ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (RCB vs MI) ತಂಡಗಳು ಸೆಣಸಾಡಿದವು. ಐಪಿಎಲ್ 16ನೇ ಆವೃತ್ತಿಯ ಮೊದಲ ಪಂದ್ಯವನ್ನೇ ಬೆಂಗಳೂರು ತಂಡ ಗೆದ್ದು ಬೀಗಿದೆ. ಟಾಸ್ ಗೆದ್ದ ಫೀಲ್ಡಿಂಗ್ ಮಾಡಿದ RCB, ಭರ್ಜರಿ ಬೌಲಿಂಗ್ ಮಾಡಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ 20 ಓವರ್ನಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು. ಈ ಟಾರ್ಗೆಟ್ ಬೆನ್ನಟ್ಟಿದ ಆರ್ಸಿಬಿ ತಂಡ 16.2 ಓವರ್ಗೆ 2 ವಿಕೆಟ್ ನಷ್ಟಕ್ಕೆ 172 ರನ್ ಗಳಿಸುವ ಮೂಲಕ ಬರೋಬ್ಬರಿ 8 ವಿಕೆಟ್ಗಳ ಜಯ ದಾಖಲಿಸಿತು.
ಅಬ್ಬರಿಸಿದ ಕಿಂಗ್ ಕೊಹ್ಲಿ- ಡುಪ್ಲೇಸಿಸ್:
ಇನ್ನು, ಮುಂಬೈ ನೀಡಿದ 172 ರನ್ಗಳ ಟಾರ್ಗೆಟ್ ಬೆನ್ನಟ್ಟಿದ ಆರ್ಸಿಬಿ ತಂಡ 16.2 ಓವರ್ಗೆ 2 ವಿಕೆಟ್ ನಷ್ಟಕ್ಕೆ 172 ರನ್ ಗಳಿಸುವ ಮೂಲಕ ಬರೋಬ್ಬರಿ 8 ವಿಕೆಟ್ಗಳ ಜಯ ದಾಖಲಿಸಿತು. ಈ ಮೂಲಕ ಐಪಿಎಲ್ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿದೆ. ಇಂದು ಆರ್ಸಿಬಿ ಪರ ಅರಂಭಿಕರಾಗಿ ಕಣಕ್ಕಿಳಿದ ವಿರಾಟ್ ಕೊಹ್ಲಿ ಮತ್ತು ಫಾಫ್ ಡುಪ್ಲೇಸಿಸ್ ಮುಂಬೈ ಬಾಲರ್ಗಳ ಬೆವರಿಳಿಸಿದರು. ಶತಕದ ಜೊತೆಯಾಟದ ಮೂಲಕ ತಂಡಕ್ಕೆ ಭರ್ಜರಿ ಗೆಲುವನ್ನು ತಂದುಕೊಟ್ಟರು.
For his chase-special of 82*(49), @imVkohli becomes our 🔝 performer in the second innings of the #RCBvMI contest in #TATAIPL 💪
Take a look at his batting summary 🔽 pic.twitter.com/2KaArcBGiw
— IndianPremierLeague (@IPL) April 2, 2023
ಬೌಲಿಂಗ್ನಲ್ಲಿಯೂ ಮಿಂಚಿದ ಆರ್ಸಿಬಿ:
RCB ಬೌಲರ್‌ಗಳು ಪಂದ್ಯದ ಸಮಯದಲ್ಲಿ 7 ವಿಕೆಟ್ ತೆಗೆಯುವ ಮೂಲಕ ಪಂದ್ಯದ ಗತಿಯನ್ನೇ ಬದಲಿಸಿದ್ದರು. ಕರ್ಣ್ ಶರ್ಮಾ ಗರಿಷ್ಠ ಎರಡು ವಿಕೆಟ್ ಪಡೆದರು. ಇದಲ್ಲದೆ ಮೊಹಮ್ಮದ್ ಸಿರಾಜ್, ರೀಸ್ ಟೋಪ್ಲಿ, ಆಕಾಶ್ ದೀಪ್, ಹರ್ಷಲ್ ಪಟೇಲ್ ಮತ್ತು ಮೈಕಲ್ ಬ್ರೇಸ್‌ವೆಲ್ ತಲಾ ಒಂದು ವಿಕೆಟ್ ಪಡೆದರು. ಆದರೆ MI ಬೌಲರ್‌ಗಳು RCB ವಿರುದ್ಧ ಎರಡು ವಿಕೆಟ್ ಪಡೆದರು. ಅರ್ಷದ್ ಖಾನ್ ಮತ್ತು ಗ್ರೀನ್ ತಲಾ ಒಂದು ವಿಕೆಟ್ ಪಡೆದರು.
ಆರ್ಸಿಬಿ ಮ್ಯಾಚ್ ನೋಡಲು ಬಂದ ಮಾಜಿ ಸಿಎಂ:
ರಾಜ್ಯ ವಿಧಾನಸಭಾ ಚುನಾವಣೆ ಕಾವು ರಾಜ್ಯದಲ್ಲಿ ದಿನದಿಂದ ಹೆಚ್ಚಳವಾಗುತ್ತಿದೆ. ರಾಜ್ಯದ ಪ್ರಮುಖ ಮೂರು ಪಕ್ಷಗಳ ನಾಯಕರು ತಮ್ಮ ಪಕ್ಷಗಳ ಪರ ನಿರಂತರ ಪ್ರಚಾರ ನಡೆಸುತ್ತಿದ್ದಾರೆ. ಇದರ ನಡುವೆ ಟಿಕೆಟ್ ಘೋಷಣೆಯ ಟೆನ್ಶನ್ ಹೆಚ್ಚಾಗಿದೆ. ಈ ಎಲ್ಲಾ ಒತ್ತಡಗಳ ನಡುವೆಯೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಆರ್ಸಿಬಿ ಪಂದ್ಯ ವೀಕ್ಷಣೆ ಮಾಡಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದಾರೆ.
ಮುಂಬೈ ಹಾಗೂ ಆರ್ಸಿಬಿ ತಂಡಗಳು 2023ರ ಆವೃತ್ತಿಯ ಮೊದಲ ಪಂದ್ಯವನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು. ಪಂದ್ಯವನ್ನು ವೀಕ್ಷಣೆ ಮಾಡಲು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಆಗಮಿಸಿದ್ದರು. ಸಿದ್ದರಾಮಯ್ಯ ಅವರಿಗೆ ಮಾಜಿ ಸಚಿವ ಬಸವರಾಜ ರಾಯರೆಡ್ಡಿ, ವಿಧಾನ ಪರಿಷತ್ ಸ್ಪೀಕರ್ ಬಸವರಾಜ ಹೊರಟ್ಟಿ ಸಾಥ್ ನೀಡಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ