ಐಪಿಎಲ್ 2023ರ (IPl 2023) 15ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಲಕ್ನೋ ಸೂಪರ್ ಜೈಂಟ್ಸ್ (RCB vs LSG) ತಂಡಗಳು ಸೆಣಸಾಡುತ್ತಿವೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (M Chinnaswamy Stadium Bengaluru) ಈ ಪಂದ್ಯ ನಡೆಯುತ್ತಿದೆ. ಈಗಾಗಲೇ ಟಾಸ್ ಗೆದ್ದ ಲಕ್ನೋ ನಾಯಕ ಕೆಎಲ್ ರಾಹುಲ್ ಬೌಲಿಂಗ್ ಆಯ್ಕೆ ಮಾಡಿದ್ದು, ಆರ್ಸಿಬಿ ಮೊದಲು ಬ್ಯಾಟಿಂಗ್ ಮಾಡಿತು. ಬೆಂಗಳೂರು ತಂಡವು ನಿಗದಿತ 20 ಓವರ್ನಲ್ಲಿ 2 ವಿಕೆಟ್ ನಷ್ಟಕ್ಕೆ ಬರೋಬ್ಬರಿ 212 ರನ್ ಗಳಿಸುವ ಮೂಲಕ ಲಕ್ನೋ ತಂಡಕ್ಕೆ 213 ರನ್ಗಳ ಬೃಹತ್ ಮೊತ್ತದ ಟಾರ್ಗೆಟ್ ನೀಡಿದೆ. ಈ ಮೂಲಕ ತವರಿನಲ್ಲಿ ಮತ್ತೊಂದು ಗೆಲುವಿಗಾಗಿ ಆರ್ಸಿಬಿ ಸನಿಹವಾಗಿದೆ.
ಆರ್ಸಿಬಿ ಪರ ಅಬ್ಬರಿಸಿದ ತ್ರಿಮೂರ್ತಿಗಳು:
ಇನ್ನು, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡವು ನಿಗದಿತ 20 ಓವರ್ನಲ್ಲಿ 2 ವಿಕೆಟ್ ನಷ್ಟಕ್ಕೆ ಬರೋಬ್ಬರಿ 212 ರನ್ ಗಳಿಸಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಮತ್ತು ನಾಯಕ ಫಾಫ್ ಡುಪ್ಲೇಸಿಸ್ ಭರ್ಜರಿಯಾಗಿ ಆಟವಾಡಿದರು. ಬಳಿಕ ಬಂದ ಗ್ಲೇನ್ ಮ್ಯಾಕ್ಸ್‌ವೆಲ್ ಸಹ ಅಬ್ಬರದ ಬ್ಯಾಟಿಂಗ್ ಮೂಲಕ ಮೂವರು ಸಹ ಆಕರ್ಷಕ ಅರ್ಧಶತಕ ಸಿಡಿಸಿದರು.
We asked for a Big Finish, and a big finish is what we got!🥹
Bowlers, now it’s your time to shine 👊#PlayBold #ನಮ್ಮRCB #IPL2023 #RCBvLSG pic.twitter.com/QQZAQF2bVr
— Royal Challengers Bangalore (@RCBTweets) April 10, 2023
ಇದನ್ನೂ ಓದಿ: IPL 2023: ಚೆನ್ನೈ ಸೂಪರ್ ಕಿಂಗ್ಸ್ ಗೆ ಬಿಗ್ ಶಾಕ್, ಇಂಜುರಿ ಸಮಸ್ಯೆಯಿಂದ ಇಬ್ಬರು ಸ್ಟಾರ್ ಪ್ಲೇಯರ್ ಔಟ್!
ದುಬಾರಿಯಾದ ಲಕ್ನೋ ಬೌಲರ್ಸ್:
ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಿದ ಲಕ್ನೋ ತಂಡದ ಬೌಲರ್ಸ್ ಆರ್ಸಿಬಿ ವಿರುದ್ಧ ಇಂದು ದುಬಾರಿಯಾದರು. ಕೊಹ್ಲಿ, ಡುಪ್ಲೇಸಿಸ್ ಮತ್ತು ಮ್ಯಾಕ್ಸ್‌ವೆಲ್ ಕಟ್ಟಿಹಾಕುವಲ್ಲಿ ವಿಫಲರಾದರು. ಲಕ್ನೋ ಪರ, ಮಾರ್ಕ್ ವುಡ್ ಮತ್ತು ಅಮಿತ್ ಮಿಶ್ರಾ ತಲಾ ಒಂದು ವಿಕೆಟ್ ಪಡೆದರು. ಉಳದಂತೆ ಜಯದೇವ್ ಉನದ್ಕಟ್ 27 ರನ್, ಆವೇಶ್ ಖಾನ್ 53 ರನ್, ಕೃನಲ್ ಪಅಂಡ್ಯ 35 ರನ್ ನೀಡುವ ಮೂಲಕ ದುಬಾರಿಯಾದರು.
ಬೆಂಗಳೂರು- ಲಕ್ನೋ ಪ್ಲೇಯಿಂಗ್ 11:
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11: ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿ (ಸಿ), ಮಹಿಪಾಲ್ ಲೊಮ್ರೋರ್, ಗ್ಲೆನ್ ಮ್ಯಾಕ್ಸ್‌ವೆಲ್, ಶಹಬಾಜ್ ನದೀಮ್, ದಿನೇಶ್ ಕಾರ್ತಿಕ್ (ವಿಕಿ), ಅನುಜ್ ರಾವತ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್.
ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ 11: ಕೆಎಲ್ ರಾಹುಲ್ (ಸಿ), ಕೈಲ್ ಮೈಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ಕೃನಾಲ್ ಪಾಂಡ್ಯ, ನಿಕೋಲಸ್ ಪೂರನ್ (wk), ಜಯದೇವ್ ಉನದ್ಕತ್, ಅಮಿತ್ ಮಿಶ್ರಾ, ಅವೇಶ್ ಖಾನ್, ಮಾರ್ಕ್ ವುಡ್ ರವಿ ಬಿಷ್ಣೋಯಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ