ಇಂಡಿಯನ್ ಪ್ರೀಮಿಯರ್ ಲೀಗ್ 2023 (IPL 2023) ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ (LSG vs SRH) ವಿರುದ್ಧ ಸೆಣಸಾಡುತ್ತಿದೆ. ಈ ಪಂದ್ಯವು ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ (Ekana Sports City) ನಡೆಯುತ್ತಿದ್ದು, ಟಾಸ್ ಗೆದ್ದ ಹೈದರಾಬಾದ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಆದರೆ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿ ಎಡವಿದ ತಂಡ ನಿಗದಿತ 20 ಓವರ್ನಲ್ಲಿ 8 ವಿಕೆಟ್ ನಷ್ಟಕ್ಕೆ 121 ರನ್ ಗಳಿಸುವ ಮೂಲಕ ಲಕ್ನೋ ತಂಡಕ್ಕೆ 122 ರನ್ಗಳ ಸುಲಭ ಟಾರ್ಗೆಟ್ ನೀಡಿದೆ. ಇಂದಿನ ಪಂದ್ಯ ಗೆದ್ದ ತಂಡ ಅಂಕಪಟ್ಟಿಯಲ್ಲಿ ಮೇಲಕ್ಕೇರಲಿದೆ.
ಬ್ಯಾಟಿಂಗ್ನಲ್ಲಿ ಎಡವಿದ ಹೈದರಾಬಾದ್:
ಇನ್ನು, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡವು ನಿಗದಿತ 20 ಓವರ್ನಲ್ಲಿ 8 ವಿಕೆಟ್ ನಷ್ಟಕ್ಕೆ 121 ರನ್ ಗಳಿಸಿದೆ. ಹೈದರಾಬಾದ್ ಪರ, ಮಯಾಂಕ್ ಅಗರ್ವಾಲ್ 8 ರನ್, ಅನ್ಮೋಲ್‌ಪ್ರೀತ್ ಸಿಂಗ್ 31 ರನ್, ರಾಹುಲ್ ತ್ರಿಪಾಠಿ 34 ರನ್, ಐಡೆನ್ ಮಾರ್ಕ್ರಾಮ್ ಶೂನ್ಯ, ಹ್ಯಾರಿ ಬ್ರೂಕ್ 3 ರನ್, ವಾಷಿಂಗ್ಟನ್ ಸುಂದರ್ 16 ರನ್, ಅಬ್ದುಲ್ ಸಮದ್ 21 ರನ್, ಭುವನೇಶ್ವರ್ ಕುಮಾರ್ ಶೂನ್ಯ, ಉಮ್ರಾನ್ ಮಲಿಕ್ 0 ರನ್ ಮತ್ತು ಆದಿಲ್ ರಶೀದ್ 4 ರನ್ ಗಳಿಸಿದರು.
Innings Break!
Disciplined bowling by the #LSG bowlers restrict #SRH to a total of 121/8 on the board.
Scorecard - https://t.co/7Mh0bHCrTi #TATAIPL #LSGvSRH #IPL2023 pic.twitter.com/YDwKABg2hu
— IndianPremierLeague (@IPL) April 7, 2023
ಕಳೆದ ಋತುವಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಸನ್ ರೈಸರ್ಸ್ ಹೈದರಾಬಾದ್ ಅನ್ನು 12 ರನ್ ಗಳಿಂದ ಸೋಲಿಸಿತು. ಆಗ ಹೈದರಾಬಾದ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಆಗಿದ್ದರು. ಈ ಬಾರಿ ಏಡೆನ್ ಮಾರ್ಕ್ರಾಮ್ ಹೈದರಾಬಾದ್ ತಂಡದ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ. ಆದರೆ ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ 12 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಲಾಗಿದೆ. ಪಂದ್ಯ ಮುಂದುವರಿದಂತೆ ಪಿಚ್ ಸ್ಪಿನ್ ಬೌಲರ್ ಗಳಿಗೆ ಸಹಕಾರಿಯಾಗಲಿದೆ. ಎರಡನೇ ಇನ್ನಿಂಗ್ಸ್‌ನಲ್ಲಿ ಇಬ್ಬನಿ ಪ್ರಮುಖ ಪಾತ್ರ ವಹಿಸಬಹುದು.
ಇದನ್ನೂ ಓದಿ: IPL 2023: ಆರ್ಸಿಬಿಗೆ ಸೇರ್ಪಡೆಯಾದ ಮತ್ತೊಬ್ಬ ಕನ್ನಡಿಗ, ಶುರುವಾಯ್ತು ಎದುರಾಳಿ ತಂಡದಲ್ಲಿ ನಡುಕ!
ಬೌಲಿಂಗ್ನಲ್ಲಿ ಮಿಂಚಿದ ಲಕ್ನೋ:
ಟಾಸ್ ಸೋತು ಮೊದಲು ಬೌಲಿಂಗ್ ಮಾಡಿದ ಲಕ್ನೋ ತಂಡವು ಭರ್ಜರಿಯಾಗಿ ಬೌಲಿಂಗ್ ಮಾಡಿತು. ಎಲ್ಎಸ್ಜಿ ಪರ ಕೃನಲ್ ಪಾಂಡ್ಯ 4 ಓವರ್ ಮಾಡಿ 18 ರನ್ ನೀಡಿ 3 ವಿಕೆಟ್ ಪಡೆದರು. ಉಳಿದಂತೆ ಅಮಿತ್ ಮಿಶ್ರಾ 4 ಓವರ್ ಮಾಡಿ 23 ರನ್ ನೀಡಿ 2 ವಿಕೆಟ್ ಪಡೆದರು. ಉಳಿಂದತೆ ಯಶ್ ಠಾಕೂರ್ ಮತ್ತು ರವಿ ಬಿಷ್ನೋಯ್ ತಲಾ 1 ವಿಕೆಟ್ ಪಡೆದು ಮಿಂಚಿದರು.
ಲಕ್ನೋ - ಹೈದರಾಬಾದ್ ಪ್ಲೇಯಿಂಗ್ 11:
ಸನ್‌ರೈಸರ್ಸ್ ಹೈದರಾಬಾದ್ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್, ಅನ್ಮೋಲ್‌ಪ್ರೀತ್ ಸಿಂಗ್ (WK), ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್ (C), ಹ್ಯಾರಿ ಬ್ರೂಕ್, ವಾಷಿಂಗ್ಟನ್ ಸುಂದರ್, ಅಬ್ದುಲ್ ಸಮದ್, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್ ಮತ್ತು ಆದಿಲ್ ರಶೀದ್.
ಲಕ್ನೋ ಸೂಪರ್ ಜೈಂಟ್ಸ್ ಪ್ಲೇಯಿಂಗ್ 11: ಕೆಎಲ್ ರಾಹುಲ್ (C), ಮೇನ್ ಮೈಯರ್ಸ್, ದೀಪಕ್ ಹೂಡಾ, ಮಾರ್ಕಸ್ ಸ್ಟೊಯಿನಿಸ್, ನಿಕೋಲಸ್ ಪೂರನ್ (WK), ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಅಮಿತ್ ಮಿಶ್ರಾ, ಯಶ್ ಠಾಕೂರ್, ಜಯದೇವ್ ಉನದ್ಕತ್ ರವಿ ಬಿಷ್ಣೋಯಿ.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ