ಭಾರತ ತಂಡದ ಯಶಸ್ವಿ ನಾಯಕರಲ್ಲಿ ಮಹೇಂದ್ರ ಸಿಂಗ್ ಧೋನಿ (MS Dhoni) ಕೂಡ ಒಬ್ಬರು. ಅವರು ಭಾರತಕ್ಕೆ 2 ವಿಶ್ವಕಪ್ (World Cup) ಗೆಲ್ಲಿಸಿಕೊಟ್ಟಿದ್ದಾರೆ. 2020ರಲ್ಲಿ ಆಗಸ್ಟ್ 15ರಂದು ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದರು. ಧೋನಿ ಬ್ಯಾಟ್ಸ್‌ಮನ್, ವಿಕೆಟ್ ಕೀಪರ್, ಫೀಲ್ಡರ್ ಮತ್ತು ಕೆಲವೊಮ್ಮೆ ಬೌಲರ್ ಆಗಿ ಮೈದಾನದಲ್ಲಿ ಕಾಣಿಸಿಕೊಂಡರು. ಆದರೆ, ಈಗ ಎಂಎಸ್ ಧೋನಿ ಅವರ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಇದರಲ್ಲಿ ಅವರು ಪೊಲೀಸ್ (Police) ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಧೋನಿ ಫೋಟೋ ವೈರಲ್:
ವಾಸ್ತವವಾಗಿ, ಮಹೇಂದ್ರ ಸಿಂಗ್ ಧೋನಿ ಅವರ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ಅದರಲ್ಲಿ ಅವರು ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಹೇಂದ್ರ ಸಿಂಗ್ ಧೋನಿ ಈ ಪೊಲೀಸ್ ಸಮವಸ್ತ್ರವನ್ನು ಜಾಹೀರಾತಿಗಾಗಿ ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಮಹೇಂದ್ರ ಸಿಂಗ್ ಧೋನಿಗೆ ಭಾರತೀಯ ಸೇನೆಯ ಪ್ಯಾರಾ ಫೋರ್ಸ್‌ನಲ್ಲಿ ಲೆಫ್ಟಿನೆಂಟ್ ಕರ್ನಲ್ ಪ್ರಮಾಣಿತ ಶ್ರೇಣಿಯನ್ನು ನೀಡಿ ಗೌರವಿಸಲಾಗಿದೆ. ಅದಲ್ಲದೇ ತರಬೇತಿ ವೇಳೆ ಕಾಶ್ಮೀರದಲ್ಲಿ ಧೋನಿ ಜವಾನರೊಂದಿಗೆ ಕಾಲ ಕಳೆದಿದ್ದಾರೆ.
MS Dhoni as a police officer in an ad. pic.twitter.com/nleS9DR8bh
— Johns. (@CricCrazyJohns) February 2, 2023
ಇನ್ನು, ಧೋನಿ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರಬಹುದು. ಆದರೆ ಅವರು ಇನ್ನೂ ಐಪಿಎಲ್ ಆಡುತ್ತಿದ್ದಾರೆ. 2023ರ ಐಪಿಎಲ್ ಅವರಿಗೆ ಕೊನೆಯ ಐಪಿಎಲ್ ಆಗಿರಬಹುದು. ಅವರ ಪ್ರದರ್ಶನದ ಬಗ್ಗೆ ಮಾತನಾಡುತ್ತಾ, ಅವರು ತಮ್ಮ ಐಪಿಎಲ್ ತಂಡ ಚೆನ್ನೈ ಸೂಪರ್ ಕಿಂಗ್ಸ್‌ಗೆ 4 ಬಾರಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. ಅವರು 2022ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ತೊರೆದಿದ್ದರು. ಅವರ ಸ್ಥಾನಕ್ಕೆ ಫ್ರಾಂಚೈಸಿ ಅನುಭವಿ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರನ್ನು ನಾಯಕನನ್ನಾಗಿ ಮಾಡಿತ್ತು. ಆದರೆ 8 ಪಂದ್ಯಗಳ ನಂತರ ಜಡೇಜಾ ನಾಯಕತ್ವದಲ್ಲಿ ತಂಡ ಕಳಪೆ ಪ್ರದರ್ಶನ ನೀಡಿತು. ಇದರಿಂದಾಗಿ ಮತ್ತೊಮ್ಮೆ ಮಹೇಂದ್ರ ಸಿಂಗ್ ಧೋನಿಗೆ ನಾಯಕತ್ವ ನೀಡಲಾಗಿದೆ.
ಇದನ್ನೂ ಓದಿ: Shubman Gill: ಒಂದೇ ಒಂದು ಶತಕಕ್ಕೆ 10 ದಾಖಲೆಗಳು ಉಡೀಸ್, ಶುಭ್ಮನ್ ಗಿಲ್ ಅಬ್ಬರಕ್ಕೆ ದಂಗಾದ ವಿಶ್ವ ಕ್ರಿಕೆಟ್
ಅಭ್ಯಾಸ ಆರಂಬಿಸಿದ ಮಹೇಂದ್ರ ಸಿಂಗ್ ಧೋನಿ:
ಐಪಿಎಲ್ 2023ಗಾಗಿ ಮಹೇಂದ್ರ ಸಿಂಗ್ ಧೋನಿ ನೆಟ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ಆರಂಭಿಸಿದ್ದಾರೆ. ಅವರು ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆಯ ಮೈದಾನದಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಅದರಲ್ಲಿಯೂ ಧೋನಿ ಅಭಿಮಾನಿಗಳು ಮತ್ತೆ ಅವರನ್ನು ಮೈದಾನದಲ್ಲಿ ನೋಡಲು ಕಾತುರರಾಗಿದ್ದಾರೆ.
ಈ ಬಾರಿ ನಂತ್ರ ಧೋನಿ ನಿವೃತ್ತಿ:
ಇನ್ನು, ಧೋನಿ ತವರಿನಲ್ಲಿಯೇ ತನ್ನ ಕೊನೆಯ ಐಪಿಎಲ್ ಪಂದ್ಯವನ್ನು ಆಡುವುದಾಗಿ ಹೇಳಿಕೊಂಡಿದ್ದರು. ಹೀಗಾಗಿ ಈ ಬಾರಿ ಐಪಿಎಲ್ 2023 ಭಾರತದಲ್ಲಿಯೇ ನಡೆಯುತ್ತಿರುವುದರಿಂದ ಈ ಐಪಿಎಲ್ ಬಳಿಕ ಧೋನಿ ನಿವೃತ್ತಿ ಪಡೆಯುವ ಸಾಧ್ಯತೆ ಇದೆ. ಹೀಗಾಗಿ ಧೋನಿಯನ್ನು ಕೊನೆಯ ಬಾರಿಗೆ ಮೈದಾನದಲ್ಲಿ ನೋಡಬಹುದಾಗಿದೆ. ಹೀಗಾಗಿ ಈ ಬಾರಿ ಐಪಿಎಲ್ ಅನ್ನು ಗೆದ್ದು ಧೋನಿಗೆ ಅದ್ಧೂರಿಯಾಗಿ ಬಿಳ್ಕೊಡಲು ಸಿಎಸ್ಕೆ ಭರ್ಜರಿಯಾಗಿ ಸಿದ್ಧವಾಗಿದೆ.
ಐಪಿಎಲ್ 2023ಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡ:
ಮಹೇಂದ್ರ ಸಿಂಗ್ ಧೋನಿ (c), ಡೆವೊನ್ ಕಾನ್ವೇ, ರುತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಪತಿರ್ನಾ ಜಡೇಜಾ, ಮುಖೇಶ್ ದೇಶಪಾಂಡೆ, , ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಭಗತ್ ವರ್ಮಾ, ಅಜಯ್ ಮಂಡಲ್, ಕೈಲ್ ಜೇಮಿಸನ್, ನಿಶಾಂತ್ ಸಿಂಧು, ಶೇಕ್ ರಶೀದ್, ಬೆನ್ ಸ್ಟೋಕ್ಸ್ , ಅಜಿಂಕ್ಯ ರಹಾನೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ