ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಮಾಡಿದ ನಂತರ ಭಾರತವು T20 ಸರಣಿಯಲ್ಲಿ 2-1 ರಲ್ಲಿ ನ್ಯೂಜಿಲೆಂಡ್ (IND vs NZ) ಅನ್ನು ಸೋಲಿಸಿದೆ. ಉಭಯ ತಂಡಗಳ ನಡುವಿನ ಟಿ20 ಸರಣಿಯ ಕೊನೆಯ ಪಂದ್ಯ ಫೆಬ್ರವರಿ 1 ರಂದು ಅಹಮದಾಬಾದ್‌ನಲ್ಲಿ ನಡೆದಿತ್ತು. ಇದರಲ್ಲಿ ಟೀಂ ಇಂಡಿಯಾ (Team India) ಕಿವೀಸ್ ತಂಡವನ್ನು 168 ರನ್ಗಳಿಮದ ಸೋಲಿಸಿತ್ತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಯುವ ಆಟಗಾರ ಶುಭ್ಮನ್ ಗಿಲ್ (Shubman Gill) ಚೊಚ್ಚಲ ಟಿ20 ಶತಕ ಸಿಡಿಸಿ ಅಬ್ಬರಿಸಿದ್ದರು. ಆದರೆ ಇದೀಗ ಗಿಲ್ ಅವರಿಗೆ ತಂಡದ ಸಹ ಆಟಗಾರನೇ ಕಪಾಳಮೋಕ್ಷ ಮಾಡುವ ಮೂಲಕ ಸುದ್ದಿಯಲ್ಲಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಗಿಲ್‌ಗೆ ಕಿಶನ್ ಕಪಾಳಮೋಕ್ಷ:
ಸಾಮಾಜಿಕ ಜಾಲತಾಣದಲ್ಲಿ ಸಖತ್ ಆ್ಯಕ್ಟಿವ್ ಆಗಿರುವ ಗಿಲ್ ಇದೀಗ ಹೊಸ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅವರನ್ನು ಹೊರತುಪಡಿಸಿ ಇನ್ನೂ ಇಬ್ಬರು ಆಟಗಾರರು ಕಾಣಿಸಿಕೊಂಡಿದ್ದಾರೆ. ಶುಭಮನ್ ಗಿಲ್ ಮತ್ತು ಇಶಾನ್ ಕಿಶನ್ ನಡುವೆ ಉತ್ತಮ ಬಾಂಧವ್ಯವಿದೆ. ಇಶಾನ್ ಕಿಶನ್, ಶುಭ್ಮನ್ ಗಿಲ್ ಮತ್ತು ಯುಜ್ವೇಂದ್ರ ಚಹಾಲ್ ವೀಡಿಯೊದಲ್ಲಿ ಕಾಣಿಸಿಕೊಂಡಿದ್ದಾರೆ. ಚಹಲ್ ಕೂಡ ಆಟಗಾರರ ಜೊತೆ ಮೋಜು ಮಾಡುತ್ತಿರುವುದು ಕಂಡು ಬರುತ್ತಿದೆ. ವಾಸ್ತವವಾಗಿ, ಎಲ್ಲಾ ಮೂವರು ಆಟಗಾರರು ಸೇರಿ ಇನ್ಸ್ಟಾಗ್ರಾಂ ರೀಲ್ಸ್ ಒಂದನ್ನು ಮಾಡಿ ಹಂಚಿಕೊಂಡಿದ್ದಾರೆ. ಇಶಾನ್ ಕಿಶನ್ ಗೊರಿಲ್ಲಾದಂತೆ ಜಿಗಿದ ನಂತರ ಗಿಲ್‌ಗೆ ಕಪಾಳಮೋಕ್ಷ ಮಾಡುತ್ತಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.
View this post on Instagram
ಇದನ್ನೂ ಓದಿ: IND vs NZ T20: ಒಂದೇ ಪಂದ್ಯದಲ್ಲಿ ಸೃಷ್ಟಿಯಾದವು ಸಾಲು ಸಾಲು ದಾಖಲೆಗಳು, ರೆಕಾರ್ಡ್ ಬ್ರೇಕ್ ಮಾಡೋದ್ರಲ್ಲಿ ನಮ್ಮವರೇ ಟಾಪ್
ಆಸ್ಟ್ರೇಲಿಯಾ ವಿರುದ್ಧ ಗಿಲ್:
ಶುಭಮನ್ ಗಿಲ್ ಎಲ್ಲಾ ಮೂರು ಸ್ವರೂಪಗಳ ಆಟಗಾರ ಎನಿಸಿಕೊಂಡಿದ್ದಾರೆ. ಅವರು ಕೇವಲ 23 ವರ್ಷ ಮತ್ತು 146 ದಿನಗಳ ವಯಸ್ಸಿನಲ್ಲಿ ಎಲ್ಲಾ ಮೂರು ಸ್ವರೂಪಗಳಲ್ಲಿ ಶತಕ ಗಳಿಸಿದ್ದಾರೆ. ಈಗ ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಗಿಲ್ ಆಸ್ಟ್ರೇಲಿಯಾ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಅವರ ಇತ್ತೀಚಿನ ಪ್ರದರ್ಶನ ನೋಡಿದರೆ, ಅವರು ಆಸೀಸ್ ವಿರುದ್ಧಅಬ್ಬರಿಸುವ ನಿರೀಕ್ಷೆಯಿದೆ.
ಸಾಲು ಸಾಲು ದಾಖಲೆ ಮುರಿದ ಗಿಲ್:
ಶುಭ್ಮನ್ ಗಿಲ್ ಸದ್ಯ ಭರ್ಜರಿ ಫಾರ್ಮ್ನಲ್ಲಿದ್ದಾರೆ. ಅವರು ಎಲ್ಲಾ 3 ಸ್ವರೂಪದಲ್ಲಿಯೂ ಶತಕ ಸಿಡಿಸಿ ಮಿಂಚಿದ್ದಾರೆ. ಇದೇ ವೇಳೆ ಚೊಚ್ಚಲ ಟಿ20 ಶತಕದ ಬಳಿಕ ಅವರು ಅನೇಖ ದಾಖಲೆಗಳನ್ನು ಮುರಿದಿದ್ದಾರೆ. ಹೌದು, ಗಿಲ್ ಭಾರತೀಯ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ದೊಡ್ಡ ಸ್ಕೋರ್ ಮಾಡಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಭಾರತದ ಪರ ಟಿ20 ಮಾದರಿಯಲ್ಲಿ ಯಾವುದೇ ಬ್ಯಾಟ್ಸ್‌ಮನ್ ಈವರೆಗೂ 126 ರನ್ ಗಳಿಸಲು ಸಾಧ್ಯವಾಗಿರಲಿಲ್ಲ.ಇದುವರೆಗೂ ವಿರಾಟ್ ಕೊಹ್ಲಿ ಈ ವಿಷಯದಲ್ಲಿ ಮೊದಲ ಸ್ಥಾನದಲ್ಲಿದ್ದರು. ಕಳೆದ ವರ್ಷ ಏಷ್ಯಾಕಪ್‌ನಲ್ಲಿ ವಿರಾಟ್ ಅಫ್ಘಾನಿಸ್ತಾನ ವಿರುದ್ಧ ಅಜೇಯ 122 ರನ್ ಗಳಿಸಿದ್ದರು. ಗಿಲ್ ಇದೀಗ ಕಿಂಗ್ ಕೊಹ್ಲಿ ದಾಖಲೆಯನ್ನು ಮುರಿದಿದ್ದಾರೆ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ