ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯವನ್ನು ಆಡುತ್ತಿಲ್ಲ. ಕೌಟುಂಬಿಕ ಕಾರಣದಿಂದ ಈ ಪಂದ್ಯದಿಂದ ದೂರ ಉಳಿದಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಹಾರ್ದಿಕ್ ಪಾಂಡ್ಯ (Hardik Pandya) ನಾಯಕತ್ವ ವಹಿಸಿದ್ದಾರೆ. ಸರಣಿಯಲ್ಲಿ ಒಟ್ಟು 3 ಪಂದ್ಯಗಳು ನಡೆಯಬೇಕಿದೆ. ಈ ನಡುವೆ ರೋಹಿತ್ (Rohit Sharma) ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಇದರಲ್ಲಿ ಪತ್ನಿ ರಿತಿಕಾ (Ritika Sajdeh) ಜೊತೆ ಡ್ಯಾನ್ಸ್ ಮಾಡುತ್ತಿದ್ದಾರೆ. ರೋಹಿತ್ ಸರಣಿಯ ಕೊನೆಯ 2 ಪಂದ್ಯಗಳಲ್ಲಿ ಆಡಲಿದ್ದಾರೆ ಎಂದು ತಿಳಿದುಬಂದಿದೆ. ಅಕ್ಟೋಬರ್-ನವೆಂಬರ್ ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ದೃಷ್ಟಿಯಿಂದ ಈ ಸರಣಿ ಮಹತ್ವದ್ದಾಗಿದೆ.
ಪತ್ನಿ ಜೊತೆ ರೋಹಿತ್ ಡ್ಯಾನ್ಸ್:
ವೈರಲ್ ವಿಡಿಯೋದಲ್ಲಿ ರೋಹಿತ್ ಶರ್ಮಾ ಮತ್ತು ರಿತಿಕಾ ಸಜ್ದೆ ಅವರೊಂದಿಗೆ ಇನ್ನೊಬ್ಬ ವ್ಯಕ್ತಿ ಕಾಣಿಸಿಕೊಂಡಿದ್ದಾರೆ. ಮೂವರೂ ನೃತ್ಯ ಮಾಡುತ್ತಿದ್ದಾರೆ. ಮಾಹಿತಿ ಪ್ರಕಾರ, ರೋಹಿತ್ ತನ್ನ ಬಾಮೈದನ ಮದುವೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಇದರಲ್ಲಿ ಅವರು ಕುರ್ತಾ-ಪೈಜಾಮ ಧರಿಸಿದ್ದಾರೆ. ಅವರು ಕೆಂಪು ಸ್ಕಾರ್ಫ್‌ನೊಂದಿಗೆ ಕಾಣಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ರೋಹಿತ್ ನಾಯಕತ್ವದಲ್ಲಿ ಭಾರತ ತಂಡ ಆಸ್ಟ್ರೇಲಿಯ ವಿರುದ್ಧದ ಟೆಸ್ಟ್ ಸರಣಿಯಲ್ಲಿ 2-1 ಅಂತರದಲ್ಲಿ ಗೆಲುವು ಸಾಧಿಸಿತ್ತು. ಇದರೊಂದಿಗೆ ಭಾರತ ತಂಡ ಕೂಡ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದುಕೊಂಡಿದೆ.
Rohit Sharma's dance at his brother-in-law's marriage. pic.twitter.com/TTqalgeQH2
— Mufaddal Vohra (@mufaddal_vohra) March 17, 2023
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನದ ಪ್ಲೇಯಿಂಗ್ ಇಲೆವೆನ್ ಕುರಿತು ಮಾತನಾಡುತ್ತಾ, ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಸ್ಪಿನ್ನರ್‌ಗಳಾಗಿ ಅವಕಾಶ ಪಡೆದಿದ್ದಾರೆ. ಎಡಗೈ ಸ್ಪಿನ್ನರ್ ಕುಲದೀಪ್ ಟೆಸ್ಟ್ ಸರಣಿಗೂ ತಂಡದಲ್ಲಿ ಸ್ಥಾನ ಪಡೆದಿದ್ದರೂ ಯಾವುದೇ ಪಂದ್ಯದಲ್ಲೂ ಅವಕಾಶ ಸಿಗಲಿಲ್ಲ. ಅದೇ ವೇಳೆ ಜಡೇಜಾ ಅದ್ಭುತ ಪ್ರದರ್ಶನ ನೀಡಿದ್ದರು. ಆಲ್ ರೌಂಡರ್ ಶಾರ್ದೂಲ್ ಠಾಕೂರ್ ಕೂಡ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ವೇಗಿಗಳಾಗಿ ಆಡುತ್ತಿದ್ದಾರೆ.
ಇದನ್ನೂ ಓದಿ: IND vs AUS: ಈ ಆಟಗಾರರಿಗೆ ಆಸೀಸ್ ಸರಣಿಯೇ ಲಾಸ್ಟ್ ಚಾನ್ಸ್, ಮಿಸ್ ಮಾಡಿದ್ರೆ ವಿಶ್ವಕಪ್ನಿಂದ ಔಟ್!
ಇಶಾನ್ ಕಿಶನ್ ಮತ್ತು ಶುಭಮನ್ ಗಿಲ್ ಓಪನಿಂಗ್ ಮಾಡಲಿದ್ದಾರೆ. ವಿರಾಟ್ ಕೊಹ್ಲಿ 3ನೇ ಸ್ಥಾನದಲ್ಲಿ ಮತ್ತು ಸೂರ್ಯಕುಮಾರ್ ಯಾದವ್ 4ನೇ ಸ್ಥಾನದಲ್ಲಿ ಕಣಕ್ಕಿಳಿದಿದ್ದಾರೆ. ಶ್ರೇಯಸ್ ಅಯ್ಯರ್ ಗಾಯಗೊಂಡಿದ್ದಾರೆ. ಕೆಎಲ್ ರಾಹುಲ್ 5ನೇ ಸ್ಥಾನದಲ್ಲಿ ಮತ್ತು ಹಾರ್ದಿಕ್ ಪಾಂಡ್ಯ 6ನೇ ಸ್ಥಾನಕ್ಕೆ ಕಣಕ್ಕಿಳಿಯಲಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ ದಾಖಲೆ ಬರೆದಿದ್ದ ರೋಹಿತ್:
ಆಸೀಸ್ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ನಾಯಕ ರೋಹಿತ್ ಹಾಗೂ ಗಿಲ್ ಜೊತೆ ಉತ್ತಮವಾಗಿ ಆಡಿದರೂ, ಅವರು ಕೇವಲ 35 ರನ್ಗೆ ವಿಕೆಟ್ ಒಪ್ಪಿಸಿದರು. ಆದರೆ ಇದೇ ವೇಳೆ ರೋಹಿತ್ 2 ಹೊಸ ದಾಖಲೆ ಬರೆದಿದ್ದಾರೆ. ರೋಹಿತ್ ಶರ್ಮಾ ಆಸೀಸ್ ವಿರುದ್ಧ 35 ರನ್ ಗಳಿಸುವ ಮೂಲಕ 17 ಸಾವಿರ ಅಂತಾರಾಷ್ಟ್ರೀಯ ರನ್ ಪೂರೈಸಿದ ಸಾಧನೆ ಮಾಡಿದರು. ಈ ಸಾಧನೆ ಮಾಡಿದ ಭಾರತದ 7ನೇ ಮತ್ತು ವಿಶ್ವದ 28ನೇ ಆಟಗಾರ ಎಂದು ಗುರುತಿಸಿಕೊಂಡರು. ತವರಿನಲ್ಲಿ ಅತಿ ವೇಗವಾಗಿ 2000 ಟೆಸ್ಟ್ ರನ್ ಗಳಿಸಿದ ಪ್ಲೇಯರ್ ಆದರು. ಭಾರತದ ಪರ ಈ ಸಾಧನೆ ಮಾಡಿದ ಮೊಹಮ್ಮದ್ ಅಜರುದ್ದೀನ್ ಅವರ ದಾಖಲೆಯನ್ನು ಹಿಂದಿಕ್ಕಿದರು.
ಭಾರತ - ಆಸ್ಟ್ರೇಲಿಯಾ ಪ್ಲೇಯಿಂಗ್ 11:
ಭಾರತ ಪ್ಲೇಯಿಂಗ್ 11: ಶುಭ್ಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮದ್ ಶಮಿ, ಮೊಹಮದ್ ಸಿರಾಜ್,ಕುಲ್ದೀಪ್ ಯಾದವ್.
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್ (ನಾಯಕ), ಮಾರ್ನಸ್ ಲಬುಶೇನ್, ಜೋಶ್ ಇಂಗ್ಲಿಸ್, ಕ್ಯಾಮೆರಾನ್ ಗ್ರೀನ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಸೀನ್ ಅಬಾಟ್, ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ