ಟೊಕಿಯೋ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ 5ನೇ ಪದಕ ದಕ್ಕಿದೆ. ಪುರುಷರ ಕುಸ್ತಿ ವಿಭಾಗದಲ್ಲಿ ರವಿಕುಮಾರ್ ದಹಿಯಾ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಫೈನಲ್ ಪಂದ್ಯದಲ್ಲಿ ರಷ್ಯಾದ ಝುವರ್ ಉಗ್ವೆ( Zavur Uguev ) ವಿರುದ್ಧ ಸೋಲು ಕಂಡಿದ್ದು, ಆ ಮೂಲಕ ಬೆಳ್ಳಿ ಪದಕಕ್ಕೆ ಅರ್ಹರಾಗಿದ್ದಾರೆ. 57 ಕೆಜಿ ವಿಭಾಗದಲ್ಲಿ 2ನೇ ಸ್ಥಾನ ಪಡೆದುಕೊಳ್ಳುವ ಮೂಲಕ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಚಿನ್ನದ ಪದಕಕ್ಕಾಗಿ ನಡೆದ ಪಂದ್ಯದಲ್ಲಿ ರವಿಕುಮಾರ್ ವಿರೋಚಿತ ಸೋಲು ಕಂಡಿದ್ದಾರೆ. ಫೈನಲ್ನಲ್ಲಿ ಸೋಲು ಕಂಡರೂ ಬೆಳ್ಳಿ ಪದಕದೊಂದಿಗೆ ಭಾರತಕ್ಕೆ ಮರಳಲಿದ್ದಾರೆ. ಹರಿಯಾಣದ ಪಾನಿಟಪ್ ಜಿಲ್ಲೆಯವರಾದ ರವಿಕುಮಾರ್ ದಹಿಯಾ ಈಗ ಭಾರತದ ಬೆಳ್ಳಿ ಹುಡುಗ ಎಂದರೆ ತಪ್ಪಾಗಲಾರದು.
Ravi Kumar Dahiya is a remarkable wrestler! His fighting spirit and tenacity are outstanding. Congratulations to him for winning the Silver Medal at #Tokyo2020. India takes great pride in his accomplishments.
ದಹಿಯಾ ಬೆಳ್ಳಿ ಪದಕ ತಮ್ಮದಾಗಿಸಿಕೊಳ್ಳುತ್ತಲೇ ಪ್ರಧಾನಿ ಮೋದಿ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ. ಭಾರತಕ್ಕೆ ಹೆಮ್ಮೆ ತಂದು ರವಿಕುಮಾರ್ ಅವರಿಗೆ ಅಭಿನಂದನೆಗಳು ಎಂದು ಪ್ರಶಂಸಿಸಿದ್ದಾರೆ.
ಇನ್ನು ಭಾರತದ ಪುರುಷರ ಹಾಕಿ ತಂಡ ಕೂಡ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಜರ್ಮನಿ ವಿರುದ್ಧ ಭಾರತ 5-4 ಗೋಲುಗಳ ಅಂತರದಿಂದ ರೋಚಕ ರೀತಿಯಲ್ಲಿ ಸೋಲಿಸಿ ಕಂಚಿನ ಪದಕ ಪಡೆಯಿತು. 1980ರ ಒಲಿಂಪಿಕ್ಸ್ನಲ್ಲಿ ಚಿನ್ನ ಗೆದ್ದ ಬಳಿಕ ಭಾರತ ಹಾಕಿ ತಂಡ ಒಲಿಂಪಿಕ್ನಲ್ಲಿ ಗಿಟ್ಟಿಸಿರುವ ಮೊದಲ ಪದಕ ಇದಾಗಿದೆ. ಟೋಕಿಯೋದಲ್ಲಿ ನಡೆದ ಈ ರೋಚಕ ಹಣಾಹಣಿಯಲ್ಲಿ ಜರ್ಮನಿ ತಂಡ ಒಂದು ಹಂತದಲ್ಲಿ 3-1 ಗೋಲುಗಳಿಂದ ಮುನ್ನಡೆ ಹೊಂದಿತ್ತು. ಆದರೆ, ಭಾರತ ಸತತ 4 ಗೋಲು ಗಳಿಸಿ 5-3 ಮುನ್ನಡೆ ಪಡೆಯಿತು. ಕೊನೆಯ ಕ್ವಾರ್ಟರ್ನಲ್ಲಿ ಜರ್ಮನಿ ಕಂಬ್ಯಾಕ್ ಮಾಡಿ 4ನೇ ಗೋಲು ಗಳಿಸಿತು. ಅಂತಿಮವಾಗಿ ಗೆಲುವಿನ ಮಾಲೆ ಭಾರತಕ್ಕೆ ಒಲಿಯಿತು. ಭಾರತ ಹಾಕಿ ತಂಡ ಗೆದ್ದ ಈ ಪದಕ ಈ ಒಲಿಂಪಿಕ್ಸ್ನಲ್ಲಿ ಭಾರತಕ್ಕೆ ಸಿಕ್ಕಿರುವ ನಾಲ್ಕನೇ ಪದಕವಾಗಿದೆ.
ಇದರೊಂದಿಗೆ ಭಾರತದ ಬುಟ್ಟಿಯಲ್ಲಿ 2 ಬೆಳ್ಳಿ ಮತ್ತು 3 ಕಂಚಿನ ಪದಕ ಇವೆ. ಅತ್ತ, ಭಾರತ ಮಹಿಳಾ ಹಾಕಿ ತಂಡ ಕೂಡ ಕಂಚಿನ ಪದಕಕ್ಕಾಗಿ ನಾಳೆ ಸೆಣೆಸಲಿದೆ.
Published by:Kavya V
First published:
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ