Keshav Dutt: ಹಾಕಿ ದಂತಕಥೆ ಕೇಶವ್ ದತ್ ನಿಧನ..!

ಕೇಶವ್ ದತ್ ನಿಧನಕ್ಕೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದು, ಹಾಕಿ ಜಗತ್ತು ಶ್ರೇಷ್ಠ ಆಟಗಾರರೊಬ್ಬರನ್ನು ಕಳೆದುಕೊಂಡಿದೆ ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

keshav chandra dutt

keshav chandra dutt

  • Share this:
    ಹಾಕಿ ದಂತಕಥೆ ಕೇಶವ್ ದತ್ (95) ಅವರು ವಯೋಸಹಜ ಕಾಯಿಲೆಗಳಿಂದ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅವರು​ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಟೀಮ್ ಇಂಡಿಯಾ ಹಾಕಿ ತಂಡದ ಆಟಗಾರನಾಗಿದ್ದ ಕೇಶವಚಂದ್ರ ದತ್ ಅವರು​ 1948 ಹಾಗೂ 1952ರಲ್ಲಿ ಒಲಿಂಪಿಕ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಅಲ್ಲದೆ 1948 ಮತ್ತು 1952 ರ ಒಲಿಂಪಿಕ್ ಕ್ರೀಡಾಕೂಟದಲ್ಲಿ ಚಿನ್ನ ಗೆದ್ದ ತಂಡದ ಸದಸ್ಯರಾಗಿದ್ದರು.

    ಭಾರತ ತಂಡವನ್ನಲ್ಲದ್ದೇ 1951, 1953ರಲ್ಲಿ ಮತ್ತು 1957, 1958ರಲ್ಲಿ ಪಶ್ಚಿಮ ಬಂಗಾಳದ ಮೋಹನ್ ಬಗಾನ್ ಹಾಕಿ ತಂಡವನ್ನು ಮುನ್ನಡೆಸಿದ್ದರು. ಅಷ್ಟೇ ಅಲ್ಲದೆ ಅವರ ಉಪಸ್ಥಿತಿಯಲ್ಲಿ ಮೋಹನ್ ಬಗಾನ್ ತಂಡವು ಆರು ಬಾರಿ ಹಾಕಿ ಲೀಗ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಹಾಕಿ ಕ್ಷೇತ್ರದಲ್ಲಿ ಇವರ ಕೊಡುಗೆಯನ್ನು ಪರಿಗಣಿಸಿ 2019ರಲ್ಲಿ ಕೇಶವ್ ದತ್ ಅವರಿಗೆ ಮೋಹನ್ ಬಗಾನ್ ರತ್ನ ನೀಡಿ ಗೌರವಿಸಲಾಗಿತ್ತು.

    ಕೇಶವ್ ದತ್ ನಿಧನಕ್ಕೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಸಂತಾಪ ಸೂಚಿಸಿದ್ದು, ಹಾಕಿ ಜಗತ್ತು ಶ್ರೇಷ್ಠ ಆಟಗಾರರೊಬ್ಬರನ್ನು ಕಳೆದುಕೊಂಡಿದೆ ಎಂದು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಹಾಗೆಯೇ ಕೇಶವ್​​ರ ನಿಧನದ ವಾರ್ತೆ ಬಗ್ಗೆ ಸಂತಾಪ ಸೂಚಿಸಿರುವ ಹಾಕಿ ಇಂಡಿಯಾ ಅಧ್ಯಕ್ಷ ಜ್ಞಾನೇಂದ್ರೋ ನಿಂಗೋಂಬಮ್, ಈ ಅಗಲಿಕೆಯು ಒಂದು ಯುಗದ ಅಂತ್ಯವಾದಂತೆ ಭಾಸವಾಗುತ್ತಿದೆ ಎಂದು ತಿಳಿಸಿದ್ದಾರೆ. ಇನ್ನು ಅನೇಕ ಕ್ರೀಡಾಪಟುಗಳು ಒಲಿಂಪಿಕ್​ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ಕೇಶವ್ ದತ್ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

    (ನ್ಯೂಸ್​​​18 ಕನ್ನಡ ಕಳಕಳಿ: ಕೊರೋನಾ ಪಾಸಿಟಿವ್​ ಕೇಸ್​ಗಳ ಸಂಖ್ಯೆ ರಾಜ್ಯದಲ್ಲಿ ತಗ್ಗಿದೆಯಾದರೂ ಸೋಂಕಿನ ಅಪಾಯದಿಂದ ಸಂಪೂರ್ಣವಾಗಿ ಇನ್ನೂ ಯಾರೂ ಸುರಕ್ಷಿತರಲ್ಲ. ಹೀಗಾಗಿ ಪ್ರತಿಯೊಬ್ಬರು ಕೋವಿಡ್​​ ನಿಯಮಗಳಾದ ಮಾಸ್ಕ್​​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದನ್ನು ಮರೆಯಬಾರದು. ಆದಷ್ಟು ಶೀಘ್ರವೇ ಲಸಿಕೆ ಪಡೆದು ಸೋಂಕಿನ ವಿರುದ್ಧದ ಯುದ್ಧದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು.)
    Published by:zahir
    First published: