲಿ ಯಶಸ್ವಿಯಾಗಿತ್ತು. ಇಲ್ಲಿರುವ ಪಿಚ್ ಈ ಆಟದಲ್ಲಿ ಬ್ಯಾಟರ್‌ಗಳಿಗೆ ಹೆಚ್ಚಿನ ಬೆಂಬಲವನ್ನು ನೀಡುತ್ತದೆ. ಹೀಗಾಗಿ ಟಾಸ್​ ಗೆದ್ದ ನಾಯಕ ಮೊದಲು ಬೌಲಿಂಗ್​ ಆಯ್ಕೆ ಮಾಡಬಹುದು.



ಚೆನ್ನೈ- ಆರ್​ಸಿಬಿ ಹೆಡ್-ಟು-ಹೆಡ್:


ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರಸ್ಪರ ಒಟ್ಟು 31 ಐಪಿಎಲ್ ಪಂದ್ಯಗಳನ್ನು ಆಡಿವೆ. ಚೆನ್ನೈ 20 ಪಂದ್ಯಗಳಲ್ಲಿ ಗೆದ್ದರೆ, ಆರ್​ಸಿಬಿ 10 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ವಿರಾಟ್ ಅಂಕಿ-ಅಂಶಗಳು ಅಚ್ಚರಿ ಮೂಡಿಸುತ್ತವೆ. ಈ ಕ್ರೀಡಾಂಗಣದಲ್ಲಿ ಕೊಹ್ಲಿ ಒಟ್ಟು 25 ಅರ್ಧಶತಕಗಳನ್ನು ಗಳಿಸಿದ್ದಾರೆ ಮತ್ತು ವಿರಾಟ್ ಯಾವುದೇ ಒಂದು ಮೈದಾನದಲ್ಲಿ ಇಷ್ಟು ಅರ್ಧಶತಕಗಳನ್ನು ಗಳಿಸಿದ ವಿಶ್ವದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.


ಇದನ್ನೂ ಓದಿ: RCB vs CSK, IPL 2023: ಇಂದು ಟಾಸ್​ ಗೆದ್ದೋರು ಮ್ಯಾಚ್​ ಗೆಲ್ಲೋದು ಫಿಕ್ಸ್! ಲೆಕ್ಕಾಚಾರ ಉಲ್ಟಾ ಮಾಡ್ತಾರಾ ಕಿಂಗ್​ ಕೊಹ್ಲಿ


ವಿರಾಟ್ ಕೊಹ್ಲಿ ಈ ಋತುವಿನಲ್ಲಿ ಇದುವರೆಗೆ 4 ಪಂದ್ಯಗಳಲ್ಲಿ 3 ಶತಕಗಳನ್ನು ಗಳಿಸಿದ್ದಾರೆ. ರಾಜಸ್ಥಾನ ವಿರುದ್ಧದ ಕೊನೆಯ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ದಾಖಲೆ ಬರೆದಿದ್ದರು. ಐಪಿಎಲ್‌ನಲ್ಲಿ ಈ ಮೈದಾನದಲ್ಲಿ 19 ಅರ್ಧಶತಕ ಹಾಗೂ 3 ಶತಕ ಸಿಡಿಸಿದ್ದಾರೆ.


ಐಪಿಎಲ್​ 2023 ಅಂಕಪಟ್ಟಿ:


ಇನ್ನು, ಐಪಿಎಲ್​ 2023ರ 16ನೇ ಸೀಸನ್​ನ ಅಂಕಪಟ್ಟಿಯಲ್ಲಿ 5 ಪಂದ್ಯದಲ್ಲಿ 4 ಪಂದ್ಯ ಗೆದ್ದಿರುವ ರಾಜಸ್ಥಾನ್​ ರಾಯಲ್ಸ್ ಅಗ್ರಸ್ಥಾನದಲ್ಲಿದೆ. ಚೆನ್ನೈ ಮತ್ತು ಬೆಂಗಳೂರು ತಂಡಗಳು ಆಡಿರುವ 4 ಪಂದ್ಯದಲ್ಲಿ 2ರಲ್ಲಿ ಗೆದ್ದು 2ರಲ್ಲಿ ಸೋತು ಕ್ರಮವಾಗಿ ಸಿಎಸ್​ಕೆ 6ನೇ ಸ್ಥಾನ ಮತ್ತು ಆರ್​ಸಿಬಿ 7ನೇ ಸ್ಥಾನದಲ್ಲಿದೆ. ಹೀಗಾಗಿ ಇಂದು ಗೆದ್ದ ತಂಡ ಅಂಕಪಟ್ಟಿಯಲ್ಲಿ ಮೇಲೇರಲಿದೆ.




ಸಿಎಸ್​ಕೆ - ಆರ್​ಸಿಬಿ ಪ್ಲೇಯಿಂಗ್​ 11:


ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಪ್ಲೇಯಿಂಗ್​ 11: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಮಹಿಪಾಲ್ ಲೊಮ್ರೊರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್, ಹರ್ಷಲ್ ಪಟೇಲ್, ವನಿಂದು ಹಸರಂಗ, ವೇಯ್ನ್ ಪಾರ್ನೆಲ್, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್.


ಚೆನ್ನೈ ಸೂಪರ್​ ಕಿಂಗ್ಸ್ ಪ್ಲೇಯಿಂಗ್​ 11: ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ಶಿವಂ ದುಬೆ, ರವೀಂದ್ರ ಜಡೇಜಾ, ಎಂಎಸ್ ಧೋನಿ (w/c),ಮತೀಶ ಪತಿರಾನ, ತುಷಾರ್ ದೇಶಪಾಂಡೆ, ಮಹೀಶ್ ತೀಕ್ಷಣ.

top videos
    First published: