• Home
  • »
  • News
  • »
  • sports
  • »
  • T20 World Cup 2022: ಟೀಂ ಇಂಡಿಯಾಗೆ ಶುಭಕೋರಿದ ಅಮಿತಾಬ್ ಬಚ್ಚನ್, ಬಿಗ್​ ಬಿ ವಿಡಿಯೋಗೆ ನೆಟ್ಟಿಗರು ಫಿದಾ

T20 World Cup 2022: ಟೀಂ ಇಂಡಿಯಾಗೆ ಶುಭಕೋರಿದ ಅಮಿತಾಬ್ ಬಚ್ಚನ್, ಬಿಗ್​ ಬಿ ವಿಡಿಯೋಗೆ ನೆಟ್ಟಿಗರು ಫಿದಾ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

T20 World Cup 2022: ಭಾರತ ತಂಡ ಸದ್ಯ ಟಿ20 ವಿಶ್ವಕಪ್​ಗಾಗಿ ಭರ್ಜರಿ ತಯಾರಿ ನಡೆಸುತ್ತಿದೆ. ಇದರ ನಡುವೆ ಬಾಲಿವುಡ್ ಬಿಗ್​ ಬಿ ಅಮಿತಾಬ್ ಬಚ್ಚನ್ (Amitabh Bachchan) ಕೂಡ ಕವಿತೆ ಹೇಳುವ ಮೂಲಕ ರೋಹಿತ್ (Rohit Sharma)​ ಪಡೆಗೆ ಶುಭಕೋರಿದ್ದಾರೆ.

  • Share this:

ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ICC T20 ವಿಶ್ವಕಪ್ 2022 ರಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ (IND vs PAK) ನಡುವಿನ ಬಹುನಿರೀಕ್ಷಿತ ಪಂದ್ಯಕ್ಕಾಗಿ ಕೋಟ್ಯಾಂತರ ಕ್ರಿಕೆಟ್​ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅಕ್ಟೋಬರ್ 23 ರಂದು ಪ್ರತಿಷ್ಠಿತ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ (Melbourne Cricket Ground) ಸೂಪರ್ 12 ಸುತ್ತಿನಲ್ಲಿ ಎರಡೂ ತಂಡಗಳು ಮುಖಾಮುಖಿಯಾಗಲಿವೆ. ಕಳೆದ ಈ ಬಾರಿ ವಿಶ್ವಕಪ್​ನಲ್ಲಿ ಸೋತಿರುವುದಕ್ಕೆ  ಮತ್ತೆ ಗೆದ್ದು ಹಳೆಯ ಸೇಡನ್ನು ತೀರಿಸಿಕೊಳ್ಳಲು ಟೀಂ ಇಂಡಿಯಾ ಸಿದ್ಧವಾಗಿದೆ. ಇದರ ನಡುವೆ ಬಾಲಿವುಡ್ ಬಿಗ್​ ಬಿ ಅಮಿತಾಬ್ ಬಚ್ಚನ್ (Amitabh Bachchan) ಕೂಡ ಕವಿತೆ ಹೇಳುವ ಮೂಲಕ ರೋಹಿತ್ (Rohit Sharma)​ ಪಡೆಗೆ ಶುಭಕೋರಿದ್ದಾರೆ.


ಭಾರತ ತಂಡಕ್ಕೆ ಶುಭಕೋರಿದ ಅಮಿತಾಬ್:


ಬಾಲಿವುಡ್​ ಬಿಗ್​ ಬಿ ಅಮಿತಾಬ್ ಬಚ್ಚನ್ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ ಟಿ20 ವಿಶ್ವಕಪ್​ ತೆರಳಿರುವ ಭಾರತ ತಂಡಕ್ಕೆ ಶುಭಕೋರಿದ್ದಾರೆ. ಸುಮಾರು ಒಂದೂವರೆ ನಿಮಿಷದ ವಿಡಿಯೋದಲ್ಲಿ ಅಮಿತಾಬ್ ಬಚ್ಚನ್ ಟೀಂ ಇಂಡಿಯಾಗೆ ಕವಿತೆ ಮೂಲಕ ಶುಭಾಷಯ ತಿಳಿಸಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ.



ಪಂದ್ಯದ ಸಂಪೂರ್ಣ ಟಿಕೆಟ್​ ಸೋಲ್ಡ್ ಔಟ್:


ಅಕ್ಟೋಬರ್ 23ರ ಭಾರತ-ಪಾಕಿಸ್ತಾನ ಪಂದ್ಯದ ಎಲ್ಲಾ ಟಿಕೆಟ್‌ಗಳು ಸೋಲ್ಡ್ ಔಟ್ ಆಗಿರುವುದರಿಂದ ಪಂದ್ಯದ ದಿನದಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನ (ಎಂಸಿಜಿ) ಹೌಸ್‌ಫುಲ್ ಆಗಲಿದೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಈಗಾಗಲೇ ಘೋಷಿಸಿದೆ. 100,024 ಆಸನ ಸಾಮರ್ಥ್ಯದೊಂದಿಗೆ, MCG ಭಾರತದ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂ ಅಹಮದಾಬಾದ್ ನಂತರ ವಿಶ್ವದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಪಾಕಿಸ್ತಾನದ ವಿರುದ್ಧ ಆಡುವ XI ಅನ್ನು ಆಯ್ಕೆ ಮಾಡಿರುವುದಾಗಿ ಈಗಾಗಲೇ ಹೇಳಿದ್ದಾರೆ.


ಇದನ್ನೂ ಓದಿ: T20 World Cup 2022: ಟಿ20 ವಿಶ್ವಕಪ್​ಗಾಗಿ ವಿಶೇಷ ವಿಡಿಯೋ ಹಂಚಿಕೊಂಡ ಚಹಾಲ್​ ಪತ್ನಿ ಧನಶ್ರೀ, ಇಲ್ಲಿದೆ ವೈರಲ್ ಪೋಸ್ಟ್


ಏತನ್ಮಧ್ಯೆ, ಶಾಹೀನ್ ಶಾ ಆಫ್ರಿದಿ ಗಾಯದಿಂದ ಚೇತರಿಸಿಕೊಂಡಿರುವುದು ಪಾಖ್ ತಂಡದ ಆತ್ಮವಿಶ್ವಾಸ ಹೆಚ್ಚಿಸಿದೆ. ಅವರು ಕಳೆದ ಟಿ20 ವಿಶ್ವಕಪ್​ನಲ್ಲಿ ಭಾರತದ ಅಗ್ರ ಮೂರು ಸ್ಟಾರ್ ಬ್ಯಾಟ್ಸ್‌ಮನ್‌ಗಳಾದ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಮತ್ತು ವಿರಾಟ್ ಕೊಹ್ಲಿಯನ್ನು ಫೇವೆಲಿಯನ್​ಗೆ ಕಳಿಸುವಲ್ಲಿ ಪ್ರಮುಖಪಾತ್ರ ವಹಿಸಿದ್ದರು. ಸದ್ಯ ಮೆಲ್ಬೋರ್ನ್ ತಲುಪಿರುವ ಭಾರತ ತಂಡ ಪಾಕ್​ ವಿರುದ್ಧದ ಪಂದ್ಯಕ್ಕೆ ಭರ್ಜರಿ ತಯಾರಿ ನಡೆಸುತ್ತಿದೆ.


ಟಿ20 ವಿಶ್ವಕಪ್​ಗೆ ಭಾರತ-ಪಾಕ್​ ತಂಡ:


ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

Published by:shrikrishna bhat
First published: