ಐಪಿಎಲ್ 2023ರ (IPL 2023) 29ನೇ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಏಡನ್ ಮಾರ್ಕ್ರಾಮ್ ನೇತೃತ್ವದ ಸನ್ ರೈಸರ್ಸ್ ಹೈದರಾಬಾದ್ (CSK vs SRH) ತಂಡಗಳು ಸೆಣಸಾಡುತ್ತಿವೆ. ಈ ಪಂದ್ಯ ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ (M. A. Chidambaram Stadium) ಆರಂಭವಾಗಿದೆ. ಈ ಋತುವಿನಲ್ಲಿ ಇದುವರೆಗೆ ಎರಡೂ ತಂಡಗಳು 5-5 ಪಂದ್ಯಗಳನ್ನು ಸಮಾನವಾಗಿ ಆಡಿವೆ. ಈ ಪಂದ್ಯದಲ್ಲಿ ಚೆನ್ನೈನ ಸ್ಪಿನ್ನರ್‌ಗಳು ಮತ್ತು ಹೈದರಾಬಾದ್‌ನ ಬ್ಯಾಟ್ಸ್‌ಮನ್‌ಗಳ ನಡುವೆ ಕುತೂಹಲಕಾರಿ ಕದನ ನಡೆಯಲಿದೆ. ಈಗಾಗಲೇ ಟಾಸ್ ಆಗಿದ್ದು, ಟಾಸ್ ಗೆದ್ದ ಚೆನ್ನೈ ತಂಡದ ನಾಯಕ ಎಂಎಸ್ ಧೋನಿ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಚೆನ್ನೈ -ಹೈದರಾಬಾದ್ ಹೆಡ್ ಟು ಹೆಡ್:
ಇನ್ನು, ಚೆಪಾಕ್‌ನಲ್ಲಿ ಎರಡು ತಂಡಗಳ ನಡುವೆ 3 ಬಾರಿ ಮುಖಾಮುಖಿಯಾಗಿದ್ದು, ಮೂರೂ ಬಾರಿ ಚೆನ್ನೈ ಗೆದ್ದಿದೆ. ಅಲ್ಲದೇ ಎರಡೂ ತಂಡಗಳು ಐಪಿಎಲ್‌ನಲ್ಲಿ ಇದುವರೆಗೆ 18 ಬಾರಿ ಮುಖಾಮುಖಿಯಾಗಿದ್ದು, ಅದರಲ್ಲಿ ಚೆನ್ನೈ 13 ಬಾರಿ ಗೆದ್ದಿದ್ದರೆ, ಸನ್‌ರೈಸರ್ಸ್ ಹೈದರಾಬಾದ್ 5 ಪಂದ್ಯಗಳಲ್ಲಿ ವಿಜಯಶಾಲಿಯಾಗಿದೆ. ಕಳೆದ 10 ವರ್ಷಗಳಲ್ಲಿ ಚೆನ್ನೈ ಚೆಪಾಕ್‌ನಲ್ಲಿ ಕೇವಲ 2 ಪಂದ್ಯಗಳಲ್ಲಿ ಸೋತಿದೆ.
ಮುಂಬೈ ಇಂಡಿಯನ್ಸ್ ಹಾಗೂ ಇತ್ತೀಚೆಗಷ್ಟೇ ರಾಜಸ್ಥಾನ್ ರಾಯಲ್ಸ್ ತಂಡ ಚೆನ್ನೈನ ಮನೆಯಲ್ಲಿ ಸದ್ದು ಮಾಡಿತ್ತು. ಕಳೆದ ಪಂದ್ಯದಲ್ಲಿ ಹೈದರಾಬಾದ್ ತಂಡ ಮುಂಬೈ ವಿರುದ್ಧ ಸೋತಿದ್ದರೆ, ಚೆನ್ನೈ ತನ್ನ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸೋಲಿಸಿತು. ಇಂತಹ ಪರಿಸ್ಥಿತಿಯಲ್ಲಿ ಯಾರ ಮೇಲೆ ಯಾರು ಮೇಲುಗೈ ಸಾಧಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.
ಇದನ್ನೂ ಓದಿ: IPL 2023: ಐಪಿಎಲ್ನಿಂದ ನಿಷೇಧಕ್ಕೆ ಒಳಗಾಗ್ತಾರಾ RCB ಕ್ಯಾಪ್ಟನ್? ಇವ್ರ ಹಾದಿಯಲ್ಲೇ ಇದ್ದಾರೆ ಇನ್ನೂ 4 ಸ್ಟಾರ್ ಪ್ಲೇಯರ್ಸ್!
ಪಿಚ್ ವರದಿ:
ಎಂಎ ಚಿದಂಬರಂ ಸ್ಟೇಡಿಯಂನಲ್ಲಿನ ಪಿಚ್ ಹೆಚ್ಚಿನ ಸ್ಕೋರಿಂಗ್ ಮುಖಾಮುಖಿಯನ್ನು ಉಂಟುಮಾಡಬಹುದು. ಈ ಸ್ಥಳದಲ್ಲಿ ಚೇಸಿಂಗ್ ತಂಡವು ಉತ್ತಮ ಗೆಲುವಿನ ಶೇಕಡಾವಾರು ಪ್ರಮಾಣವನ್ನು ಹೊಂದಿದೆ. ಸಾಂಪ್ರದಾಯಿಕವಾಗಿ, ಸ್ಪಿನ್ನರ್‌ಗಳು ಇಲ್ಲಿ ಹೆಚ್ಚು ಆಕ್ರಮಣಕಾರಿಯಾಗಿರುತ್ತಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಚೆನ್ನೈನ ರವೀಂದ್ರ ಜಡೇಜಾ, ಮೋಯಿನ್ ಅಲಿ ಸೇರಿದಂತೆ ಉಭಯ ತಂಡಗಳ ಸ್ಪಿನ್ನರ್ಗಳ ಮೇಲೆ ಸಾಕಷ್ಟು ನಿರೀಕ್ಷೆಯಿದೆ.
ಐಪಿಎಲ್ 2023 ಅಂಕಪಟ್ಟಿ:
ಇನ್ನು, ಐಪಿಎಲ್ 2023ರ ಅಂಕಪಟ್ಟಿ ನೋಡುವುದಾರೆ, ಚೆನ್ನೈ ಸೂಪರ್ ಕಿಂಗ್ಸ್ ತಂಡವು 5 ಪಂದ್ಯದಲ್ಲಿ 3ರಲ್ಲಿ ಗೆದ್ದು 2ರಲ್ಲಿ ಸೋತಿದ್ದು, 6 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಅದೇ ಸಮಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ 5 ಪಂದ್ಯದಲ್ಲಿ 2ರಲ್ಲಿ ಗೆದ್ದು, 3ರಲ್ಲಿ ಸೋತಿದ್ದು 4 ಅಂಕಗಳೊಂದಿಗೆ 9ನೇ ಸ್ಥಾನದಲ್ಲಿದೆ. ಉಳಿದಂತೆ ರಾಜಸ್ಥಾನ್ ತಂಡವು ಮೊದಲ ಸ್ಥಾನದಲ್ಲಿ ಹಾಗೂ ಲಕ್ನೋ ಸೂಪರ್ ಜೈಂಟ್ಸ್ 2ನೇ ಸ್ಥಾನದಲ್ಲಿದೆ.
ಉಳಿದಂತೆ ಕ್ರಮವಾಗಿ 3. ಚೆನ್ನೈ ಸೂಪರ್ ಕಿಂಗ್ಸ್, 4. ಗುಜರಾತ್ ಟೈಟನ್ಸ್, 5. ರಾಯಲ್ ಚಾಲೆಂಜರ್ಸ್ ಬೆಂಗಳೂರು, 6. ಮುಂಬೈ ಇಂಡಿಯನ್ಸ್, 7. ಪಂಜಾಬ್ ಕಿಂಗ್ಸ್, 8. ಕೋಲ್ಕತ್ತಾ ನೈಟ್ ರೈಡರ್ಸ್, 9. ಸನ್ರೈಸನರ್ಸ್ ಹೈದರಾಬಾದ್ ಮತ್ತು ಅಂತಿಮವಾಗಿ 10ನೇ ಸ್ಥಾನದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವಿದೆ.
CSK - SRH ಪ್ಲೇಯಿಂಗ್ 11:
ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ 11: ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಶಿವಂ ದುಬೆ, ಅಂಬಟಿ ರಾಯುಡು, ಮೊಯೀನ್ ಅಲಿ, ರವೀಂದ್ರ ಜಡೇಜಾ, ಎಂಎಸ್ ಧೋನಿ (w/c), ಮಹೇಶ್ ತೀಕ್ಷಣ, ತುಷಾರ್ ದೇಶಪಾಂಡೆ, ಮತೀಶ ಪತಿರಣ.
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಏಡನ್ ಮಾರ್ಕ್ರಾಮ್(ಸಿ), ಹೆನ್ರಿಚ್ ಕ್ಲಾಸೆನ್(ಡಬ್ಲ್ಯೂ), ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ