ಮಧ್ಯಪ್ರದೇಶ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ, ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಭಂಗ


Updated:February 28, 2018, 10:32 PM IST
ಮಧ್ಯಪ್ರದೇಶ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ, ಆಡಳಿತಾರೂಢ ಬಿಜೆಪಿಗೆ ತೀವ್ರ ಮುಖಭಂಗ
ಮಧ್ಯಪ್ರದೇಶ ಉಪಚುನಾವಣೆ
  • Share this:
- ನ್ಯೂಸ್ 18

ಭೋಪಾಲ್(ಫೆ.28): ಕಾಂಗ್ರೆಸ್ ಸಂಸದ ಜ್ಯೋತಿರಾದಿತ್ಯ ಸಿಂಧ್ಯಾ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಮಧ್ಯಪ್ರದೇಶದ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಮುಂಗೌಲಿ ಮತ್ತು ಕೊಲರಸ್ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವಿನ ನಗೆ ಬೀರಿದ್ದು, ಆಡಳಿತಾರೂಢ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದೆ.

ಮುಂಗೌಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬ್ರಜೇಂದ್ರ ಸಿಂಗ್, ತಮ್ಮ ಸಮೀಪ ಪ್ರತಿಸ್ಪರ್ಧಿ ಬಿಜೆಪಿಯ ಬಾಯ್​ಸಾಬ್ ಯಾದವ್ ಅವರನ್ನ 2124 ಅಂತರದಿಂದ ಮಣಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 70,808 ಮತಗಳನ್ನ ಪಡೆದರೆ, ಪರಾಜಿತ ಬಿಜೆಪಿ ಅಭ್ಯರ್ಥಿಗೆ 68,684 ಮತಗಳು ಬಿದ್ದಿವೆ. ಮತ ಎಣಿಕೆ ಆರಂಭದಿಂದಲೂ ನೆಕ್ ಟು ನೆಕ್ ಪೈಪೋಟಿ ನಡೆದಿತ್ತು. 2ನೇ ರೌಂಡ್​ನಿಂದಲೇ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಬ್ರಜೇಂದ್ರ ಸಿಂಗ್ ವಿಜಯಶಾಲಿಯಾದರು. ಈ ಮೂಲಕ ಕಾಂಗ್ರೆಸ್ ತನ್ನ ಸ್ಥಾನವನ್ನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಶಾಸಕ ಮಹೇಂದ್ರ ಸಿಂಗ್ ಕಲುಖೇಡಾ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರದಲ್ಲಿ ಫೆ.24ರಂದು ಉಪಚುನಾವಣೆ ನಡೆದಿತ್ತು.

ಕೊಲರಸ್ ಕ್ಷೇತ್ರದಲ್ಲೂ ಕಾಂಗ್ರೆಸ್ ಅಭ್ಯರ್ಥಿ 8,000 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿಯನ್ನ ಮಣಿಸಿದ್ದಾರೆ. ಸಾರ್ವತ್ರಿಕ ಚುನಾವಣೆ ಎದುರು ನೋಡುತ್ತಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್​ಗೆ ಈ ಫಲಿತಾಂಶ ಅಕ್ಷರಶಃ ನುಂಗಲಾರದ ತುತ್ತಾಗಿದೆ. ರಾಜಸ್ಥಾನದ 3 ಕ್ಷೇತ್ರಗಳ ಉಪಚುನಾವಣೆ ಸೋಲು, ಮಧ್ಯಪ್ರದೇಶದ 2ಕ್ಷೇತ್ರಗಳ ಸೋಲು ಕೇಸರಿ ಪಡೆಯನ್ನ ಕಂಗೆಡಿಸಿದೆ. ಮುಂಬರುವ ಚುನಾವಣೆಗೆ ಜನಾಭಿಪ್ರಾಯ ರೂಪಿಸುವಲ್ಲಿ ಈ ಫಲಿತಾಂಶ ಪ್ರಮುಖ ಪಾತ್ರ ವಹಿಸಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ.
First published: February 28, 2018, 10:30 PM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading