ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ (IPL 2023) ಆರಂಭಿಕ ಪಂದ್ಯಗಳಲ್ಲಿ ಸೋತಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಇಂದು ಪಂಜಾಬ್ ಕಿಂಗ್ಸ್ ವಿರುದ್ಧ (KKR vs PBKS) ಸೆಣಸಾಡಲಿದೆ. ತಂಡವು ಪಂಜಾಬ್ ಕಿಂಗ್ಸ್ ವಿರುದ್ಧ ಅವರ ತವರಿನಲ್ಲಿ ಆಡಲು ಸಜ್ಜಾಗಿದೆ. ಪಂಜಾಬ್ ಮತ್ತು ಕೋಲ್ಕತ್ತಾ ತಂಡಗಳು ಸಮಾನ ಸಂಖ್ಯೆಯ ಪಂದ್ಯಗಳನ್ನು ಆಡಿದ್ದರೂ ಗೆಲುವಿನಲ್ಲಿ ವ್ಯತ್ಯಾಸವಿದೆ ಮತ್ತು ಇದರಿಂದಾಗಿ ಪಾಯಿಂಟ್ ಪಟ್ಟಿಯಲ್ಲಿ ತಂಡಗಳ ಸ್ಥಾನದಲ್ಲಿ ವ್ಯತ್ಯಾಸವಿದೆ. ಪಂಜಾಬ್ ತಂಡ 7ನೇ ಸ್ಥಾನದಲ್ಲಿದ್ದರೆ, ಕೋಲ್ಕತ್ತಾ ತಂಡ ಒಂದು ಸ್ಥಾನ ಕೆಳಗಿಳಿದು ಎಂಟನೇ ಸ್ಥಾನದಲ್ಲಿದೆ. ಈಗಾಗಲೇ ಟಾಸ್ ಆಗಿದ್ದು, ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶಿಖರ್ ಧವನ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದೆ.
ಪಂಜಾಬ್ - ಕೋಲ್ಕತ್ತಾ ಅಂಕಪಟ್ಟಿ:
ಪಂಜಾಬ್ ಕಿಂಗ್ಸ್ ಈ ಋತುವಿನಲ್ಲಿ ಇದುವರೆಗೆ 10 ಪಂದ್ಯಗಳನ್ನು ಆಡಿದೆ, ಅದರಲ್ಲಿ ಅವರು 5 ಪಂದ್ಯಗಳನ್ನು ಗೆದ್ದಿದ್ದು, ಕೋಲ್ಕತ್ತಾ ತಂಡ ಆಡಿರುವ 10 ಪಂದ್ಯಗಳ ನಂತರ 4 ಗೆಲುವು ದಾಖಲಿಸಿದೆ. ಕಳೆದ ಪಂದ್ಯದಲ್ಲಿ ಕೋಲ್ಕತ್ತಾ ತಂಡ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದಿತ್ತು. ಚೆನ್ನೈ ವಿರುದ್ಧ ಭರ್ಜರಿ ಜಯ ಸಾಧಿಸಿದ ನಂತರ ಮುಂಬೈ ಇಂಡಿಯನ್ಸ್ ತಂಡ ರೋಚಕ ಪಂದ್ಯದಲ್ಲಿ ಪಂಜಾಬ್ ತಂಡವನ್ನು ಸೋಲಿಸಿತು.
Here are the @KKRiders & @PunjabKingsIPL's line-ups ❗️
Follow the match ▶️ https://t.co/OaRtNpAfXD#TATAIPL | #KKRvPBKS pic.twitter.com/apbmNz6GGm
— IndianPremierLeague (@IPL) May 8, 2023
ಇದನ್ನೂ ಓದಿ: WTC Final 2023: ಟೆಸ್ಟ್ ಚಾಂಪಿಯನ್ಶಿಪ್ನಿಂದ ಕನ್ನಡಿಗ ಔಟ್! ಸ್ಫೋಟಕ ಆಟಗಾರನಿಗೆ ಬಿಸಿಸಿಐ ಮಣೆ
ಈಡನ್ ಗಾರ್ಡನ್ಸ್ ಪಿಚ್ ವರದಿ:
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಪಿಚ್ ಇಲ್ಲಿಯವರೆಗೆ ಬ್ಯಾಟಿಂಗ್ ಸ್ನೇಹಿ ಪಿಚ್ ಎಂದು ಹೆಸರುವಾಸಿಯಾಗಿದೆ. ಹಿಂದೆ, ಸ್ಪಿನ್ನರ್‌ಗಳಿಗೆ ಸಹಾಯವಾಗುತ್ತಿತ್ತು. ಆದರೆ ಕಳೆದ ಕೆಲ ಪಂದ್ಯಗಳಿಂದ ಈಡನ್ ಗಾರ್ಡನ್ಸ್ ಪಿಚ್ ಹೆಚ್ಚು ಬ್ಯಾಟ್ಸ್ಮನ್ಗಳಿಗೆ ಸಹಾಯಕವಾಗಿದೆ. ಹೀಗಾಗಿ ಇಂದು ಮತ್ತೊಂದು ಬಿಗ್ ಸ್ಕೋರ್ ಪಂದ್ಯವನ್ನು ವೀಕ್ಷಿಸಬಹುದಾಗಿದೆ. ಇನ್ನು, ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಮುಂಬೈ ಇಂಡಿಯನ್ಸ್ ಇದುವರೆಗೆ 31 ಬಾರಿ ಮುಖಾಮುಖಿಯಾಗಿದೆ. ಕೆಕೆಆರ್ 20 ಬಾರಿ ಗೆದ್ದಿದ್ದರೆ, ಪಂಜಾಬ್ 11 ಬಾರಿ ಗೆಲುವು ಸಾಧಿಸಿದೆ.
ಪಂಜಾಬ್ ಕಿಂಗ್ಸ್ - ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ 11:
ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ 11: ಪ್ರಭಾಸಿಮ್ರಾನ್ ಸಿಂಗ್, ಶಿಖರ್ ಧವನ್ (ನಾಯಕ), ಭಾನುಕಾ ರಾಜಪಕ್ಸೆ, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸ್ಯಾಮ್ ಕುರಾನ್, ಶಾರುಖ್ ಖಾನ್, ಹರ್‌ಪ್ರೀತ್ ಬ್ರಾರ್, ರಿಷಿ ಧವನ್, ರಾಹುಲ್ ಚಾಹರ್, ಅರ್ಷ್‌ದೀಪ್ ಸಿಂಗ್
ಕೋಲ್ಕತ್ತಾ ನೈಟ್ ರೈಡರ್ಸ್ ಪ್ಲೇಯಿಂಗ್ 11: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ನಿತೀಶ್ ರಾಣಾ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ವೈಭವ್ ಅರೋರಾ, ಹರ್ಷಿತ್ ರಾಣಾ, ಸುಯಾಶ್ ಶರ್ಮಾ, ವರುಣ್ ಚಕ್ರವರ್ತಿ
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ