ಇಂಡಿಯನ್ ಪ್ರೀಮಿಯರ್ ಲೀಗ್ 2023ರ (IPl2023) ರಾಜಸ್ಥಾನ ರಾಯಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ (RR vs SRH) ನಡುವಿನ ಪಂದ್ಯವು ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ (Sawai Mansingh Stadium) ನಡೆಯುತ್ತಿದೆ. ತಮ್ಮ ಕೊನೆಯ ಎರಡು ಪಂದ್ಯಗಳಲ್ಲಿ ಸೋತ ನಂತರ ಸಂಜು ಸ್ಯಾಮ್ಸನ್ (Sanju Samson) ತಂಡವು ಸನ್‌ರೈಸರ್ಸ್ ಹೈದರಾಬಾದ್ ಗೆಲುವಿನ ಲಯಕ್ಕೆ ಮರಳಲು ಸಿದ್ಧವಾಗಿದೆ. ಸ್ಟಾರ್ ಬ್ಯಾಟರ್‌ಗಳಾದ ಜೋಸ್ ಬಟ್ಲರ್ ಮತ್ತು ಸಂಜು ಸ್ಯಾಮ್ಸನ್ ತಮ್ಮ ಫಾರ್ಮ್‌ನೊಂದಿಗೆ ಹೋರಾಡುತ್ತಿದ್ದು, ಭರ್ಜರಿ ಕಂಬ್ಯಾಕ್ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಟಾಸ್ ಆಗಿದ್ದು, ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡವು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದೆ. ಈ ಪಂದ್ಯವು ಹೈದರಾಬಾದ್ಗಿಂತ ಹೆಚಚ್ಆಗಿ ರಾಜಸ್ಥಾನ್ ತಂಡಕ್ಕೆ ಹೆಚ್ಚು ಮಹತ್ವದ್ದಾಗಿದೆ.
ಹೈದಾರಾಬಾದ್ - ರಾಜಸ್ಥಾನ್ ಹೆಡ್ ಟು ಹೆಡ್:
ಸನ್ ರೈಸರ್ಸ್ ಹೈದರಾಬಾದ್ ಮತ್ತು ರಾಜಸ್ಥಾನ್ ರಾಯಲ್ಸ್ ತಂಡಗಳು ಇದುವರೆಗೆ 17 ಬಾರಿ ಮುಖಾಮುಖಿಯಾಗಿವೆ. ರಾಜಸ್ಥಾನ ಒಂಬತ್ತು ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದರೆ, ಹೈದರಾಬಾದ್ ಎಂಟು ಬಾರಿ ಗೆಲುವು ಸಾಧಿಸಿದೆ. ಈ ಋತುವಿನ ಆರಂಭದಲ್ಲಿ ಎರಡು ತಂಡಗಳು ಕೊನೆಯ ಬಾರಿಗೆ ಮುಖಾಮುಖಿಯಾದವು ಮತ್ತು ಸಂಜು ಸ್ಯಾಮ್ಸನ್ ತಂಡವು 72 ರನ್‌ಗಳಿಂದ ವಿಜಯಶಾಲಿಯಾಗಿತ್ತು. ಹೀಗಾಗಿ ಇಂದಿನ ಪಂದ್ಯದ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.
🚨 Toss Update from Jaipur 🚨@rajasthanroyals elected to bat against @SunRisers!
Follow the match 👉 https://t.co/1EMWKvcgh9#TATAIPL | #RRvSRH pic.twitter.com/JrNKjpDPKi
— IndianPremierLeague (@IPL) May 7, 2023
ರಾಜಸ್ಥಾನ್ ರಾಯಲ್ಸ್ ತಂಡ ಇದುವರೆಗೆ ಆಡಿರುವ 10 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿದೆ. ಸದ್ಯ ಅಂಕಪಟ್ಟಿಯಲ್ಲಿ ಸಂಜು ತಂಡ ನಾಲ್ಕನೇ ಸ್ಥಾನದಲ್ಲಿದೆ. 9 ಪಂದ್ಯಗಳನ್ನಾಡಿರುವ ಹೈದರಾಬಾದ್ ತಂಡ ಇದುವರೆಗೆ ಕೇವಲ 3ರಲ್ಲಿ ಗೆದ್ದು ಕೊನೆಯ 10ನೇ ಸ್ಥಾನದಲ್ಲಿದೆ.
ಇದನ್ನೂ ಓದಿ: IPL 2023: 10ನೇ ಸ್ಥಾನಕ್ಕೆ ಕುಸಿದ ಆರ್ಸಿಬಿ, ಕಪ್ ಅಲ್ಲಾ ಈ ಪ್ರಶಸ್ತಿ ಸಹ ಸಿಗೋದು ಡೌಟ್ ಅಂದ್ರು ಫ್ಯಾನ್ಸ್!
ಹೈದರಾಬಾದ್ ಕಳಪೆ ಪ್ರದರ್ಶನ:
ಈ ಋತುವಿನಲ್ಲಿ ಹೈದರಾಬಾದ್ ಕಳಪೆ ಪ್ರದರ್ಶನದಿಂದ ನಿರಾಸೆ ಮೂಡಿಸಿದೆ. ಇದುವರೆಗೆ 9 ಪಂದ್ಯಗಳನ್ನಾಡಿರುವ ಎಸ್ ಆರ್ ಎಚ್ ಕೇವಲ 3 ಗೆಲುವು ಸಾಧಿಸಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಪ್ಲೇ-ಆಫ್ ರೇಸ್‌ನಲ್ಲಿ ಉಳಿಯಲು ಹೈದರಾಬಾದ್ ಉಳಿದ ಐದು ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ್ದು ಬಿಟ್ಟರೆ ಬ್ರೂಕ್ ಈ ಋತುವಿನಲ್ಲಿ ಗಮನಾರ್ಹ ಪ್ರದರ್ಶನ ನೀಡಿಲ್ಲ. ಅಭಿಷೇಕ್ ಶರ್ಮಾ ಮತ್ತು ರಾಹುಲ್ ತ್ರಿಪಾಠಿ ತಮ್ಮ ಫಾರ್ಮ್ ಅನ್ನು ಮುಂದುವರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಇಂದಿನ ಪಂದ್ಯದಲ್ಲಿ ಈ ಆಟಗಾರರು ಮಿಂಚದಿದ್ದರೆ ಗೆಲುವು ಕಷ್ಟಕರವಾಗಿರುತ್ತದೆ.
ಸನ್‌ರೈಸರ್ಸ್ ಹೈದರಾಬಾದ್ - ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ 11:
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಂ(ಸಿ), ಹೆನ್ರಿಚ್ ಕ್ಲಾಸೆನ್(ಡಬ್ಲ್ಯೂ), ಗ್ಲೆನ್ ಫಿಲಿಪ್ಸ್, ಅಬ್ದುಲ್ ಸಮದ್, ಮಾರ್ಕೊ ಜಾನ್ಸೆನ್, ವಿವ್ರಾಂತ್ ಶರ್ಮಾ, ಮಯಾಂಕ್ ಮಾರ್ಕಾಂಡೆ, ಭುವನೇಶ್ವರ್ ಕುಮಾರ್, ಟಿ ನಟರಾಜನ್.
ರಾಜಸ್ಥಾನ್ ರಾಯಲ್ಸ್ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(w/c), ಜೋ ರೂಟ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಮುರುಗನ್ ಅಶ್ವಿನ್, ಸಂದೀಪ್ ಶರ್ಮಾ, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ