ಇಂಡಿಯನ್ ಪ್ರೀಮಿಯರ್ ಲೀಗ್ (IPL 2023) 2023ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ (MI vs RCB) ತಂಡಗಳು ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ (Wankhede Stadium) ಸೆಣಸಾಡುತ್ತಿವೆ. ಇಂದಿನ ಪಂದ್ಯ ಪ್ಲೇಆಫ್ ಕಾರಣದಿಂದ ಹೆಚ್ಚು ಮಹತ್ವ ಪಡೆದುಕೊಂಡಿದೆ. ಇನ್ನು, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡಕ್ಕೆ ಆರಂಭದಲ್ಲಿಯೇ ಆಘಾತ ಉಂಟಾಯಿತು. ವಿರಾಟ್ ಕೊಹ್ಲಿ (Virat Kohli) ಮತ್ತು ಅನುಜ್ ರಾವತ್ ಒಬ್ಬರ ಹಿಂದೆ ಒಬ್ಬರಂತೆ ಪೆವಿಲಿಯನ್ ಸೇರಿದರು. ಆದರೆ ನಾಯಕ ಫಾಫ್ ಡು ಪ್ಲೇಸಿಸ್ (Faf du Plessis) ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ (Glenn Maxwell) ಜೊತೆಯಾಟದಿಂದ ಆರ್ಸಿಬಿ ನಿಗದಿತ 20 ಓವರ್ಗೆ 6 ವಿಕೆಟ್ ನಷ್ಟಕ್ಕೆ 199 ರನ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ 200 ರನ್ ಗಳ ಟಾರ್ಗೆಟ್ ನೀಡಿದೆ.
ಅಬ್ಬರಿಸಿದ ಮ್ಯಾಕ್ಸಿ - ಫಾಫ್:
ಇನ್ನು, ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಬೆಂಗಳೂರು ತಂಡಕ್ಕೆ ಆಘಾತದ ಮೇಲೆ ಆಘಾತ ಉಂಟಾಯಿತು. ಆರಂಭದಲ್ಲಿಯೇ ವಿರಾಟ್ ಕೊಹ್ಲಿ ಮತ್ತು ಅನುಜ್ ರಾವತ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಹೋಗುವ ಮೂಲಕ ತಂಡಕ್ಕೆ ಹಿನ್ನಡೆ ಆಗಿತ್ತು. ಆದರೆ ಬಳಿಕ ನಾಯಕ ಫಾಫ್ ಡು ಪ್ಲೇಸಿಸ್ ಮತ್ತು ಗ್ಲೆನ್ ಮ್ಯಾಕ್ಸ್‌ವೆಲ್ ಜೋಡಿ 62 ಎಸೆತದಲ್ಲಿ 120 ರನ್ ಜೊತೆಯಾಟವಾಡಿದರು. ಆರ್ಸಿಬಿ ಪರ ವಿರಾಟ್ ಕೊಹ್ಲಿ 1 ರನ್, ಫಾಫ್ ಡು ಪ್ಲೆಸಿಸ್ 42 ಎಸೆತದಲ್ಲಿ 5 ಬೌಂಡರಿ ಮತ್ತು 3 ಸಿಕ್ಸ್ ಮೂಲಕ 65 ರನ್ , ಅನುಜ್ ರಾವತ್ 6 ರನ್, ಗ್ಲೆನ್ ಮ್ಯಾಕ್ಸ್‌ವೆಲ್ 33 ಎಸೆತದಲ್ಲಿ 8 ಬೌಂಡರಿ ಮತ್ತು 4 ಸಿಕ್ಸ್ ಮೂಲಕ 68 ರನ್, ಮಹಿಪಾಲ್ ಲೊಮ್ರೋರ್ 1 ರನ್, ದಿನೇಶ್ ಕಾರ್ತಿಕ್ 30 ರನ್, ಕೇದಾರ್ ಜಾದವ್ 12 ರನ್ ಮತ್ತು ವನಿಂದು ಹಸರಂಗ 12 ರನ್ ಗಳಿಸಿದರು.
ಪ್ಲೇಆಫ್ಗಾಗಿ ಬಿಗ್ ಫೈಟ್:
ಈಗಾಗಲೇ ಮುಂಬೈ ಮತ್ತು ಆರ್ಸಿಬಿ ಎರಡೂ ತಂಡಗಳು ಸಹ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋತಿದೆ. ಹೀಗಾಗಿ ಇಂದಿನ ಪಂದ್ಯ ಗೆದ್ದವರು ಪ್ಲೇಆಫ್ಗೆ ಸನಿಹವಾಗುತ್ತಾರೆ. ಆರ್ಸಿಬಿ ತಂಡ ಈವರೆಗೆ ಐಪಿಎಲ್ 2023ರಲ್ಲಿ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋತಿದ್ದು ಅಂಕಪಟ್ಟಿಯಲ್ಲಿ 6ನೇ ಸ್ಥಾನದಲ್ಲಿದೆ.
ಅದೇ ರೀತಿ ಮುಂಬೈ ಇಂಡಿಯನ್ಸ್ ತಂಡವೂ ಸಹ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋತು ಅಂಕಪಟ್ಟಿಯಲ್ಲಿ 8ನೇ ಸ್ಥಾನದಲ್ಲಿದೆ. ಈ ಪಂದ್ಯ ಗೆದ್ದವರಿಗೆ ಪ್ಲೇಆಫ್ ಆಸೆ ಜೀವಂತವಾಗಿರಲಿದೆ. ಪಂದ್ಯ ಗೆದ್ದ ತಂಡವು 12 ಅಂಕಗಳಿಂದ ಐಪಿಎಲ್ 2023 ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಲಿದೆ. ಇದರಿಂದಾಗಿ ಗೆದ್ದ ತಂಡಕ್ಕೆ ಪ್ಲೇಆಫ್ ಹಾದಿ ಇನ್ನಷ್ಟು ಸುಗಮವಾಗಲಿದೆ.
ಮುಂಬೈ - ಆರ್ಸಿಬಿ ಪ್ಲೇಯಿಂಗ್ 11:
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ಟಿಮ್ ಡೇವಿಡ್, ನೆಹಾಲ್ ವಧೇರಾ, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಆಕಾಶ್ ಮಧ್ವಲ್, ಕುಮಾರ್ ಕಾರ್ತಿಕೇಯ, ಜೇಸನ್ ಬೆಹ್ರೆನ್‌ಡಾರ್ಫ್.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ಲೇಯಿಂಗ್ 11: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ಸಿ), ಅನುಜ್ ರಾವತ್, ಗ್ಲೆನ್ ಮ್ಯಾಕ್ಸ್‌ವೆಲ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ಡಬ್ಲ್ಯೂ), ವನಿಂದು ಹಸರಂಗಾ, ಹರ್ಷಲ್ ಪಟೇಲ್, ವಿಜಯ್‌ಕುಮಾರ್ ವೈಶಾಕ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ