ಐಪಿಎಲ್ 2023ರ (IPL 2023) 9ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (KKR vs RCB) ತಂಡಗಳು ಮುಖಾಮುಖಿಯಾಗುತ್ತಿವೆ. ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ (Eden Gardens) ಈ ಪಂದ್ಯ ನಡೆಯುತ್ತಿದೆ. ಇನ್ನು, 4 ವರ್ಷಗಳ ನಂತರ ಈಡನ್‌ನಲ್ಲಿ ಐಪಿಎಲ್ ಪಂದ್ಯ ನಡೆಯುತ್ತಿದೆ. ಕೆಕೆಆರ್‌ನ ಆಲ್‌ರೌಂಡರ್‌ಗಳಾದ ಆಂಡ್ರೆ ರಸೆಲ್ ಮತ್ತು ಸುನಿಲ್ ನರೈನ್‌ಗೆ ಈ ಪಂದ್ಯ ತುಂಬಾ ವಿಶೇಷವಾಗಿದೆ. ಈಗಾಗಲೇ ಪಂದ್ಯದ ಟಾಸ್ ಆಗಿದ್ದು, ಟಾಸ್ ಗೆದ್ದಿರುವ ಬೆಂಗಳೂರು ತಂಡದ ನಾಯಕ ಫಾಫ್ ಡುಪ್ಲೇಸಿಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಕೆಕೆಆರ್ ಬ್ಯಾಟಿಂಗ್ ಆರಂಭಿಸಲಿದೆ.
ಪಂದ್ಯದ ವಿವರ:
ನೀವು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಕೆಕೆಆರ್ ಮತ್ತು ಆರ್‌ಸಿಬಿ ನಡುವಿನ ಪಂದ್ಯದ ನೇರ ಪ್ರಸಾರವನ್ನು ವೀಕ್ಷಿಸಬಹುದು. ಇದಲ್ಲದೇ Jio ಸಿನಿಮಾ ಆಪ್ ಡೌನ್‌ಲೋಡ್ ಮಾಡುವ ಮೂಲಕ ನೀವು ಮೊಬೈಲ್‌ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ.
A look at the Playing XI for #KKRvRCB
Live - https://t.co/V0OS7tFZTB #TATAIPL #KKRvRCB #IPL2023 pic.twitter.com/SN3tP3EC5e
— IndianPremierLeague (@IPL) April 6, 2023
ಕೋಲ್ಕತ್ತಾ ನೈಟ್ ರೈಡರ್ಸ್‌ಗಾಗಿ ಆಡುತ್ತಿರುವ ಕೆರಿಬಿಯನ್ ಆಲ್‌ರೌಂಡರ್ ಆಂಡ್ರೆ ರಸೆಲ್ ಅವರು ತಮ್ಮ 100ನೇ ಐಪಿಎಲ್ ಪಂದ್ಯವನ್ನು ಆಡಲಿದ್ದಾರೆ ಮತ್ತು ಸುನಿಲ್ ನರೈನ್ ತಮ್ಮ 150ನೇ ಐಪಿಎಲ್ ಪಂದ್ಯವನ್ನು ಆಡಲಿದ್ದಾರೆ. ಇಬ್ಬರೂ ಆಟಗಾರರು ಅದ್ಭುತ ಪ್ರದರ್ಶನ ನೀಡುವ ಮೂಲಕ ಈ ಪಂದ್ಯವನ್ನು ಸ್ಮರಣೀಯವಾಗಿಸಲು ಸಿದ್ಧರಾಗಿದ್ದಾರೆ.
ಇದನ್ನೂ ಓದಿ: Kane Williamson: ಐಪಿಎಲ್ನಿಂದ ವಿಶ್ವ ಚಾಂಪಿಯನ್ ನಾಯಕನ ವೃತ್ತಿಜೀವನವನ್ನು ಕೊನೆಗೊಳುತ್ತಾ? ಹೊರಬಿತ್ತು ಶಾಕಿಂಗ್ ಮಾಹಿತಿ
ಇದರೊಂದಿಗೆ ಶ್ರೇಯಸ್ ಅಯ್ಯರ್ ಗಾಯದ ಕಾರಣ ಇಡೀ ಪಂದ್ಯಾವಳಿಯಿಂದ ಹೊರಗುಳಿದ ನಂತರ KKR ನ ಬ್ಯಾಟಿಂಗ್ ತುಂಬಾ ದುರ್ಬಲವಾಗಿದೆ. ಪಂಜಾಬ್ ಕಿಂಗ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೆಕೆಆರ್ ಬ್ಯಾಟ್ಸ್ ಮನ್ ಗಳು ನಿರಾಸೆ ಅನುಭವಿಸಿದ್ದರು. ಆಂಡ್ರೆ ರಸೆಲ್ ಮತ್ತು ವೆಂಕಟೇಶ್ ಅಯ್ಯರ್ ಮಾತ್ರ ಅರ್ಧಶತಕದ ಜೊತೆಯಾಟ ನಡೆಸಿದರು.
ಉಭಯ ತಂಡಗಳ ಬಲಾಬಲ:
ಐಪಿಎಲ್‌ನಲ್ಲಿ ಇದುವರೆಗೆ ಕೆಕೆಆರ್ ಮತ್ತು ಆರ್‌ಸಿಬಿ ನಡುವೆ ಒಟ್ಟು 30 ಪಂದ್ಯಗಳು ನಡೆದಿವೆ. ಈ ವೇಳೆ ಆರ್‌ಸಿಬಿ ವಿರುದ್ಧ ಕೆಕೆಆರ್ ಮೇಲುಗೈ ಸಾಧಿಸಿದೆ. ಕೆಕೆಆರ್ ಆರ್‌ಸಿಬಿ ವಿರುದ್ಧ 16 ಪಂದ್ಯಗಳನ್ನು ಗೆದ್ದಿದೆ. ಅದೇ ಸಮಯದಲ್ಲಿ, ಆರ್‌ಸಿಬಿ ತಂಡವು ಕೋಲ್ಕತ್ತಾ ವಿರುದ್ಧ 14 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಇದಲ್ಲದೇ, ಸೋಲಿನ ಬಗ್ಗೆ ನೋಡುವುದಾದರೆ, ಕೆಕೆಆರ್ ಇದುವರೆಗೆ ಒಟ್ಟು 14 ಪಂದ್ಯಗಳಲ್ಲಿ ಆರ್‌ಸಿಬಿ ವಿರುದ್ಧ ಸೋಲು ಕಂಡಿದೆ.
RCB vs KKR ಪ್ಲೇಯಿಂಗ್ 11:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11: ಫಾಫ್ ಡುಪ್ಲೆಸಿಸ್ (C), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ಮೈಕಲ್ ಬ್ರೇಸ್‌ವೆಲ್, ಶಹಬಾಜ್ ಅಹ್ಮದ್, ದಿನೇಶ್ ಕಾರ್ತಿಕ್ (WK), ಕರಣ್ ಶರ್ಮಾ, ಹರ್ಷಲ್ ಪಟೇಲ್, ಆಕಾಶ್ ದೀಪ್, ಡೇವಿಡ್ ವಿಲ್ಲಿ, ಮೊಹಮ್ಮದ್ ಸಿರಾಜ್.
ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ 11: ಮನ್‌ದೀಪ್ ಸಿಂಗ್, ರಹಮಾನುಲ್ಲಾ ಗುರ್ಬಾಜ್ (wk), ನಿತೀಶ್ ರಾಣಾ (c), ರಿಂಕು ಸಿಂಗ್, ಆಂಡ್ರೆ ರಸೆಲ್, ಶಾರ್ದೂಲ್ ಠಾಕೂರ್, ಸುನಿಲ್ ನರೈನ್, ಸುಯಶ್ ಶರ್ಮಾ, ಟಿಮ್ ಸೌಥಿ, ಉಮೇಶ್ ಯಾದವ್, ವರುಣ್ ಚಕ್ರವರ್ತಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ