• Home
  • »
  • News
  • »
  • sports
  • »
  • IND vs PAK: ಭಾರತ-ಪಾಕಿಸ್ತಾನ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?

IND vs PAK: ಭಾರತ-ಪಾಕಿಸ್ತಾನ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

T20 IND vs PAK: ಪಾಕಿಸ್ತಾನ ವಿರುದ್ಧದ ಹಿಂದಿನ ಸೋಲನ್ನು ಸರಿಗಟ್ಟಲು ಭಾರತೀಯ ಕ್ರಿಕೆಟ್ ತಂಡವು ಮೆಲ್ಬೋರ್ನ್ ಕ್ರಿಕೆಟ್ ಮೈದಾನಕ್ಕೆ ಇಳಿಯಲಿದೆ. ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಪಾಕಿಸ್ತಾನವು ದುಬೈನಲ್ಲಿ ಭಾರತವನ್ನು ಸೋಲಿಸಿತು. ಈ ಅಮೋಘ ಪಂದ್ಯಕ್ಕಾಗಿ ಟೀಂ ಇಂಡಿಯಾ ಈಗಾಗಲೇ ಮೂರು ದಿನಗಳ ಕಾಲ ಮೆಲ್ಬೋರ್ನ್‌ನಲ್ಲಿ ಬೀಡುಬಿಟ್ಟಿದೆ.

ಮುಂದೆ ಓದಿ ...
  • Share this:

ಭಾರತ ಕ್ರಿಕೆಟ್ ತಂಡವು (Team Idnia) ಭಾನುವಾರ (ಅಕ್ಟೋಬರ್ 23) ರಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಿಂದ (Melbourne Cricket Ground) ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ (IND vs PAK) ವಿರುದ್ಧ T20 ವಿಶ್ವಕಪ್‌ನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಉಭಯ ತಂಡಗಳು ಗೆಲುವಿಗಾಗಿ ಈಗಾಗಲೇ ಭರ್ಜರಿ ತಯಾರಿಯಲ್ಲಿ ತೊಡಗಿಕೊಂಡಿದೆ. ಅದೇನೇ ಇರಲಿ, ಭಾರತ ಮತ್ತು ಪಾಕಿಸ್ತಾನಗಳು ಪೈಪೋಟಿ ಎಂದಾಕ್ಷಣ ಕ್ರಿಕೆಟ ಅಭಿಮಾನಿಗಳಲ್ಲಿ ಉತ್ಸಾಹ ಉತ್ತುಂಗದಲ್ಲಿರುತ್ತದೆ. ಬಹು ನಿರೀಕ್ಷಿತ ಈ ಪಂದ್ಯದ ಬಗ್ಗೆ ಉಭಯ ದೇಶಗಳ ಅಭಿಮಾನಿಗಳಲ್ಲಿ ಭಾರಿ ಉತ್ಸಾಹ ಮೂಡಿದೆ.


ಭಾರತ vs ಪಾಕಿಸ್ತಾನ T20 ವಿಶ್ವಕಪ್:


ನೀವು ಅಂಕಿಅಂಶಗಳನ್ನು ನೋಡಿದರೆ, ಭಾರತೀಯ ಕ್ರಿಕೆಟ್ ತಂಡವು ಭಾರಿ ಮೇಲುಗೈ ಹೊಂದಿದೆ. ಟಿ20 ವಿಶ್ವಕಪ್‌ನಲ್ಲಿ ಉಭಯ ತಂಡಗಳು 6 ಬಾರಿ ಮುಖಾಮುಖಿಯಾಗಿದ್ದು, ಟೀಮ್ ಇಂಡಿಯಾ 5 ಬಾರಿ ಗೆದ್ದಿದ್ದರೆ, ಪಾಕಿಸ್ತಾನ 1 ಪಂದ್ಯವನ್ನು ಗೆದ್ದಿದೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕಳೆದ ವರ್ಷ ಯುಎಇಯಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಸೋತಿತ್ತು. ಇದೀಗ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಆ ಸೋಲನ್ನು ಸರಿಗಟ್ಟಲು ಹವಣಿಸುತ್ತಿದೆ.


2007ರ ಟಿ20 ವಿಶ್ವಕಪ್‌ನಲ್ಲಿ ಭಾರತ 2  ಬಾರಿ ಪಾಕಿಸ್ತಾನವನ್ನು ಸೋಲಿಸಿತ್ತು. ಆ ಟೂರ್ನಿಯ ಮೊದಲ ಆವೃತ್ತಿಯಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದವು, ಅಲ್ಲಿ ಟೀಮ್ ಇಂಡಿಯಾ ಎರಡರಲ್ಲೂ ಗೆಲುವು ಸಾಧಿಸಿತ್ತು. ಆ ಸಮಯದಲ್ಲಿ, ಭಾರತ ತಂಡವು ಸೆಪ್ಟೆಂಬರ್ 14 ರಂದು ಗ್ರೂಪ್ ಹಂತದಲ್ಲಿ ಮೊದಲ ಬಾರಿಗೆ ಪಾಕಿಸ್ತಾನವನ್ನು ಎದುರಿಸಿತು. ಬೌಲಿಂಗ್ ನಲ್ಲಿ ಟೀಂ ಇಂಡಿಯಾ ಸುಲಭ ಜಯ ದಾಖಲಿಸುವಲ್ಲಿ ಯಶಸ್ವಿಯಾಗಿತ್ತು. ಇದರ ನಂತರ, ಮಹೇಂದ್ರ ಸಿಂಗ್ ಧೋನಿ (ಎಂಎಸ್ ಧೋನಿ) ನಾಯಕತ್ವದಲ್ಲಿ ಸೆಪ್ಟೆಂಬರ್ 24 ರಂದು ಪಾಕಿಸ್ತಾನವನ್ನು 5 ರನ್‌ಗಳಿಂದ ಸೋಲಿಸುವ ಮೂಲಕ ಭಾರತವು ಚಾಂಪಿಯನ್ಸ್ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.


ಇದನ್ನೂ ಓದಿ: T20 WC 2022 IND vs PAK: ನಾಳೆ ಭಾರತ-ಪಾಕಿಸ್ತಾನ ಪಂದ್ಯ, ಹೇಗಿರಲಿದೆ ಟೀಂ ಇಂಡಿಯಾ ಪ್ಲೇಯಿಂಗ್​ 11


ಇಬ್ಬರೂ 2012 ರ ಟಿ 20 ವಿಶ್ವಕಪ್‌ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಿದ್ದವು. ಸೂಪರ್ 8 ರ ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿತು. ಇದು ಟಿ20 ವಿಶ್ವಕಪ್‌ನಲ್ಲಿ ಭಾರತಕ್ಕೆ ಮೂರನೇ ಗೆಲುವು. 2014 ರ ಟಿ 20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಮತ್ತೆ ಮುಖಾಮುಖಿಯಾಗಿದ್ದವು, ಅಲ್ಲಿ ಟೀಮ್ ಇಂಡಿಯಾ 7 ವಿಕೆಟ್‌ಗಳ ಗೆಲುವು ದಾಖಲಿಸುವಲ್ಲಿ ಯಶಸ್ವಿಯಾಯಿತು. ಇದು ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಸತತ ನಾಲ್ಕನೇ ಜಯವಾಗಿದೆ. 2016ರ ಟಿ20 ವಿಶ್ವಕಪ್‌ನಲ್ಲಿ ಎರಡೂ ತಂಡಗಳು ಕೋಲ್ಕತ್ತಾದ ಐತಿಹಾಸಿಕ ಈಡನ್ ಗಾರ್ಡನ್‌ನಲ್ಲಿ ಮುಖಾಮುಖಿಯಾಗಿದ್ದು, ಅಲ್ಲಿ ಭಾರತ 6 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿತ್ತು. ಇದಾದ ಬಳಿಕ 2021ರ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತದ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿತ್ತು. ದುಬೈನಲ್ಲಿ ನಡೆದ ಗ್ರೂಪ್ ಪಂದ್ಯದಲ್ಲಿ ಪಾಕಿಸ್ತಾನ 10 ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿತು.


ಇದನ್ನೂ ಓದಿ: T20 World Cup 2022: ಪಾಕಿಸ್ತಾನ ಪಂದ್ಯಕ್ಕೂ ಮುನ್ನ ರೋಹಿತ್ ಸುದ್ದಿಗೋಷ್ಠಿ, ಪಾಕ್​ ಪತ್ರಕರ್ತನ ಪ್ರಶ್ನೆಗೆ ಹಿಟ್​ಮ್ಯಾನ್ ಖಡಕ್ ಉತ್ತರ


ಪಾಕಿಸ್ತಾನದ ವಿರುದ್ಧ ಭಾರತದ ಸಂಭಾವ್ಯ ಪ್ಲೇಯಿಂಗ್​ 11:


ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ದಿನೇಶ್ ಕಾರ್ತಿಕ್ (WK), ರವಿಚಂದ್ರನ್ ಅಶ್ವಿನ್/ಯುಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ/ಹರ್ಷಲ್ ಪಟೇಲ್ ಅರ್ಷದೀಪ್ ಸಿಂಗ್.

Published by:shrikrishna bhat
First published: