ಐಪಿಎಲ್ 2023 (IPL 2023) ಭರ್ಜರಿಯಾಗಿ ಆರಂಭವಾಗಿದೆ. ಇಂದು ಡಬಲ್ ಹೆಡ್ಡರ್ ಪಂದ್ಯ ನಡೆಯಲಿದ್ದು, ಐಪಿಎಲ್‌ನ ಎರಡನೇ ಪಂದ್ಯ ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (PBKS vs KKR) ನಡುವೆ ಮೊಹಾಲಿಯಲ್ಲಿ ನಡೆಯಲಿದೆ. ಭಾರತ ತಂಡದ ಅನುಭವಿ ಬ್ಯಾಟ್ಸ್‌ಮನ್ ಶಿಖರ್ ಧವನ್ ( Shikhar Dhawan) ಸುಮಾರು 3 ತಿಂಗಳ ನಂತರ ಮೈದಾನಕ್ಕೆ ಮರಳಲಿದ್ದಾರೆ. ಕೋಲ್ಕತ್ತಾ ಪರ ನಿತೀಶ್ ರಾಣಾ ನಾಯಕತ್ವವನ್ನು ವಹಿಸಲಿದ್ದಾರೆ. ಮೊದಲ ಪಂದ್ಯ ಮೊಹಾಲಿಯ ಪಂಜಾಬ್ ಕ್ರಿಕೆಟ್ ಸಂಸ್ಥೆ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ (Punjab Cricket Association Stadium) ನಡೆಯಲಿದೆ. ಈಗಾಗಲೇ ಟಾಸ್ ಗೆದ್ದ ಕೋಲ್ಕತ್ತಾ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡಿದರು. ಜೊತೆಗೆ ಕಳೆದ ಕೆಲವು ತಿಂಗಳುಗಳಿಂದ ಶಿಖರ್ ಧವನ್ ಅವರು ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಮೊದಲ ಪಂದ್ಯದಲ್ಲಿ ಗೆಲುವಿನೊಂದಿಗೆ ಶುಭಾರಂಭ ಮಾಡುತ್ತಾರಾ ಕಾದು ನೋಡಬೇಕಿದೆ.
ಪಂದ್ಯ ವೀಕ್ಷಣೆ ಎಲ್ಲಿ?:
ಐಪಿಎಲ್ 2023ರ ಪಂಜಾಬ್ ಕಿಂಗ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯವು ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯವನ್ನು JioCinema ಅಪ್ಲಿಕೇಶನ್ ಮತ್ತು ವೆಬ್‌ಸೈಟ್‌ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಜೊತೆಗೆ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಪಂದ್ಯದ ಹೆಚ್ಚಿನ ವಿವರಗಳಿಗಾಗಿ ನ್ಯೂಸ್ 18 ಕನ್ನಡ ವೆಬ್ಸೈಟ್ ಫಾಲೋ ಮಾಡಿ.
3 ತಿಂಗಳ ಬಳಿಕ ಕ್ರಿಕೆಟ್ಗೆ ಧವನ್ ಎಂಟ್ರಿ:
ಇನ್ನು, ಭಾರತ ತಂಡದ ಅನುಭವಿ ಬ್ಯಾಟ್ಸ್‌ಮನ್ ಶಿಖರ್ ಧವನ್ ಸುಮಾರು 3 ತಿಂಗಳ ನಂತರ ಮೈದಾನಕ್ಕೆ ಮರಳಲಿದ್ದಾರೆ. ಶಿಖರ್ ಧವನ್ ಅವರ ಹೆಗಲ ಮೇಲೆ ಈ ಬಾರಿ ದೊಡ್ಡ ಜವಾಬ್ದಾರಿ ಇದೆ. ಮಯಾಂಕ್ ಅಗರ್ವಾಲ್ ಬದಲಿಗೆ ಅವರನ್ನು ಪಂಜಾಬ್ ಕಿಂಗ್ಸ್ ಅವರ ನಾಯಕರನ್ನಾಗಿ ನೇಮಿಸಲಾಗಿದೆ. ಕಳೆದ ವರ್ಷ ಧವನ್ 14 ಪಂದ್ಯಗಳಲ್ಲಿ 460 ರನ್ ಗಳಿಸಿದ್ದರೆ, ಮಯಾಂಕ್ ಇಡೀ ಟೂರ್ನಿಯಲ್ಲಿ 196 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಇದೇ ಕಾರಣಕ್ಕೆ ಫ್ರಾಂಚೈಸಿ ಧವನ್ ಅವರನ್ನು ನಾಯಕರನ್ನಾಗಿ ಮಾಡಲು ನಿರ್ಧರಿಸಿದೆ. ಮಯಾಂಕ್ ಅಗರ್ವಾಲ್ ಈಗ ಸನ್ ರೈಸರ್ಸ್ ಹೈದರಾಬಾದ್ ಪರ ಆಡಲಿದ್ದಾರೆ. ಹರಾಜಿನಲ್ಲಿ ಪಂಜಾಬ್ ತಂಡ ಸ್ಯಾಮ್ ಕರೆನ್ ಅವರನ್ನು 18.50 ಕೋಟಿ ರೂ.ಗೆ ಖರೀದಿಸಿತ್ತು. ಅವರು ಹೇಗೆ ಆಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ಇದನ್ನೂ ಓದಿ: MS Dhoni: ಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಧೋನಿ, ಕೊಹ್ಲಿ ಕ್ಲಬ್‌ಗೆ ಎಂಟ್ರಿಕೊಟ್ಟ ಕ್ಯಾಪ್ಟನ್ ಕೂಲ್
ಪಂಜಾಬ್-ಕೋಲ್ಕತ್ತಾ ಹೆಡ್ ಟು ಹೆಡ್:
ಧವನ್ ನೇತೃತ್ವದ ಪಂಜಾಬ್ ತಂಡ ಕೋಲ್ಕತ್ತಾ ವಿರುದ್ಧ ಇದುವರೆಗೆ 30 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಕೋಲ್ಕತ್ತಾ 20 ಗೆದ್ದಿದ್ದರೆ, ಪಂಜಾಬ್ 10 ರಲ್ಲಿ ಮಾತ್ರ ಗೆದ್ದಿದೆ. ಪಂಜಾಬ್‌ಗೆ ಈ ಅಂಕಿ ಅಂಶ ಕೊಂಚ ನಿರಾಶಾದಾಯಕವಾಗಿದೆ. ಆದಾಗ್ಯೂ, ಕಿಂಗ್ಸ್‌ಗೆ ಉತ್ತಮ ವಿಷಯವೆಂದರೆ ನೈಟ್ ರೈಡರ್ಸ್ ವಿರುದ್ಧ ತಮ್ಮ ಮೊದಲ ಪಂದ್ಯವನ್ನು ಅವರ ತವರು ಮೊಹಾಲಿಯಲ್ಲಿ ಆಡುತ್ತಿದೆ.
ಪಂದ್ಯದ ಮೇಲೆ ಮಳೆ ಕರಿನೆರಳು:
ಪಂಜಾಬ್ ಕಿಂಗ್ಸ್ ತಂಡವು ಮೊಹಾಲಿಯ ತವರು ಮೈದಾನದಲ್ಲಿ ಕೋಲ್ಕತ್ತಾ ವಿರುದ್ಧ ಆಡಲಿದೆ. ಇಲ್ಲಿ ನಡೆಯಲಿರುವ ಪಂದ್ಯದಲ್ಲಿ ಮಳೆಯ ಛಾಯೆ ಆವರಿಸಿದೆ. ಪಂದ್ಯದ ವೇಳೆ ಶೇ.50ರಷ್ಟು ಮಳೆ ಬೀಳುವ ಸಾಧ್ಯತೆ ಇದೆ. ಪಂದ್ಯಕ್ಕೂ ಒಂದು ದಿನ ಮೊದಲು ಮಳೆ ಸುರಿದಿದ್ದರಿಂದ ಕೋಲ್ಕತ್ತಾ ನಾಯಕ ನಿತೀಶ್ ರಾಣಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಪಂಜಾಬ್ ಮತ್ತು ಕೋಲ್ಕತ್ತಾ ಪ್ಲೇಯಿಂಗ್ 11:
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11: ಶಿಖರ್ ಧವನ್ (c), ಪ್ರಭಾಸಿಮ್ರಾನ್ ಸಿಂಗ್ (WK), ಭಾನುಕಾ ರಾಜಪಕ್ಸೆ, ಜಿತೇಶ್ ಶರ್ಮಾ, ಶಾರುಖ್ ಖಾನ್, ಸ್ಯಾಮ್ ಕರಣ್, ಸಿಕಂದರ್ ರಜಾ, ನಾಥನ್ ಎಲ್ಲಿಸ್, ಹರ್‌ಪ್ರೀತ್ ಬ್ರಾರ್, ರಾಹುಲ್ ಚಾಹರ್, ಅರ್ಶ್‌ದೀಪ್ ಸಿಂಗ್.
ಕೋಲ್ಕತ್ತಾ ಪ್ಲೇಯಿಂಗ್ 11: ರಹಮಾನುಲ್ಲಾ ಗುರ್ಬಾಜ್ (WK), ಮನದೀಪ್ ಸಿಂಗ್, ನಿತೀಶ್ ರಾಣಾ (c), ಆಂಡ್ರೆ ರಸೆಲ್, ರಿಂಕು ಸಿಂಗ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಟಿಮ್ ಸೌಥಿ, ಅನುಕುಲ್ ರಾಯ್, ಉಮೇಶ್ ಯಾದವ್, ವರುಣ್ ಚಕ್ರವರ್ತಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ