ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ (WTC Final 2023) ಅಂತಿಮ ಪಂದ್ಯವು ಜೂನ್ 7 ರಿಂದ ಜೂನ್ 11ರ ವರೆಗೆ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆಯಲಿದೆ. ಈ ಬಾರಿ ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವೆ ಫೈನಲ್ ಹಣಾಹಣಿ ನಡೆಯಲಿದೆ. ಈ ಮಹತ್ವದ ಪಂದ್ಯಕ್ಕೆ ಭಾರತ ತಂಡ (Team India) ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಟೆಸ್ಟ್ ಮಾದರಿಯಿಂದ ಹೊರಗುಳಿದಿರುವ ಅನುಭವಿ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ (Ajinkya Rahane) ಅವರನ್ನು ಮ್ಯಾನೇಜ್‌ಮೆಂಟ್ ಪುನಃ ಸೇರಿಸಿಕೊಂಡಿದ್ದು, ಸ್ಫೋಟಕ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್ ಅವರನ್ನು ತಂಡದಿಂದ ಕೈಬಿಟ್ಟಿದೆ. ಪ್ರತಿಷ್ಠಿತ ಟೂರ್ನಿಯಲ್ಲಿ ಭಾರತ ತಂಡವನ್ನು ನಿಯಮಿತ ನಾಯಕ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಆದರೆ ಇದೀಗ ಭಾರತದ ಮಾಜಿ ಆಟಗಾರ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಪ್ಲೇಯಿಂಗ್ 11 ಹೇಗಿರಬೇಕು ಎಂದು ಹೇಳಿಕೊಂಡಿದ್ದಾರೆ.
WTC ಫೈನಲ್‌ಗೆ ಸುನಿಲ್ ಗವಾಸ್ಕರ್ ಪ್ಲೇಯಿಂಗ್ 11:
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಪಂದ್ಯಕ್ಕೆ ಆಟಗಾರರ ಘೋಷಣೆಯ ನಂತರ ಮಾಜಿ ಕ್ರಿಕೆಟಿಗರು ತಮ್ಮ ಪ್ರತಿಕ್ರಿಯೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ. ಈ ಸಂಚಿಕೆಯಲ್ಲಿ, ದೇಶದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಕೂಡ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದು, ಮುಂಬರುವ ಪಂದ್ಯಕ್ಕೆ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ಆಯ್ಕೆ ಮಾಡಿದ್ದಾರೆ. ಮುಂಬರುವ ಅಂತಿಮ ಪಂದ್ಯದಲ್ಲಿ ರೋಹಿತ್ ಶರ್ಮಾ ಅವರೊಂದಿಗೆ ಶುಭಮನ್ ಗಿಲ್ ಅವರನ್ನು ಆರಂಭಿಕ ಜೋಡಿಯಾಗಿ ಇರಿಸಿಕೊಂಡಿದ್ದಾರೆ. ಇದಲ್ಲದೇ ಮಧ್ಯಮ ಕ್ರಮಾಂಕದ ಜವಾಬ್ದಾರಿಯನ್ನು ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ ಮತ್ತು ರಹಾನೆಗೆ ವಹಿಸಿದ್ದಾರೆ.
ಎಲ್ಲರನ್ನೂ ಅಚ್ಚರಿಗೊಳಿಸುವಂತೆ ಸುನಿಲ್ ಗವಾಸ್ಕರ್ ಅವರು ಕೆಎಲ್ ರಾಹುಲ್ ಅವರನ್ನು ಪ್ಲೇಯಿಂಗ್ ಹನ್ನೊಂದರಲ್ಲಿ ವಿಕೆಟ್ ಕೀಪರ್ ಆಗಿ ಸೇರಿಸಿದ್ದಾರೆ. ಇದಲ್ಲದೇ ಸ್ಪಿನ್ ವಿಭಾಗದ ಜವಾಬ್ದಾರಿಯನ್ನು ಜಡೇಜಾ ಹಾಗೂ ಅಶ್ವಿನ್ ಹೆಗಲಿಗೆ ಹಾಕಿದ್ದಾರೆ. ಅದೇ ಸಮಯದಲ್ಲಿ, ಅವರು ಮೂವರು ವೇಗದ ಬೌಲರ್‌ಗಳನ್ನು ಸೇರಿಸಿಕೊಂಡಿದ್ದಾರೆ. ಇದರಲ್ಲಿ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್ ಮತ್ತು ಜಯದೇವ್ ಉನದ್ಕತ್ ಹೆಸರು ಸೇರಿದೆ.
ಇದನ್ನೂ ಓದಿ: IPL 2023: ಈ 2 ತಂಡಗಳು ಐಪಿಎಲ್ ಫೈನಲ್‌ಗೆ ಹೋಗೋದು ಫಿಕ್ಸ್ ಅಂತೆ! ಹಾಗಿದ್ರೆ ಕಪ್ ಗೆಲ್ಲೋದು ಯಾರು?
ಸುನಿಲ್ ಗವಾಸ್ಕರ್ ಆಯ್ಕೆ ಮಾಡಿದ ಪ್ಲೇಯಿಂಗ್ XI:
ಶುಭಮನ್ ಗಿಲ್, ರೋಹಿತ್ ಶರ್ಮಾ, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ರಹಾನೆ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಶ್ವಿನ್, ಜೈದೇವ್ ಉನದ್ಕತ್, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್.
WTC ಫೈನಲ್‌ಗೆ ಭಾರತ - ಆಸ್ಟ್ರೇಲಿಯಾ ತಂಡ:
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊ. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ಜಯದೇವ್ ಉನದ್ಕತ್.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ಸಿ), ಸ್ಟೀವ್ ಸ್ಮಿತ್ (ವಿಸಿ), ಡೇವಿಡ್ ವಾರ್ನರ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಸ್ಚಾಗ್ನೆ, ಮ್ಯಾಟ್ ರೆನ್ಶಾ, ಮಾರ್ಕಸ್ ಹ್ಯಾರಿಸ್, ಟ್ರಾವಿಸ್ ಹೆಡ್, ಕ್ಯಾಮೆರಾನ್ ಗ್ರೀನ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಷ್, ನಾಥನ್ ಲಿಯಾನ್, ಟಾಡ್ ಮರ್ಫಿ , ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್ವುಡ್, ಸ್ಕಾಟ್ ಬೋಲ್ಯಾಂಡ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ