ಕಳೆದ ಒಂದು-ಎರಡು ದಿನಗಳಿಂದ ಮುಂಬೈ ಇಂಡಿಯನ್ಸ್ (Mumbai Indians) ತಂಡದ ನಾಯಕ ರೋಹಿತ್ ಶರ್ಮಾ (Rohit Sharma) ಬಗ್ಗೆ ನಾನಾ ಸುದ್ದಿಗಳು ಹರಿದಾಡುತ್ತಿವೆ. ಏಪ್ರಿಲ್ 2 ರಂದು ಬೆಂಗಳೂರಿನಲ್ಲಿ ಆರ್‌ಸಿಬಿ ವಿರುದ್ಧ ಮುಂಬೈ (RCB vs MI) ತಂಡ ಮೊದಲ ಪಂದ್ಯ ಆಡಲಿದೆ. ಅದಕ್ಕೂ ಮುನ್ನ ತಂಡದ ನಾಯಕ ಎಲ್ಲಿದ್ದಾರೆ? ಈ ಪ್ರಶ್ನೆ ಎಲ್ಲರ ಮನದಲ್ಲೂ ಮೂಡುತ್ತದೆ. ಹೌದು, ರೋಹಿತ್ ಶರ್ಮಾ ಬಗ್ಗೆ ಬರುತ್ತಿರುವ ಸುದ್ದಿಯಿಂದ ಅಭಿಮಾನಿಗಳ ಟೆನ್ಷನ್ ಹೆಚ್ಚಾಗಿದೆ. ಐಪಿಎಲ್ 2023ರ ಎಲ್ಲಾ ನಾಯಕರ ಫೋಟೋ ಶೂಟ್ ಗುರುವಾರ ನಡೆಯಿತು. ಐಪಿಎಲ್ 16 ರಲ್ಲಿ 10 ತಂಡಗಳು ಆಡುತ್ತಿವೆ ಆದರೆ ಫೋಟೋ ಶೂಟ್‌ನಲ್ಲಿ 10ರ ಬದಲಿಗೆ 9 ನಾಯಕರು ಮಾತ್ರ ಕಾಣಸಿಕೊಂಡಿದ್ದಾರೆ.
ಕಾಣೆಯಾದ ರೋಹಿತ್:
ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಗುರುವಾರ ನಡೆದ ನಾಯಕರುಗಳ ಫೋಟೋದಿಂದ ಕಾಣೆಯಾಗಿದ್ದರು. ಈ ಫೋಟೋ ಹೊರಬಿದ್ದ ತಕ್ಷಣ ಮುಂಬೈ ಇಂಡಿಯನ್ಸ್ ಮತ್ತು ಹಿಟ್‌ಮ್ಯಾನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ರೋಹಿತ್ ಎಲ್ಲಿ ಹೋಗಿದ್ದಾರೆ ಎಂಬ ಪ್ರಶ್ನೆಗಳನ್ನು ಮಾಡುತ್ತಿದ್ದಾರೆ. ರೋಹಿತ್ ಶರ್ಮಾ ಎಲ್ಲಿ? ಪ್ರತಿಯೊಬ್ಬರೂ ತಮ್ಮ ನೆಚ್ಚಿನ ಆಟಗಾರನ ಬಗ್ಗೆ ತಿಳಿದುಕೊಳ್ಳಲು ಉತ್ಸುಕರಾಗಿದ್ದಾರೆ.
𝐓𝐡𝐞 #𝐓𝐀𝐓𝐀𝐈𝐏𝐋 𝟐𝟎𝟐𝟑 𝐒𝐭𝐚𝐫𝐭𝐬 𝐓𝐨𝐝𝐚𝐲!
Home & away challenge, interesting new additions and the return of packed crowds 🙌🏻
Hear from the captains ahead of an incredible season 👏🏻👏🏻 - By @Moulinparikh
WATCH the Full Video 🎥🔽 https://t.co/BaDKExCWP1 pic.twitter.com/jUeTXNnrzU
— IndianPremierLeague (@IPL) March 31, 2023
ಈ ಫೋಟೋದಲ್ಲಿ ರೋಹಿತ್ ಶರ್ಮಾ ಇಲ್ಲದಿರುವುದು ಅಭಿಮಾನಿಗಳ ಆತಂಕವನ್ನು ಹೆಚ್ಚಿಸಿದೆ ಮತ್ತು ಕೆಲವರು ಅವರನ್ನು ಟ್ರೋಲ್ ಮಾಡಿದ್ದಾರೆ. ರೋಹಿತ್ ಶರ್ಮಾ ಐಪಿಎಲ್‌ನ ಮೊದಲ ಕೆಲವು ಪಂದ್ಯಗಳನ್ನು ಆಡುವುದಿಲ್ಲ ಎಂದು ಮ್ಯಾನೇಜ್‌ಮೆಂಟ್ ಮಾಹಿತಿ ನೀಡಿದೆ. ರೋಹಿತ್ ಶರ್ಮಾ ಟೀಂ ಇಂಡಿಯಾದ ನಾಯಕರಾಗಿದ್ದಾರೆ ಮತ್ತು ಐಪಿಎಲ್ ನಂತರ ಅವರು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್, ಏಷ್ಯಾ ಕಪ್ ಮತ್ತು ಏಕದಿನ ವಿಶ್ವಕಪ್‌ನಂತಹ ದೊಡ್ಡ ಟೂರ್ನಿಗಳಲ್ಲಿ ತಂಡವನ್ನು ಮುನ್ನಡೆಸಬೇಕಾಗಿದೆ. ಅಂತಹ ಪರಿಸ್ಥಿತಿಯಲ್ಲಿ ಅವರ ಕೆಲಸದ ಹೊರೆಯನ್ನು ನಿರ್ವಹಿಸುವುದು ಕಡ್ಡಾಯವಾಗಿದೆ. ಆರಂಭಿಕ ಪಂದ್ಯಗಳಿಗೆ ರೋಹಿತ್ ತಂಡದಿಂದ ಹೊರಗುಳಿಯಬಹುದು ಎಂಬ ಮಾತು ಕೇಳಿಬರುತ್ತಿದೆ. ಇದಕ್ಕಾಗಿ ಅವರು ಫೋಟೋಶೂಟ್ನಲ್ಲಿ ಕಾಣಿಸಿಕೊಂಡಿಲ್ಲ ಎನ್ನಲಾಗುತ್ತಿದೆ.
ಇದನ್ನೂ ಓದಿ: MS Dhoni: ರಾಜಕೀಯಕ್ಕೆ ಧೋನಿ ಎಂಟ್ರಿ? ಈ ಪಕ್ಷದಿಂದಲೇ ಚುನಾವಣೆಗೆ ಸ್ಪರ್ಧಿಸ್ತಾರಾ ಕ್ಯಾಪ್ಟನ್ ಕೂಲ್?
ಇಂದಿನಿಂದ ಐಪಿಎಲ್ 16ನೇ ಸೀಸನ್ಗೆ ಚಾಲನೆ:
ಇನ್ನು, ಐಪಿಎಲ್ 2023ರ 16ನೇ ಸೀಸನ್ ಇಂದು ಆರಂಭವಾಗಲಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ (Narendra Modi Stadium) ನಡೆಯಲಿರುವ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK vs GT) ತಂಡವನ್ನು ಎದುರಿಸಲಿದೆ. ಈ ವರ್ಷ 52 ದಿನಗಳ ಅವಧಿಯಲ್ಲಿ 12 ಸ್ಥಳಗಳಲ್ಲಿ ಒಟ್ಟು 70 ಲೀಗ್ ಹಂತದ ಪಂದ್ಯಗಳು ನಡೆಯಲಿದೆ.
ಐಪಿಎಲ್ 2023 ರ ವೇಳಾಪಟ್ಟಿಯಂತೆ ಎಲ್ಲಾ ತಂಡಗಳು ಲೀಗ್ ಹಂತದಲ್ಲಿ ಕ್ರಮವಾಗಿ 7 ಹೋಮ್ ಪಂದ್ಯಗಳನ್ನು ಮತ್ತು 7 ಬೇರೆಡೆ ಪಂದ್ಯಗಳನ್ನು ಆಡುತ್ತವೆ. ಮುಂಬೈ ಇಂಡಿಯನ್ಸ್ ತಂಡವು ಎಪ್ರಿಲ್ 2ರಂದು ಐಪಿಎಲ್ನಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ. ಎಂಐ ತಂಡವು ತನ್ನ ಮೊದಲ ಪಂದ್ಯದಲ್ಲಿ ಆರ್‌ಸಿಬಿ ಅನ್ನು ಎದುರಿಸಲಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ