• ಹೋಂ
  • »
  • ನ್ಯೂಸ್
  • »
  • ಕ್ರೀಡೆ
  • »
  • IND vs AUS Test: ಭಾರತ-ಆಸೀಸ್‌ ಪಂದ್ಯ ವೀಕ್ಷಣೆಗೆ ಬರ್ತಾರಂತೆ ಪ್ರಧಾನಿ ಮೋದಿ! ಹೈವೋಲ್ಟೇಜ್ ಮ್ಯಾಚ್‌ಗೆ ಬರ್ತಾರಾ ಆಸ್ಟ್ರೇಲಿಯಾ ಪಿಎಂ?

IND vs AUS Test: ಭಾರತ-ಆಸೀಸ್‌ ಪಂದ್ಯ ವೀಕ್ಷಣೆಗೆ ಬರ್ತಾರಂತೆ ಪ್ರಧಾನಿ ಮೋದಿ! ಹೈವೋಲ್ಟೇಜ್ ಮ್ಯಾಚ್‌ಗೆ ಬರ್ತಾರಾ ಆಸ್ಟ್ರೇಲಿಯಾ ಪಿಎಂ?

IND vs AUS

IND vs AUS

IND vs AUS Test: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಅಹಮದಾಬಾದ್‌ನಲ್ಲಿ ಆಸೀಸ್​ ಪ್ರಧಾನಿ ಜೊತೆ ವೀಕ್ಷಿಸಲಿದ್ದಾರೆ ಎಂದು ತಿಳಿದುಬಂದಿದೆ.

  • Share this:

ಫೆಬ್ರವರಿ 9 ರಿಂದ ಬಾರ್ಡರ್-ಗವಾಸ್ಕರ್ ಟ್ರೋಫಿಯೊಂದಿಗೆ (Border–Gavaskar Trophy) ಈ ವರ್ಷ ಭಾರತದಲ್ಲಿ ಟೆಸ್ಟ್ ಕ್ರಿಕೆಟ್ ಪ್ರಾರಂಭವಾಗಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4 ಟೆಸ್ಟ್‌ಗಳ ಸರಣಿಯ ಮೊದಲ ಪಂದ್ಯವು ಫೆಬ್ರವರಿ 9 ರಿಂದ ನಾಗ್ಪುರದಲ್ಲಿ (Vidarbha Cricket Association Stadium) ಆರಂಭವಾಗಲಿದೆ. ಸರಣಿಯ ಎರಡನೇ ಟೆಸ್ಟ್ ಪಂದ್ಯ ಫೆಬ್ರವರಿ 17 ರಿಂದ ಪುಣೆಯಲ್ಲಿ ನಡೆಯಲಿದೆ. ಇದಾದ ನಂತರ ಧರ್ಮಶಾಲಾ (ಮಾರ್ಚ್ 1 ರಿಂದ) ಮತ್ತು ಅಹಮದಾಬಾದ್ (ಮಾರ್ಚ್ 9 ರಿಂದ) ಪಂದ್ಯಗಳು ನಡೆಯಲಿವೆ. ಇತ್ತೀಚಿನ ಮಾಧ್ಯಮ ವರದಿಗಳ ಪ್ರಕಾರ, ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಸಹ ಸಾಕ್ಷಿಯಾಗಬಹುದು. ಹೀಗಾಗಿ ಈ ಸರಣಿಯ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ.


ಭಾರತ-ಆಸೀಸ್​ ಪಂದ್ಯ ನೋಡ್ತಾರಾ ಮೋದಿ?:


ಅಹಮದಾಬಾದ್‌ನಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ 4ನೇ ಮತ್ತು ಅಂತಿಮ ಟೆಸ್ಟ್‌ನಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಉಪಸ್ಥಿತರಿರುತ್ತಾರೆ ಎಂದು ಹೇಳಲಾಗುತ್ತಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ. ಅಹಮದಾಬಾದ್‌ನಲ್ಲಿ ನಡೆಯಲಿರುವ ಪಂದ್ಯವನ್ನು ವೀಕ್ಷಿಸಲು ಪ್ರಧಾನಿ ಮೋದಿ ಬಂದರೆ, ಈ ಕ್ರೀಡಾಂಗಣದಲ್ಲಿ ಇದು ಅವರ ಮೊದಲ ಪಂದ್ಯದ ವೀಕ್ಷಣೆ ಆಗಲಿದೆ ಎಂಬುದು ಕುತೂಹಲಕಾರಿ ಸಂಗತಿಯಾಗಿದೆ.


ಆಸೀಸ್​ ವಿರುದ್ಧ ಭಾರತದ್ದೇ ಮೇಲುಗೈ:


ಟೀಂ ಇಂಡಿಯಾ 2016-17 ರಿಂದ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಉಳಿಸಿಕೊಂಡಿದೆ. ಭಾರತ ಸತತ ಮೂರು ಸರಣಿಗಳನ್ನು ಗೆದ್ದುಕೊಂಡಿದೆ. ಈ ಟೆಸ್ಟ್ ಸರಣಿಯ ಪ್ರತಿ ಸೀಸನ್ ರೋಚಕ ಹಾಗೂ ವಿವಾದಾತ್ಮಕವಾಗಿರುತ್ತದೆ. ಆಸ್ಟ್ರೇಲಿಯಾ ಪ್ರಸ್ತುತ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ನಂಬರ್ 1 ತಂಡವಾಗಿದೆ. ಹೀಗಿರುವಾಗ ಆಸ್ಟ್ರೇಲಿಯ ತಂಡ ನಾಗ್ಪುರದಲ್ಲಿ ಮೊದಲ ಟೆಸ್ಟ್‌ನಲ್ಲಿ ಭಾರತದ ವಿರುದ್ಧ ಭರ್ಜರಿ ಫೈಪೋಟಿ ನೀಡಲುವ ಸಾಧ್ಯತೆ ಇದೆ.


ಇದನ್ನೂ ಓದಿ: IND vs AUS Series: ಭಾರತ ಪ್ರವಾಸಕ್ಕೂ ಮುನ್ನ ಆಸೀಸ್‌ಗೆ ಬಿಗ್ ಶಾಕ್, ಸ್ಟಾರ್ ವೇಗಿ ತಂಡದಿಂದ ಔಟ್​


ಸ್ಟಾರ್​ ಆಟಗಾರರು ಸರಣಿಯಿಂದ ಔಟ್​:


ಮತ್ತೊಂದೆಡೆ, ಭಾರತವು ಇತ್ತೀಚೆಗೆ ಬಾಂಗ್ಲಾದೇಶದಲ್ಲಿ ಆಡಿದ ಟೆಸ್ಟ್ ಸರಣಿಯನ್ನು ಗೆದ್ದಿದೆ, ಆದರೆ ಭಾರತವು ತನ್ನ ಕೆಲವು ಪ್ರಮುಖ ಆಟಗಾರರು ಇಲ್ಲದೆ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಲಿದೆ. ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಗಾಯದ ಸಮಸ್ಯೆಯಿಂದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಜಸ್ಪ್ರೀತ್ ಬುಮ್ರಾ ಕೂಡ ಇನ್ನೂ ಸಂಪೂರ್ಣ ಫಿಟ್ ಆಗಿಲ್ಲ ಮತ್ತು ಮೊದಲ ಎರಡು ಟೆಸ್ಟ್‌ಗಳಲ್ಲಿ ಭಾರತ ತಂಡದ ಭಾಗವಾಗುವುದಿಲ್ಲ. ಅದೇ ಸಮಯದಲ್ಲಿ, ರಿಷಭ್ ಪಂತ್ ಕಾರು ಅಪಘಾತದ ನಂತರ ಆಸ್ಪತ್ರೆಗೆ ದಾಖಲಾಗಿದ್ದಾರೆ ಮತ್ತು ಸಂಪೂರ್ಣ ಸರಣಿಯನ್ನು ಆಡಲು ಸಾಧ್ಯವಾಗುವುದಿಲ್ಲ.
ಆದಾಗ್ಯೂ, ಭಾರತದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ತಮ್ಮ ಫಾರ್ಮ್‌ಗೆ ಮರಳಿದ್ದು, ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಭಾರತ ತಂಡದ ಮಾಜಿ ನಾಯಕ ಈಗ 20 ಟೆಸ್ಟ್‌ಗಳಲ್ಲಿ ಶತಕ ಸಿಡಿಸದೇ ಆಡಿದ್ದಾರೆ. ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಶತಕ ಬಾರಿಸುವ ಮೂಲಕ ತಮ್ಮ ಶತಕದ ಬರವನ್ನು ಕೊನೆಗೊಳಿಸುವ ನಿರೀಕ್ಷೆಯಲ್ಲಿದ್ದಾರೆ. ಮತ್ತೊಂದೆಡೆ, ಪ್ಯಾಟ್ ಕಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಸರಣಿ ಜಯ ದಾಖಲಿಸಿದೆ.

Published by:shrikrishna bhat
First published: