ಇಂಗ್ಲೆಂಡ್ ವಿರುದ್ಧದ ಮೊದಲ 3 ಟೆಸ್ಟ್​ ಪಂದ್ಯಗಳಿಗೆ ಭಾರತ ತಂಡ ಪ್ರಕಟ: ರಿಶಬ್ ಪಂತ್​ಗೆ ಸ್ಥಾನ

news18
Updated:July 18, 2018, 3:32 PM IST
ಇಂಗ್ಲೆಂಡ್ ವಿರುದ್ಧದ ಮೊದಲ 3 ಟೆಸ್ಟ್​ ಪಂದ್ಯಗಳಿಗೆ ಭಾರತ ತಂಡ ಪ್ರಕಟ: ರಿಶಬ್ ಪಂತ್​ಗೆ ಸ್ಥಾನ
news18
Updated: July 18, 2018, 3:32 PM IST
ನ್ಯೂಸ್ 18 ಕನ್ನಡ

ನವ ದೆಹಲಿ (ಜುಲೈ. 18): ಆಗಸ್ಟ್​ 1 ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್​ ಸರಣಿಯ ಪೈಕಿ ಮೊದಲ 3 ಪದ್ಯಗಳಿಗೆ ಬಿಸಿಸಿಐ ಆಯ್ಕೆ ಸಮಿತಿ ಟೀಮ್ ಇಂಡಿಯಾ ಆಟಗಾರರನ್ನು ಪ್ರಕಟಿಸಿದೆ.

ವೃದ್ಧಿಮನ್ ಸಾಹ ಗಾಯಾಳುವಾಗಿರುವ  ಪರಿಣಾಮ ಬದಲಿ ಆಟಗಾರನಾಗಿ ರಿಶಭ್ ಪಂತ್ ಸ್ಥಾನ ಪಡೆದುಕೊಂಡಿದ್ದಾರೆ. ಈ ಮೂಲಕ ಪಂತ್ ಮೊದಲ ಬಾರಿ ಟೆಸ್ಟ್​ ಸರಣಿಗೆ ಆಯ್ಕೆಗೊಂಡಿದ್ದಾರೆ. ಆದರೆ, ದಿನೇಶ್ ಕಾರ್ತಿಕ್ ಅವರನ್ನ ಕೀಪರ್ ಆಯ್ಕೆಯಲ್ಲಿ ಮೊದಲ ಆದ್ಯತೆ ನೀಡಲಾಗಿದೆ. ಹೆಬ್ಬರಳಿನ ಗಾಯದಿಂದ ಏಕದಿನ ಸರಣಿಯಿಂದ ಹೊರಗುಳಿದಿದ್ದ ಜಸ್​ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ್ದಾರೆ. ಜೊತೆಗೆ ಮೊನ್ನಯಷ್ಟೆ ಬೆಂಗಳೂರಿನಲ್ಲಿ ನಡೆದ ಯೋ ಯೋ ಟೆಸ್ಟ್​​ನಲ್ಲಿ ತೇರ್ಗಡೆ ಹೊಂದಿದ ಮೊಹ್ಮದ್ ಶಮಿ ಕೂಡ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಭುವನೇಶ್ವರ್ ಕುಮಾರ್ 3ನೇ ಏಕದಿನ ಪಂದ್ಯದಲ್ಲಿ ಗಾಯಗೊಂಡಿದ್ದರಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ, ಆಯ್ಕೆ ಸಮಿತಿ ಭುವಿ ಹೆಸರನ್ನು ಇನ್ನೂ ಅಂತಿಮಗೊಳಿಸಿಲ್ಲ.

ಇಂಗ್ಲೆಂಡ್ ವಿರುದ್ಧದ 3 ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ: ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್, ಕೆ. ಎಲ್. ರಾಹುಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ(ಉಪ-ನಾಯಕ), ಕರುಣ್ ನಾಯರ್, ದಿನೇಶ್ ಕಾರ್ತಿಕ್(ವಿಕೆಟ್-ಕೀಪರ್), ರಿಶಭ್ ಪಂತ್(ವಿಕೆಟ್-ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಹಾರ್ದಿಕ್ ಪಾಂಡ್ಯ, ಇಶಾಂತ್ ಶರ್ಮಾ, ಮೊಹ್ಮದ್ ಶಮೀ, ಉಮೇಶ್ ಯಾದವ್, ಜಸ್​ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್.

 

First published:July 18, 2018
ಮತ್ತಷ್ಟು ಓದಿರಿ
Loading...
ಮುಂದಿನ ಸುದ್ದಿ