MI vs PBKS: ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್, ಇಲ್ಲಿದೆ ಉಭಯ ತಂಡಗಳ ಪ್ಲೇಯಿಂಗ್​ 11

IPL 2023 PBKS vs MI

IPL 2023 PBKS vs MI

MI vs PBKS: ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್​ ಶರ್ಮಾ (Rohit Sharma) ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. 

  • Share this:

ಐಪಿಎಲ್ 2023ರ ಡಬಲ್ ಹೆಡರ್‌ನ ಎರಡನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ (MI vs PBKS) ತಂಡಗಳು ಮುಖಾಮುಖಿಯಾಗಿವೆ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium) ಈ ಪಂದ್ಯ ನಡೆಯುತ್ತಿದೆ. ಎರಡೂ ತಂಡಗಳು ಗೆಲುವಿನ ಮೇಲೆ ಕಣ್ಣಿಟ್ಟಿವೆ. ಮುಂಬೈ ಇಲ್ಲಿಯವರೆಗೆ 5 ಪಂದ್ಯಗಳನ್ನು ಆಡಿದ್ದು, ಅದರಲ್ಲಿ 3 ರಲ್ಲಿ ಗೆದ್ದಿದೆ ಮತ್ತು ಎರಡರಲ್ಲಿ ಸೋಲನ್ನು ಎದುರಿಸುತ್ತಿದೆ, ಆದರೆ ಪಂಜಾಬ್ ಕಿಂಗ್ಸ್ ತಂಡವು ಪ್ರಸಕ್ತ ಋತುವಿನಲ್ಲಿ ತನ್ನ ಏಳನೇ ಪಂದ್ಯವನ್ನು ಆಡುತ್ತಿದೆ. ಪಂಜಾಬ್ 6 ಪಂದ್ಯಗಳಲ್ಲಿ 3 ರಲ್ಲಿ ಗೆದ್ದಿದೆ. ಈಗಾಗಲೇ ಟಾಸ್​ ಆಗಿದ್ದು, ಟಾಸ್​ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್​ ಶರ್ಮಾ (Rohit Sharma) ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. 


ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ಲೈವ್ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದು. ಇದಕ್ಕಾಗಿ, ನೀವು ನಿಮ್ಮ ಮೊಬೈಲ್‌ನಲ್ಲಿ ಜಿಯೋ ಸಿನಿಮಾ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು, ಅದು ಉಚಿತವಾಗಿದೆ. ಟಿವಿಯಲ್ಲಿ ಲೈವ್ ಟೆಲಿಕಾಸ್ಟ್ ವೀಕ್ಷಿಸಲು, ನೀವು ಸ್ಟಾರ್ ಸ್ಪೋರ್ಟ್ಸ್ ಚಾನೆಲ್‌ಗಳ ನೆಟ್‌ವರ್ಕ್‌ನಲ್ಲಿ ನೋಡಬಹುದು.


ಮುಂಬೈ- ಪಂಜಾಬ್​ ಹೆಡ್​ ಟು ಹೆಡ್:


ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್‌ನಲ್ಲಿ 29 ಬಾರಿ ಮುಖಾಮುಖಿಯಾಗಿದ್ದು, ಅಲ್ಲಿ ಮುಂಬೈ 15 ಪಂದ್ಯಗಳನ್ನು ಗೆದ್ದಿದ್ದರೆ, ಪಂಜಾಬ್ 14 ರಲ್ಲಿ ಜಯ ಸಾಧಿಸಿದೆ. ಈ ಪಂದ್ಯದಲ್ಲೂ ಉಭಯ ತಂಡಗಳ ನಡುವೆ ರೋಚಕ ಹಣಾಹಣಿ ನಡೆಯಲಿದೆ. ಲೆಜೆಂಡರಿ ಸಚಿನ್ ತೆಂಡೂಲ್ಕರ್ ಅವರ ಪುತ್ರ ಅರ್ಜುನ್ ತೆಂಡೂಲ್ಕರ್ ಮೇಲೆ ಎಲ್ಲರ ಕಣ್ಣಿದೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಅರ್ಜುನ್ ಐಪಿಎಲ್ ವೃತ್ತಿಜೀವನದ ಮೊದಲ ವಿಕೆಟ್ ಪಡೆದರು. ಕೊನೆಯ ಓವರ್‌ನಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ ಅವರು ಕೇವಲ 5 ರನ್ ಗಳಿಸಿ ತಂಡಕ್ಕೆ 14 ರನ್‌ಗಳ ಜಯ ತಂದುಕೊಟ್ಟರು.



ಶಿಖರ್​ ಧವನ್​ ಔಟ್​:


ಪಂಜಾಬ್ ಕಿಂಗ್ಸ್‌ನ ನಿಯಮಿತ ನಾಯಕ ಶಿಖರ್ ಧವನ್ ಈ ಪಂದ್ಯದಲ್ಲಿ ಕಣಕ್ಕಿಳಿದಿಲ್ಲ. ಏಕೆಂದರೆ ಭುಜದ ನೋವಿನಿಂದ ಶಿಖರ್ ಕಳೆದ ಪಂದ್ಯದಲ್ಲಿ ಆಡಲಾಗಲಿಲ್ಲ. ಅವರ ಸ್ಥಾನಕ್ಕೆ ಸ್ಯಾಮ್ ಕರನ್ ಕಳೆದ ಪಂದ್ಯದಲ್ಲಿ ನಾಯಕತ್ವ ವಹಿಸಿಕೊಂಡಿದ್ದರು. ಅದರಂತೆ ಇಂದಿನ ಪಂದ್ಯದಲ್ಲಿಯೂ ಸ್ಯಾಮ್​ ಕರಣ್​ ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ. ಸದ್ಯ ಧವನ್​ ವಿಶ್ರಾಂತಿಯಲ್ಲಿದ್ದು, ಮುಂದಿನ ಪಂದ್ಯದ ವೇಳೆಗೆ ಫಿಟ್​ ಆಗಲಿದ್ದು, ಕಣಕ್ಕಿಳಿಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.


ಇದನ್ನೂ ಓದಿ: LSG vs GT: W,W,W,W; ಲಕ್ನೋ ವಿರುದ್ದ ಗುಜರಾತ್​ಗೆ ರಣರೋಚಕ ಗೆಲುವು


ಮುಂಬೈ - ಪಂಜಾಬ್​ ಪ್ಲೇಯಿಂಗ್ XI:


ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ XI: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ತಿಲಕ್ ವರ್ಮಾ, ಅರ್ಜುನ್ ತೆಂಡೂಲ್ಕರ್, ಹೃತಿಕ್ ಶೋಕೀನ್, ಜೋಫ್ರಾ ಆರ್ಚರ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರ್ಡಾರ್ಫ್.




ಪಂಜಾಬ್​ ಕಿಂಗ್ಸ್ ಪ್ಲೇಯಿಂಗ್ XI:  ಅಥರ್ವ ಟೈಡೆ, ಪ್ರಭ್‌ಸಿಮ್ರಾನ್ ಸಿಂಗ್, ಮ್ಯಾಥ್ಯೂ ಶಾರ್ಟ್, ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕುರಾನ್(ಸಿ), ಜಿತೇಶ್ ಶರ್ಮಾ(ಡಬ್ಲ್ಯೂ), ಹರ್‌ಪ್ರೀತ್ ಸಿಂಗ್ ಭಾಟಿಯಾ, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್.

First published: