ಐಪಿಎಲ್ 2023 (IPL 2023) 21ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ (LSG vs PBKS) ಹಣಾಹಣಿ ನಡೆಸುತ್ತಿದೆ. ಉಭಯ ತಂಡಗಳ ನಡುವಿನ ಈ ರೋಚಕ ಮುಖಾಮುಖಿ ಏಕನಾ ಸ್ಪೋರ್ಟ್ಸ್ ಸಿಟಿಯಲ್ಲಿ (Ekana Sports City) ಆರಂಭವಾಗಿದೆ. ಈ ಪಂದ್ಯದಲ್ಲಿ ಉಭಯ ತಂಡಗಳ ನಾಯಕರು ಗೆಲುವಿನ ನಿರೀಕ್ಷೆಯಲ್ಲಿದ್ದು, ಈಗಾಗಲೇ ಟಾಸ್ ಆಗಿದೆ. ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿತು. ಶಿಖರ್ ಧವನ್ ಅನುಪಸ್ಥಿತಿಯಲ್ಲಿ ಪಂಜಾಬ್ ತಂಡವನ್ನು ಸ್ಯಾಮ್ ಕರನ್ ಮುನ್ನಡೆಸುತ್ತಿದ್ದಾರೆ. ಈ ಮೂಲಕ 18 ಕೋಟಿ ಒಡೆಯ ಚೊಚ್ಚಲ ಬಾರಿಗೆ ಐಪಿಎಲ್ನಲ್ಲಿ ತಂಡದ ನಾಯಕತ್ವ ಮಾಡುತ್ತಿದ್ದಾರೆ.
ಲಕ್ನೋ - ಪಂಜಾಬ್ ಹೆಡ್ ಟು ಹೆಡ್:
ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳ ನಡುವೆ ಇದುವರೆಗೆ ಕೇವಲ ಒಂದು ಪಂದ್ಯ ಮಾತ್ರ ನಡೆದಿದೆ. ಈ ಪಂದ್ಯವನ್ನು 2022ರಲ್ಲಿ ಆಡಲಾಯಿತು. ಆ ಸಮಯದಲ್ಲಿ ಕೆಎಲ್ ರಾಹುಲ್ ನೇತೃತ್ವದ ಲಕ್ನೋ ತಂಡವು ಪಂಜಾಬ್‌ಗೆ ಭಾರವಾಗಿತ್ತು. ಈ ರೋಚಕ ಪಂದ್ಯದಲ್ಲಿ ಎಲ್ ಎಸ್ ಜಿ ಪರ ಭಾಗವಹಿಸಿದ್ದ ಆಫ್ರಿಕನ್ ಬ್ಯಾಟ್ಸ್ ಮನ್ ಕ್ವಿಂಟನ್ ಡಿ ಕಾಕ್ ಭರ್ಜರಿ ಬ್ಯಾಟಿಂಗ್ ಮಾಡಿದ್ದರು.
A look at the Playing XIs of the two sides in the #LSGvPBKS contest 👌👌@CurranSM to lead @PunjabKingsIPL tonight.
Follow the match ▶️ https://t.co/OHcd6VfDps #TATAIPL pic.twitter.com/bQUxAwVXbo
— IndianPremierLeague (@IPL) April 15, 2023
ಪಾಯಿಂಟ್ಸ್ ಪಟ್ಟಿಯಲ್ಲಿ ಲಕ್ನೋ ತಂಡವು ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಗೆದ್ದು ಎರಡನೇ ಸ್ಥಾನದಲ್ಲಿದೆ. ಈ ವರ್ಷ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಅದೇ ಸಮಯದಲ್ಲಿ, ಪಂಜಾಬ್ ಕಿಂಗ್ಸ್ ನಾಲ್ಕು ಪಂದ್ಯಗಳಲ್ಲಿ ಎರಡು ಗೆಲುವುಗಳೊಂದಿಗೆ ಆರನೇ ಸ್ಥಾನದಲ್ಲಿದೆ. ಜೊತೆಗೆ ಪ್ರಸಕ್ತ ಋತುವಿನಲ್ಲಿ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಸದ್ಯ ಧವನ್ ನಾಲ್ಕು ಪಂದ್ಯಗಳನ್ನು ಆಡಿದ್ದಾರೆ. ಏತನ್ಮಧ್ಯೆ, ಅವರ ಬ್ಯಾಟ್ ನಾಲ್ಕು ಇನ್ನಿಂಗ್ಸ್‌ಗಳಲ್ಲಿ 116.50 ಸರಾಸರಿಯಲ್ಲಿ 233 ರನ್ ಗಳಿಸಿದೆ. ಪ್ರಸ್ತುತ, ಅವರು ಅತಿ ಹೆಚ್ಚು ರನ್ ಗಳಿಸಿದ ಮೊದಲ ಬ್ಯಾಟ್ಸ್‌ಮನ್ ಆಗಿದ್ದಾರೆ.
ಅದೇ ರೀತಿ ಇದೀಗ ಡೆಲ್ಲಿ ವಿರುದ್ಧ ಆರ್ಸಿಬಿ ಗೆದ್ದ ಬಳಿಕ ಬೆಂಗಳೂರು ತಂಡ 7ನೇ ಸ್ಥಾನಕ್ಕೇರಿದೆ. ಇಂದಿನ ಪಂದ್ಯದಲ್ಲಿ ಲಕ್ನೋ ತಂಡ ಗೆದ್ದಲ್ಲಿ ಮತ್ತೊಮ್ಮೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ.
ಲಕ್ನೋ - ಪಂಜಾಬ್ ಪ್ಲೇಯಿಂಗ್ 11:
ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ 11: ಕೆಎಲ್ ರಾಹುಲ್ (ನಾಯಕ), ಕೈಲ್ ಮೇಯರ್ಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋನಿಸ್, ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಆಯುಷ್ ಬಡೋನಿ, ಮಾರ್ಕ್ ವುಡ್, ಅವೇಶ್ ಖಾನ್ ಮತ್ತು ಯುಧ್ವೀರ್ ಸಿಂಗ್.
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11: ಅಥರ್ವ ತೈಡೆ, ಹರ್ಪ್ರೀತ್ ಭಾಟಿಯಾ, ಮ್ಯಾಥ್ಯೂ ಶಾರ್ಟ್, ಸಿಕಂದರ್ ರಜಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶಾರುಖ್ ಖಾನ್, ಸ್ಯಾಮ್ ಕರನ್ (ನಾಯಕ), ಹರ್ಪ್ರೀತ್ ಬ್ರಾರ್, ಕಗಿಸೊ ರಬಾಡ, ರಾಹುಲ್ ಚಹಾರ್ ಮತ್ತು ಅರ್ಶ್ದೀಪ್ ಸಿಂಗ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ