ಯುವ ಆರಂಭಿಕ ಆಟಗಾರ ಶುಭ್ಮನ್ ಗಿಲ್ (Shubman Gill) ಐಪಿಎಲ್ 2023ರಲ್ಲಿ (IPl 2023) ರನ್ ಮಳೆಯನ್ನೇ ಹರಿಸುತ್ತಿದ್ದಾರೆ. 23 ವರ್ಷದ ಗಿಲ್ ಐಪಿಎಲ್ 16ನೇ ಋತುವಿನಲ್ಲಿ 3ನೇ ಶತಕ ಬಾರಿಸಿದ್ದಾರೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಶತಕ ಬಾರಿಸುವ ಮೂಲಕ ಗುಜರಾತ್ ತಂಡದ ಮೊತ್ತ 200ರ ಗಡಿ ದಾಟಲು ಸಹಾಯಕರಾದರು. ಗಿಲ್ 49 ಎಸೆತಗಳಲ್ಲಿ 4 ಬೌಂಡರಿ ಮತ್ತು 8 ಸಿಕ್ಸರ್‌ಗಳಿಂದ ಶತಕ ಪೂರೈಸಿದರು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ತಂಡವು ನಿಗದಿತ 20 ಓವರ್ಗೆ 3 ವಿಕೆಟ್ ನಷ್ಟಕ್ಕೆ 233 ರನ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ಗೆ 234 ರನ್ಗಳ ಬೃಹತ್ ಮೊತ್ತದ ಟಾರ್ಗೆಟ್ ನೀಡಿದೆ. ಈ ಪಂದ್ಯವನ್ನು ಗೆದ್ದ ತಂಡ ನೇರವಾಗಿ ಮೇ 28ರಂದು ನಡೆಯಲಿರುವ ಐಪಿಎಲ್ ಫೈನಲ್ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೆಣಸಾಡಲಿದೆ.
3ನೇ ಶತಕ ಸಿಡಿಸಿದ ಗಿಲ್:
ಶುಭಮನ್ ಗಿಲ್ ಐಪಿಎಲ್ ಪ್ಲೇಆಫ್‌ನಲ್ಲಿ ಅತಿದೊಡ್ಡ ಇನ್ನಿಂಗ್ಸ್ ಆಡಿದ ಬ್ಯಾಟ್ಸ್‌ಮನ್ ಎನಿಸಿಕೊಂಡಿದ್ದಾರೆ. ಆರ್ಸಿಬಿ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತು ರಾಜಸ್ಥಾನ ರಾಯಲ್ಸ್ ಆರಂಭಿಕ ಆಟಗಾರ ಜೋಸ್ ಬಟ್ಲರ್ ಐಪಿಎಲ್ ಋತುವಿನಲ್ಲಿ ಅತಿ ಹೆಚ್ಚು ಶತಕಗಳ ದಾಖಲೆಯನ್ನು ಹೊಂದಿದ್ದಾರೆ. ಇಬ್ಬರೂ ಬ್ಯಾಟ್ಸ್‌ಮನ್‌ಗಳು 4-4 ಶತಕಗಳನ್ನು ಸಮಾನವಾಗಿ ಸಿಡಿಸಿದ್ದಾರೆ. ವಿರಾಟ್ ಕೊಹ್ಲಿ 2016ರಲ್ಲಿ ಈ ಸಾಧನೆ ಮಾಡಿದ್ದರೆ, ಬಟ್ಲರ್ 2022ರಲ್ಲಿ ಈ ಸಾಧನೆ ಮಾಡಿದ್ದರು.
Innings break!
Surreal batting performance from Gujarat Titans as they post 233/3 on board 🔥🔥
Shubman Gill the man of the moment with a magnificent 129(60) 🙌
Scorecard ▶️ https://t.co/f0Ge2x8XbA#TATAIPL | #Qualifier2 | #GTvMI pic.twitter.com/TPuCraDxNZ
— IndianPremierLeague (@IPL) May 26, 2023
ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಂಡ ಗಿಲ್:
ಈ ವೇಳೆ ಶುಭ್ಮನ್ ಗಿಲ್ 60 ಎಸೆತದಲ್ಲಿ 10 ಸಿಕ್ಸ್ ಮತ್ತು 7 ಫೋರ್ ಮೂಲಕ ಬರೋಬ್ಬರಿ 129 ರನ್ ಗಳಿಸಿದರು. ಈ ಮೂಲಕ ಐಪಿಎಲ್ 2023 ಫಾಫ್ ಡುಪ್ಲೆಸಿ ಅವರನ್ನು ಹಿಂದಿಕ್ಕಿ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಂಡಿದ್ದಾರೆ. ಇದರಿಂದಾಗಿ ಶುಭ್ಮನ್ ಗಿಲ್ 16 ಇನ್ನಿಂಗ್ಸ್ ಮೂಲಕ 851 ರನ್ ಗಳಿಸಿದ್ದಾರೆ. ಈ ಮೂಲಕ ಐಪಿಎಲ್ನಲ್ಲಿ ಒಂದು ಸೀಸನ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಗಿಲ್ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ: IPL 2023: Sorry ವಿರಾಟ್ ಕೊಹ್ಲಿ ಸರ್, RCB ಪರ ಆಡ್ತಿನಿ ಅಂದ ನವೀಲ್-ಉಲ್-ಹಕ್!
ಮುಂಬೈ-ಗುಜರಾತ್ ಪ್ಲೇಯಿಂಗ್ 11:
ಮುಂಬೈ ಇಂಡಿಯನ್ಸ್ ಪ್ಲೇಯಿಂಗ್ 11: ರೋಹಿತ್ ಶರ್ಮಾ, ಇಶಾನ್ ಕಿಶನ್, ಕ್ಯಾಮೆರಾನ್ ಗ್ರೀನ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಟಿಮ್ ಡೇವಿಡ್, ಕ್ರಿಸ್ ಜೋರ್ಡಾನ್, ಪಿಯೂಷ್ ಚಾವ್ಲಾ, ಜೇಸನ್ ಬೆಹ್ರೆಂಡಾರ್ಫ್, ಕುಮಾರ್ ಕಾರ್ತಿಕೇಯ, ಆಕಾಶ್ ಮಧ್ವಲ್.
ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11: ಹಾರ್ದಿಕ್ ಪಾಂಡ್ಯ, ವೃದ್ಧಿಮಾನ್ ಸಹಾ, ಶುಭಮನ್ ಗಿಲ್, ಸಾಯಿ ಸುದರ್ಶನ್, ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್, ಮೊಹಮ್ಮದ್ ಶಮಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ