• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • SRH vs PBKS: ಟಾಸ್​ ಗೆದ್ದ ಹೈದರಾಬಾದ್​, ಗೆಲುವಿನ ಹುಡುಕಾಟದಲ್ಲಿ ಸನ್​ರೈಸರ್ಸ್​; ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟ ಪಂಜಾಬ್

SRH vs PBKS: ಟಾಸ್​ ಗೆದ್ದ ಹೈದರಾಬಾದ್​, ಗೆಲುವಿನ ಹುಡುಕಾಟದಲ್ಲಿ ಸನ್​ರೈಸರ್ಸ್​; ಹ್ಯಾಟ್ರಿಕ್ ಗೆಲುವಿನ ಮೇಲೆ ಕಣ್ಣಿಟ್ಟ ಪಂಜಾಬ್

SRH vs PBKS

SRH vs PBKS

SRH vs PBKS: ಸನ್‌ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್‌ನಲ್ಲಿ ಇದುವರೆಗೆ 20 ಬಾರಿ ಮುಖಾಮುಖಿಯಾಗಿವೆ. ಹೈದರಾಬಾದ್ 13 ಪಂದ್ಯಗಳನ್ನು ಗೆದ್ದಿದ್ದರೆ, ಪಂಜಾಬ್ 7 ಪಂದ್ಯಗಳನ್ನು ಗೆದ್ದಿದೆ.

  • Share this:

ಐಪಿಎಲ್​ (IPL 2023) 14 ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ (SRH v PBKS) ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿದೆ. ಪಂಜಾಬ್ ಕಿಂಗ್ಸ್ ತಂಡ ಸತತ ಎರಡು ಪಂದ್ಯಗಳನ್ನು ಗೆದ್ದಿದ್ದರೆ, ಸನ್ ರೈಸರ್ಸ್ ಹೈದರಾಬಾದ್ ಎರಡೂ ಪಂದ್ಯಗಳಲ್ಲಿ ಸೋತಿದೆ. ಹೈದರಾಬಾದ್ ತವರಿನಲ್ಲಿ ಗೆಲುವಿನ ಟ್ರ್ಯಾಕ್‌ಗೆ ಮರಳಲು ಸಿದ್ಧವಾಗಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಹೈದರಾಬಾದ್ ಸೋಲು ಕಂಡಿತ್ತು. ತಂಡದ ನೂತನ ನಾಯಕ ಏಡೆನ್ ಮಾರ್ಕ್ರಾಮ್ ಎರಡನೇ ಪಂದ್ಯದಲ್ಲಿ ಹೈದರಾಬಾದ್ ತಂಡವನ್ನು ಸೇರಿಕೊಂಡಿದ್ದರು. ಆದರೆ, ಬಂದ ನಂತರವೂ ತಂಡದ ಅದೃಷ್ಟ ಬದಲಾಗಲಿಲ್ಲ. ಈಗಾಗಲೇ ಟಾಸ್​ ಗೆದ್ದ ಸನ್​ರೈಸರ್ಸ್​ ಹೈದರಾಬಾದ್​ ಮೊದಲು ಬೌಲಿಂಗ್​ ಆಯ್ಕೆ ಮಾಡಿಕೊಂಡಿದೆ.


ಗೆಲುವಿನ ನಗೆಬೀರಲು ಹೈದರಾಬಾದ್​ ಸಿದ್ಧ:


ಮೊಬೈಲ್‌ನಲ್ಲಿ Jio ಸಿನಿಮಾ ಅಪ್ಲಿಕೇಶನ್‌ನಲ್ಲಿ IPL 14 ನೇ ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಉಚಿತವಾಗಿ ವೀಕ್ಷಿಸಬಹುದು. ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ನೀವು ಅದರ ನೇರ ಪ್ರಸಾರವನ್ನು ದೂರದರ್ಶನದಲ್ಲಿ ವೀಕ್ಷಿಸಬಹುದು. ಇನ್ನು, ಸನ್ ರೈಸರ್ಸ್ ಹೈದರಾಬಾದ್ ತಂಡದ ನೂತನ ನಾಯಕ ಈಡನ್ ಮಾರ್ಕ್ರಾಮ್ ಮೊದಲ ಪಂದ್ಯದಲ್ಲಿ ತಂಡವನ್ನು ಸೇರಿಕೊಳ್ಳಲಾಗಲಿಲ್ಲ. ಭುವನೇಶ್ವರ್ ಕುಮಾರ್ ಮೊದಲ ಪಂದ್ಯದಲ್ಲಿ ಎಸ್‌ಆರ್‌ಎಚ್ ನಾಯಕರಾಗಿದ್ದರು.  ಆದರೆ ಆ ಪಂದ್ಯದಲ್ಲಿ ಅಲ್ಲದೇ ಮುಂದಿನ ಪಂದ್ಯದಲ್ಲಿಯೂ ಹೈದರಾಬಾದ್​ ಸೋತಿತ್ತು.


ಪಂಜಾಬ್​ - ಹೈದರಾಬಾದ್​ ಹೆಡ್​ ಟು ಹೆಡ್​:


ಸನ್‌ರೈಸರ್ಸ್ ಹೈದರಾಬಾದ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್‌ನಲ್ಲಿ ಇದುವರೆಗೆ 20 ಬಾರಿ ಮುಖಾಮುಖಿಯಾಗಿವೆ. ಹೈದರಾಬಾದ್ 13 ಪಂದ್ಯಗಳನ್ನು ಗೆದ್ದಿದ್ದರೆ, ಪಂಜಾಬ್ 7 ಪಂದ್ಯಗಳನ್ನು ಗೆದ್ದಿದೆ. ಹೈದರಾಬಾದ್ ಒಂದಕ್ಕಿಂತ ಹೆಚ್ಚು ಬ್ಯಾಟ್ಸ್‌ಮನ್‌ಗಳನ್ನು ಹೊಂದಿದೆ ಆದರೆ ಅವರು ಕಳೆದ ಎರಡು ಪಂದ್ಯಗಳಲ್ಲಿ ವಿಫಲರಾಗಿದ್ದಾರೆ. ಕಳೆದ ಪಂದ್ಯದಲ್ಲಿ ನಾಯಕ ಏಡೆನ್ ಮಾರ್ಕ್ರಾಮ್ ಶೂನ್ಯಕ್ಕೆ ಔಟಾದರು.



ಹ್ಯಾರಿ ಬ್ರೂಕ್ ಕೂಡ ಇಲ್ಲಿಯವರೆಗೆ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಇದುವರೆಗೆ 65 ಐಪಿಎಲ್ ಪಂದ್ಯಗಳು ನಡೆದಿದ್ದು, ಇಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 28 ಬಾರಿ ಗೆದ್ದಿದ್ದರೆ, ಚೇಸಿಂಗ್ ತಂಡ 37 ಪಂದ್ಯಗಳನ್ನು ಗೆದ್ದಿದೆ. ಇಂತಹ ಪರಿಸ್ಥಿತಿಯಲ್ಲಿ ಈ ಪಂದ್ಯದಲ್ಲಿ ಟಾಸ್ ಗೆದ್ದ ತಂಡ ಮೊದಲು ಬೌಲಿಂಗ್ ಮಾಡಲು ಆದ್ಯತೆ ನೀಡಬಹುದು.


ಇದನ್ನೂ ಓದಿ: Shreyas Iyer: ಚಹಾಲ್​ ಪತ್ನಿ ಜೊತೆ ಶ್ರೇಯಸ್​ ಅಯ್ಯರ್ ಸಖತ್ ಪಾರ್ಟಿ! ಪತಿಯಿಂದ ದೂರವಾಗ್ತಿದ್ದಾರಾ ಧನಶ್ರೀ ವರ್ಮಾ?


ಪಂಜಾಬ್​ - ಹೈದರಾಬಾದ್​ ಪ್ಲೇಯಿಂಗ್​ 11:


ಪಂಜಾಬ್ ಕಿಂಗ್ಸ್ ಪ್ಲೇಯಿಂಗ್​ 11: ಶಿಖರ್ ಧವನ್ (ನಾಯಕ), ಪ್ರಭ್‌ಸಿಮ್ರಾನ್ ಸಿಂಗ್, ಮ್ಯಾಥ್ಯೂ ಶಾರ್ಟ್, ಜಿತೇಶ್ ಶರ್ಮಾ, ಶಾರುಖ್ ಖಾನ್, ಸ್ಯಾಮ್ ಕರನ್, ನಾಥನ್ ಎಲ್ಲಿಸ್, ಮೋಹಿತ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್ ಮತ್ತು ಅರ್ಶ್‌ದೀಪ್ ಸಿಂಗ್.


ಹೈದರಾಬಾದ್ ಪ್ಲೇಯಿಂಗ್​ 11: ಅಭಿಷೇಕ್ ಶರ್ಮಾ, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಏಡೆನ್ ಮಾರ್ಕ್ರಾಮ್ (c), ಹ್ಯಾರಿ ಬ್ರೂಕ್, ಹೆನ್ರಿಚ್ ಕ್ಲಾಸೆನ್ (wk), ವಾಷಿಂಗ್ಟನ್ ಸುಂದರ್, ಆದಿಲ್ ರಶೀದ್/ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್.

First published: