ಇಂಡಿಯನ್ ಪ್ರೀಮಿಯರ್ ಲೀಗ್ನ (IPL 2023 Mini Auction) ಮುಂದಿನ ಸೀಸನ್ಗಾಗಿ ಆಟಗಾರರ ಹರಾಜು ಕೆಲವೇ ಗಂಟೆಗಳಲ್ಲಿ ಪ್ರಾರಂಭವಾಗುತ್ತದೆ. ಕೊಚ್ಚಿಯ (Kochi) ಗ್ರ್ಯಾಂಡ್ ಹಯಾತ್ ಹೋಟೆಲ್ನಲ್ಲಿ ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ. ಐಪಿಎಲ್ನ ಮಿನಿ ಹರಾಜಿನಲ್ಲಿ ಒಟ್ಟು 405 ಆಟಗಾರರು ಅಂತಿಮ ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇಂದು ಮಧ್ಯಾಹ್ನದಿಂದ ಹರಾಜು ಪ್ರಕ್ರಿಯೆ ಆರಂಭವಾಗಲಿದೆ. ಈ ಬಾರಿ ಆಸ್ಟ್ರೇಲಿಯಾದ ಉದಯೋನ್ಮುಖ ಆಲ್ರೌಂಡರ್ ಕ್ಯಾಮರೂನ್ ಗ್ರೀನ್ (Cameron Green), ಇಂಗ್ಲೆಂಡ್ನ ಸ್ಟಾರ್ ಆಲ್ರೌಂಡರ್ ಬೆನ್ ಸ್ಟೋಕ್ಸ್ (Ben Stokes) ಮತ್ತು ಸ್ಯಾಮ್ ಕರನ್ (Sam Curran) ಹರಾಜಿನಲ್ಲಿ ದೊಡ್ಡ ಮೊತ್ತವನ್ನು ಗಳಿಸಬಹುದು ಎಂದು ಹೇಳಲಾಗುತ್ತಿದೆ. ಈ ಮೂವರೂ ಆಟಗಾರರು ಸದ್ಯ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಎಲ್ಲಾ ಫ್ರಾಂಚೈಸಿಗಳು ಈ ಆಟಗಾರರ ಮೇಲೆ ಕಣ್ಣಿಟ್ಟಿವೆ. ವಿಶ್ವದಾದ್ಯಂತ 87 ಆಟಗಾರರ ಮೇಲೆ ಬಿಡ್ಡಿಂಗ್ ನಡೆಯಲಿದೆ.
ಈ ಮಿನಿ ಹರಾಜಿನಲ್ಲಿ ವಿಶ್ವದಾದ್ಯಂತ 405 ಆಟಗಾರರು ಭಾಗವಹಿಸಲಿದ್ದಾರೆ. ಐಪಿಎಲ್ನ 10 ಫ್ರಾಂಚೈಸಿಗಳು ಹರಾಜಿಗೂ ಮುನ್ನ ಒಟ್ಟು 163 ಆಟಗಾರರನ್ನು ಉಳಿಸಿಕೊಂಡಿವೆ. ಈಗ 87 ಆಟಗಾರರ ಸ್ಲಾಟ್ ಖಾಲಿಯಾಗಿದೆ. ಈ ಬಾರಿ ಹರಾಜಿನಲ್ಲಿ ಫ್ರಾಂಚೈಸಿಯ ಒಟ್ಟು ಪರ್ಸ್ 206.5 ಕೋಟಿ ಉಳಿದಿದೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ