ಇಂದು ಟೂರ್ನಿಯ ಮೊದಲ ಡಬಲ್ ಹೆಡರ್ ಪಂದ್ಯ ನಡೆಯಲಿದೆ. ಇದರಲ್ಲಿ ಮೊದಲ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (Punjab Kings vs Kolkata Knight Riders) ತಂಡಗಳು ಸೆಣಸಾಡಲಿವೆ. ಈ ಪಂದ್ಯದ ಬಳಿಕ ಸಂಜೆ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು (LSG vs DC) ಸೆಣಸಾಡಲಿದೆ. ಪಂಜಾಬ್ ಮತ್ತು ಕೋಲ್ಕತ್ತಾ ತಂಡಗಳು ಮಧ್ಯಾಹ್ನ ಮೊಹಾಲಿಯಲ್ಲಿ ಮುಖಾಮುಖಿ ಆಗಲಿದೆ. ಬಳಿಕ ಸಂಜೆ 7:30ಕ್ಕೆ 2ನೇ ಪಂದ್ಯ ನಡೆಯಲಿದೆ.
ಪಂದ್ಯದ ವಿವರ:
ಪಂಜಾಬ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಎಲ್ಲಿ ನಡೆಯಲಿದೆ?
ಐಪಿಎಲ್ 2023ರ ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯವು ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿದೆ.
ಪಂಜಾಬ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯ ಎಷ್ಟು ಗಂಟೆಗೆ ಪ್ರಾರಂಭವಾಗುತ್ತದೆ?
ಪಂಜಾಬ್ ಮತ್ತು ಕೋಲ್ಕತ್ತಾ ನಡುವಿನ ಪಂದ್ಯವು ಮಧ್ಯಾಹ್ನ 3:30 ಕ್ಕೆ IST ಪ್ರಾರಂಭವಾಗುತ್ತದೆ.
ಪಂಜಾಬ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯದ ಲೈವ್ ಸ್ಟ್ರೀಮ್ ಎಲ್ಲಿ?
ಪಂಜಾಬ್ ಮತ್ತು ಕೋಲ್ಕತ್ತಾ ನಡುವಿನ IPL 2023 ಪಂದ್ಯವನ್ನು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ.
ಪಂಜಾಬ್ ಕಿಂಗ್ಸ್ vs ಕೋಲ್ಕತ್ತಾ ನೈಟ್ ರೈಡರ್ಸ್ ಪಂದ್ಯವನ್ನು ಟಿವಿಯಲ್ಲಿ ವೀಕ್ಷಿಸುವುದು ಹೇಗೆ?
IPL 2023ರ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ.
ಪಿಚ್ ವರದಿ:
ಮೊಹಾಲಿಯ ಪಂಜಾಬ್ ಕ್ರಿಕೆಟ್ ಸಂಸ್ಥೆ ಐಎಸ್ ಬಿಂದ್ರಾ ಸ್ಟೇಡಿಯಂ ಇದುವರೆಗೆ ಒಟ್ಟು 55 ಐಪಿಎಲ್ ಪಂದ್ಯಗಳನ್ನು ಆಯೋಜಿಸಿದೆ. ಈ ಮೈದಾನದಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 24 ಬಾರಿ ಗೆದ್ದರೆ, ಎರಡನೇ ಬ್ಯಾಟಿಂಗ್ ಮಾಡಿದ ತಂಡ 31 ಪಂದ್ಯಗಳನ್ನು ಗೆದ್ದಿದೆ. ಇಲ್ಲಿ ಕಳೆದ 5 ಟಿ20 ಪಂದ್ಯಗಳಲ್ಲಿ ಸರಾಸರಿ ಮೊದಲ ಇನ್ನಿಂಗ್ಸ್ ಸ್ಕೋರ್ 140 ರನ್ ಆಗಿದೆ. ಪಿಚ್ ಇನ್ನಿಂಗ್ಸ್‌ನುದ್ದಕ್ಕೂ ಬೌಲರ್‌ಗಳಿಗೆ ಹೆಚ್ಚಿನ ಬೆಂಬಲವನ್ನು ನೀಡುತ್ತದೆ. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ.
ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್‌ನ ತಂಡಗಳು:
ಪಂಜಾಬ್ ಕಿಂಗ್ಸ್ ತಂಡ: ಶಿಖರ್ ಧವನ್ (ಸಿ), ಶಾರುಖ್ ಖಾನ್, ಪ್ರಭಾಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ರಾಜ್ ಬಾವಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟೋನ್, ಅಥರ್ವ ಟೈಡೆ, ಅರ್ಷ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನಾಥನ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್, ಹರ್‌ಪ್ರೀತ್ ಬ್ರಾರ್, ಸ್ಯಾಮ್ ಕುರ್ರಾನ್, ಸಿಕಂದರ್ ರಜಾ, ಹರ್‌ಪ್ರೀತ್ ಭಾಟಿಯಾ, ವಿದ್ವತ್ ಕಾವೇರಪ್ಪ, ಮೋಹಿತ್ ರಥಿ, ಶಿವಂ ಸಿಂಗ್, ಮ್ಯಾಥ್ಯೂ ಶಾರ್ಟ್
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ: ನಿತೀಶ್ ರಾಣಾ (ಸಿ), ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ, ವರುಣ್ ಸಿಂಗ್ ರೋವ್ರಿ, ಆರ್. , ನಾರಾಯಣ್ ಜಗದೀಸನ್, ವೈಭವ್ ಅರೋರಾ, ಸುಯಾಶ್ ಶರ್ಮಾ, ಡೇವಿಡ್ ವೈಸ್, ಕುಲ್ವಂತ್ ಖೆಜ್ರೋಲಿಯಾ, ಮನ್ದೀಪ್ ಸಿಂಗ್, ಲಿಟ್ಟನ್ ದಾಸ್, ಶಕೀಬ್ ಅಲ್ ಹಸನ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ