T20 World Cup 2022: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟ; ಸ್ಟಾರ್​ ಬ್ಯಾಟ್ಸ್​ಮನ್ ಔಟ್, ​ಬೆಂಕಿ ಬೌಲರ್​ ಇನ್

T20 World Cup 2022: ಮುಂಬರುವ ಟಿ20 ವಿಶ್ವಕಪ್‌ಗಾಗಿ (T20 World Cup) ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ತನ್ನ 15 ಮಂದಿಯ ತಂಡವನ್ನು ಪ್ರಕಟಿಸಿದೆ. ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ.

ಪಾಕಿಸ್ತಾನ ತಂಡ

ಪಾಕಿಸ್ತಾನ ತಂಡ

  • Share this:
 ಮುಂಬರುವ ಟಿ20 ವಿಶ್ವಕಪ್‌ಗಾಗಿ (T20 World Cup) ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ತನ್ನ 15 ಮಂದಿಯ ತಂಡವನ್ನು ಪ್ರಕಟಿಸಿದೆ. ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಈ ಹಿನ್ನಲೆ ಪಾಕ್​ ತಂಡವನ್ನು ಪ್ರಕಟಿಸಲಾಗಿದ್ದು, ಬಾಬರ್ ಆಜಮ್ ( Babar Azam) ತಂಡದ ನಾಯಕರಾಗಿದ್ದಾರೆ. ಏಷ್ಯಾಕಪ್ ನಲ್ಲಿ (Asia Cup 2022) ಕಳಪೆ ಪ್ರದರ್ಶನ ನೀಡಿದ ಫಖರ್ ಜಮಾನ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಎಡಗೈ ಬ್ಯಾಟ್ಸ್‌ಮನ್ ಫಖರ್ ಜಮಾನ್ ಏಷ್ಯಾ ಕಪ್ 2022 ರಲ್ಲಿ ಕಳಪೆ ಪ್ರದರ್ಶನವನ್ನು ನೀಡಿದ್ದರು. ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಏಷ್ಯಾಕಪ್‌ನಲ್ಲಿ ಹಾಂಕಾಂಗ್ ವಿರುದ್ಧ ಕೇವಲ ಒಂದು ಅರ್ಧಶತಕವನ್ನು ಮಾತ್ರ ಅವರು ಆಡಿದ್ದರು. ಆದರೆ ತಂಡದಿಂದ ಹೊರಗುಳಿದಿದ್ದ ಸ್ಟಾರ್​ ಬೌಲರ್​ ಆಗಮನವಾಗಿದೆ.

ಟಿ20 ವಿಶ್ವಕಪ್​ಗೆ ಪಾಕ್​ ತಂಡ:

ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಆಸಿಫ್ ಅಲಿ, ಹೈದರಿ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಮೊಹಮ್ಮದ್ ಹಸ್ನೇನ್, ಮೊಹಮ್ಮದ್ ನವಾಜ್, ಮೊಹಮ್ಮದ್ ರಿಜ್ವಾನ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಶಾಹೀನ್ ಶಾಹ್ ಅಫ್ರಿದಿ, ಶಾನ್ ಮಸೂದ್, ಉಸ್ಮಾನ್ ಖಾದಿರ್.

ಮೀಸಲು ಆಟಗಾರರು: ಫಖರ್ ಜಮಾನ್, ಮೊಹಮ್ಮದ್ ಹ್ಯಾರಿಸ್, ಶಹನವಾಜ್ ದಹಾನಿ.

ಸ್ಟಾರ್​ ಬ್ಯಾಟ್ಸ್​ಮನ್ ಔಟ್​, ಸ್ಟಾರ್​ ಬೌಲರ್​ ಇನ್​:

ಏಷ್ಯಾ ಕಪ್ ಮೂಲಕ ಟಿ20 ಅಂತರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಯುವ ವೇಗಿ ನಸೀಮ್ ಶಾ ಕೂಡ ವಿಶ್ವಕಪ್ ತಂಡದಲ್ಲಿ ಸೇರ್ಪಡೆಗೊಂಡಿದ್ದಾರೆ. ಏಷ್ಯಾಕಪ್ ನಲ್ಲಿ ನಸೀಮ್ ಅದ್ಭುತ ಬೌಲಿಂಗ್ ಮಾಡಿದ್ದರು. ಗಾಯದ ಸಮಸ್ಯೆಯಿಂದ ಏಷ್ಯಾಕಪ್ ಟೂರ್ನಿಯಿಂದ ಹೊರಗುಳಿದಿದ್ದ ಎಡಗೈ ವೇಗಿ ಶಾಹೀನ್ ಶಾ ಆಫ್ರಿದಿ ಇದೀಗ ಗಾಯದಿಂದ ಗುಣಮುಖರಾಗಿದ್ದು, ತಂಡಕ್ಕೆ ವಾಪಸ್ಸಾಗಿದ್ದಾರೆ. ಆದರೆ ಆದರೆ ಅನುಭವಿ ಸ್ಫೋಟಕ ಬ್ಯಾಟ್ಸ್‌ಮನ್ ಫಖರ್ ಜಮಾನ್ ಅವರನ್ನು ಮಾತ್ರ ಈ ತಂಡದಿಂದ ಕೈಬಿಡಲಾಗಿದೆ. ಏಷ್ಯಾಕಪ್‌ನಲ್ಲಿ ಜಮಾನ್‌ರ ಪ್ರದರ್ಶನ ತೀರಾ ಕಳಪೆಯಾಗಿತ್ತು.ಇನ್ನೊಂದೆಡೆ, ಒಂದೇ ಒಂದು ಅಂತರಾಷ್ಟ್ರೀಯ ಪಂದ್ಯವನ್ನೂ ಆಡದ ಎಡಗೈ ಬ್ಯಾಟ್ಸ್‌ಮನ್ ಶಾನ್ ಮಸೂದ್ ತಂಡಕ್ಕೆ ಆಯ್ಕೆ ಆಗಿದ್ದು ಎಲ್ಲರನ್ನೂ ಅಚ್ಚರಿಗೊಳಿಸಿದೆ.

ಇದನ್ನೂ ಓದಿ: ICC T20 WC 2022 IND vs PAK: ಭಾರತ-ಪಾಕ್​ ಪಂದ್ಯ, ತಿಂಗಳ ಮುಂಚೆಯೇ ಟಿಕೆಟ್​ಗಳು ಸೋಲ್ಡ್ ಔಟ್

3ನೇ ಬಾರಿ ಇಂಡೋ-ಪಾಕ್​ ಕದನ:

ಈ ಬಾರಿ ಕ್ರಿಕೆಟ್​ ಅಭಿಮಾನಿಗಳಿಗೆ ಭರ್ಜರಿ ಹಬ್ಬವಿದ್ದಂತೆ. ಏಕೆಂದರೆ ಈಗಾಗಲೇ ಭಾರತ ಮತ್ತು ಪಾಕಿಸ್ತಾನ ತಂಡಗಳು ಏಷ್ಯಾ ಕಪ್​ 2022ರಲ್ಲಿ 2 ಬಾರಿ ಮುಖಾಮುಖಿ ಆಗಿವೆ. ಇದೀಗ ಮತ್ತೆ ಐಸಿಸಿ ಟಿ20 ವಿಶ್ವಕಪ್​ 2022ರಲ್ಲಿ ಉಭಯ ತಂಡಗಳು ಸೆಣಸಲಿದ್ದು, ಸೂಪರ್​ 4 ಹಂತದಲ್ಲಿನ ಸೋಲಿಗೆ ಭಾರತ ತಂಡ ಯಾವ ರೀತಿ ಉತ್ತರ ನೀಡಲಿದೆ ಎಂದು ಅಭಿಮಾನಿಗಳು ಕಾತುರರಾಗಿದ್ದಾರೆ.

ಇದನ್ನೂ ಓದಿ: T20 world cup 2022: ಟಿ20 ವಿಶ್ವಕಪ್​​ಗೆ ವೆಸ್ಟ್ ಇಂಡೀಸ್ ತಂಡ ಪ್ರಕಟ, ಇಬ್ಬರು ಸ್ಟಾರ್​ ಆಟಗಾರರಿಗೆ ಕೋಕ್

ಟಿ20 ವಿಶ್ವಕಪ್​ನ ರಣ ರೋಚಕ ಹೈವೋಲ್ಟೇಜ್​ ಪಂದ್ಯವಾದ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವಿನ ಪಂದ್ಯವು ಅಕ್ಟೋಬರ್ 23 ರಂದು ನಡೆಯಲಿದೆ. ಈ ಪಂದ್ಯದ ಎಲ್ಲಾ ಟಿಕೆಟ್‌ಗಳು ಬಿಡುಗಡೆ ಆದ ಕೆಲವೇ ಕ್ಷಣಗಳಲ್ಲಿ ಮಾರಾಟವಾಗಿದೆ. ಅಕ್ಟೋಬರ್ 23 ರಂದು ಮೆಲ್ಬೋರ್ನ್‌ನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಎಲ್ಲಾ ಟಿಕೆಟ್‌ಗಳು ಮಾರಾಟವಾಗಿವೆ ಎಂದು ಐಸಿಸಿ ಹೇಳಿಕೆಯಲ್ಲಿ ತಿಳಿಸಿದೆ. ಈ ಪಂದ್ಯಕ್ಕೆ ಬಿಡುಗಡೆಯಾದ ಹೆಚ್ಚುವರಿ ಟಿಕೆಟ್‌ಗಳು ಕೆಲವೇ ನಿಮಿಷಗಳಲ್ಲಿ ಮಾರಾಟವಾಗಿವೆ ಎಂದು ಐಸಿಸಿ ತಿಳಿಸಿದೆ.
Published by:shrikrishna bhat
First published: