ಇಂಡಿಯನ್ ಪ್ರೀಮಿಯರ್ ಲೀಗ್ 2023 ಮಾರ್ಚ್ 31 ರಿಂದ ಪ್ರಾರಂಭವಾಗುತ್ತಿದೆ. ಈ ಋತುವಿನ ಮೊದಲ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ (Narendra Modi Stadium) ನಡೆಯಲಿದೆ. ಪಂದ್ಯ ಆರಂಭಕ್ಕೂ ಮುನ್ನವೇ ಅಭಿಮಾನಿಗಳಿಗೆ ದುಃಖದ ಸುದ್ದಿ ಹೊರಬಿದ್ದಿದೆ. ಪ್ರಸ್ತುತ ಭಾರೀ ಮಳೆಯಾಗುತ್ತಿದೆ ಎಂದು ತಿಳಿದುಬಂದಿದೆ. ಮಳೆ ಇದೇ ರೀತಿ ಮುಂದುವರಿದರೆ ಪಂದ್ಯದ ಮೇಲೆ ಕೆಟ್ಟ ಪರಿಣಾಮ ಬೀರಬಹುದು. ಹೀಗಾಗಿ ನಾಳೆಯೂ ಪಂದ್ಯದ ವೇಳೆ ಮಳೆಯಾದ್ದಲ್ಲಿ ಪಂದ್ಯ ರದ್ದಾಗುವ ಸಾಧ್ಯತೆ ಇದೆ. ಆದರೆ ಸದ್ಯ ಮಳೆ ನಿಂತಿದ್ದು, ನಾಳೆ ಸಂಜೆ ವೇಳೆಗೆ ಮತ್ತೆ ಮಳೆಯಾಗುವ ಸಾಧ್ಯತೆ ಇದೆ.
ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿ:
ಐಪಿಎಲ್ 2023 ರ ಮೊದಲ ಪಂದ್ಯದಲ್ಲಿ ಕಳೆದ ವರ್ಷದ ವಿಜೇತ ಗುಜರಾತ್ ಟೈಟಾನ್ಸ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಲಿದೆ. ಉಭಯ ತಂಡಗಳ ನಡುವಿನ ಈ ರೋಚಕ ಕದನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಟಾಸ್‌ಗಾಗಿ ಎರಡೂ ತಂಡಗಳ ನಾಯಕ ಸಂಜೆ 7 ಗಂಟೆಗೆ ಮೈದಾನಕ್ಕೆ ಬರಲಿದ್ದಾರೆ. ಬಳಿಕ ಅರ್ಧ ಗಂಟೆಯ ನಂತರ ಅಂದರೆ 7.30ಕ್ಕೆ ಪಂದ್ಯದ ನಿಜವಾದ ರೋಚಕತೆ ಶುರುವಾಗಲಿದೆ.
Heavy rain at the Narendra Modi Stadium currently. pic.twitter.com/vkVbf8lcZH
— Mufaddal Vohra (@mufaddal_vohra) March 30, 2023
ಗುಜರಾತ್ ಟೈಟಾನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಪ್ರತಿಷ್ಠಿತ ಲೀಗ್‌ನಲ್ಲಿ ಇದುವರೆಗೆ ಒಟ್ಟು ಎರಡು ಪಂದ್ಯಗಳು ನಡೆದಿವೆ. ಈ ವೇಳೆ ಗುಜರಾತ್ ಎರಡೂ ಪಂದ್ಯಗಳನ್ನು ಗೆದ್ದುಕೊಂಡಿದೆ. ಅದೇ ಸಮಯದಲ್ಲಿ ಚೆನ್ನೈ ಎರಡೂ ಪಂದ್ಯಗಳಲ್ಲಿ ಸೋಲನ್ನು ಎದುರಿಸಬೇಕಾಯಿತು. ಜಿಟಿ ತಂಡ ಮೊದಲ ಪಂದ್ಯದಲ್ಲಿ ಎದುರಾಳಿ ತಂಡವನ್ನು 3 ವಿಕೆಟ್‌ಗಳಿಂದ ಸೋಲಿಸಿತ್ತು. ಇದಾದ ಬಳಿಕ ಎರಡನೇ ಪಂದ್ಯದಲ್ಲಿ ಏಳು ವಿಕೆಟ್‌ಗಳ ಜಯ ಸಾಧಿಸಿತು.
ಐಪಿಎಲ್ ಉದ್ಘಾಟನಾ ಸಮಾರಂಭ:
ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಖ್ಯಾತ ಗಾಯಕ ಅರಿಜಿತ್ ಸಿಂಗ್, ನಟಿ ತಮನ್ನಾ ಭಾಟಿಯಾ ಮತ್ತು ಕನ್ನಡದ ನಟಿ, ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಭಾಗಿಯಾಗಲಿದ್ದಾರೆ. ಬಾಲಿವುಡ್ ನಟಿ ಕತ್ರಿನಾ ಕೈಫ್, ನಟ ಟೈಗರ್ ಶ್ರಾಫ್ ಸಹ ಹೆಜ್ಜೆ ಹಾಕಲಿದ್ದಾರೆ. ಜೊತೆಗೆ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶೇಷ ಲೇಸರ್ ಶೋ ಕಾರ್ಯಕ್ರಮವನ್ನೂ ಬಿಸಿಸಿಐ ಹಮ್ಮಿಕೊಂಡಿದೆ.
ಐಪಿಎಲ್ ಉದ್ಘಾಟನಾ ಕಾರ್ಯಕ್ರಮವು ಸಂಜೆ 6 ಗಂಟೆಗೆ ಆರಂಭವಾಗಲಿದೆ ಎಂದು ಬಿಸಿಸಿಐ ತಿಳಿಸಿದೆ. ಅಲ್ಲದೇ ಈ ಅದ್ಧೂರಿ ಕಾರ್ಯಕ್ರಮವು ಸುಮಾರು 45 ನಿಮಿಷಗಳ ಕಾಲ ನಡೆಯಲಿದೆ ಎಂದು ಹೇಳಲಾಗಿದೆ. ಬಳಿಕ 7 ಗಂಟೆಗೆ ಟಾಸ್ ನಡೆಯಲಿದ್ದು, 7:30ಕ್ಕೆ ಪಂದ್ಯ ನಡೆಯಲಿದೆ.
ಚೆನ್ನೈ-ಗುಜರಾತ್ ಸಂಭಾವ್ಯ ಪ್ಲೇಯಿಂಗ್ 11:
ಚೆನ್ನೈ ಸೂಪರ್ ಕಿಂಗ್ಸ್ ಸಂಭಾವ್ಯ ಪ್ಲೇಯಿಂಗ್ 11: ರುತುರಾಜ್ ಗಾಯಕ್ವಾಡ್, ಡೆವೋನ್ ಕಾನ್ವೇ, ಅಂಬಟಿ ರಾಯುಡು, ಬೆನ್ ಸ್ಟೋಕ್ಸ್, ಎಂಎಸ್ ಧೋನಿ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಮುಖೇಶ್ ಚೌಧರಿ, ದೀಪಕ್ ಚಾಹರ್, ಮಹೇಶ್ ಟೀಕ್ಷಣ.
ಗುಜರಾತ್ ಟೈಟಾನ್ಸ್ ಸಂಭಾವ್ಯ ಪ್ಲೇಯಿಂಗ್ 11: ಶುಭ್ಮನ್ ಗಿಲ್, ಮ್ಯಾಥ್ಯೂ ವೇಡ್, ಅಭಿನವ್ ಮನೋಹರ್, ಹಾರ್ದಿಕ್ ಪಾಂಡ್ಯ, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಶಿವಂ ಮಾವಿ, ಆರ್ ಸಾಯಿ ಕಿಶೋರ್, ಅಲ್ಜಾರಿ ಜೋಸೆಫ್, ಯಶ್ ದಯಾಲ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ