• Home
  • »
  • News
  • »
  • sports
  • »
  • Team India: ಟೀಂ ಇಂಡಿಯಾ ಸೋಲಿನ ಬೆನ್ನಲ್ಲೇ ದ್ರಾವಿಡ್​ಗೆ ಕೋಕ್​​, ಕಿವೀಸ್​ ಸರಣಿಗೆ ನೂತನ ಕೋಚ್​ ಆಯ್ಕೆ?

Team India: ಟೀಂ ಇಂಡಿಯಾ ಸೋಲಿನ ಬೆನ್ನಲ್ಲೇ ದ್ರಾವಿಡ್​ಗೆ ಕೋಕ್​​, ಕಿವೀಸ್​ ಸರಣಿಗೆ ನೂತನ ಕೋಚ್​ ಆಯ್ಕೆ?

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

IND vs NZ: ಭಾರತ ಕ್ರಿಕೆಟ್ ತಂಡ ನ್ಯೂಜಿಲೆಂಡ್ ಪ್ರವಾಸದಲ್ಲಿ 3 ಟಿ20 ಮತ್ತು 3 ಪಂದ್ಯಗಳ ಏಕದಿನ ಸರಣಿಯನ್ನು ಆಡಬೇಕಿದೆ. ಸರಣಿಯ ಮೊದಲ ಟಿ20 ಪಂದ್ಯ ನವೆಂಬರ್ 18 ರಂದು ವೆಲ್ಲಿಂಗ್ಟನ್‌ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪ್ರವಾಸದಲ್ಲಿ ರಾಹುಲ್ ದ್ರಾವಿಡ್ ಭಾರತ ತಂಡದೊಂದಿಗೆ ಇರುವುದಿಲ್ಲ. ನೂತನ ಕೋಚಿಂಗ್ ಸಿಬ್ಬಂದಿಯೊಂದಿಗೆ ಭಾರತ ತಂಡ ನ್ಯೂಜಿಲೆಂಡ್ ಪ್ರವಾಸಕ್ಕೆ ತೆರಳಲಿದೆ.

ಮುಂದೆ ಓದಿ ...
  • Share this:

ಟಿ20 ವಿಶ್ವಕಪ್ ನಂತರ  ಭಾರತೀಯ ಕ್ರಿಕೆಟ್ ತಂಡವು ಈಗ ನ್ಯೂಜಿಲೆಂಡ್ (IND vs NZ) ಪ್ರವಾಸಕ್ಕೆ ತೆರಳಲಿದೆ. ಈ ಪ್ರವಾಸದಲ್ಲಿ ಟೀಂ ಇಂಡಿಯಾ ಸೀಮಿತ ಓವರ್ ಸರಣಿಯನ್ನು ಆಡಬೇಕಿದೆ. ಈ ಪ್ರವಾಸದಲ್ಲಿ ವಿವಿಎಸ್ ಲಕ್ಷ್ಮಣ್ (VVS Laxman) ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನ್ಯೂಜಿಲೆಂಡ್ ಪ್ರವಾಸಕ್ಕಾಗಿ ರಾಹುಲ್ ದ್ರಾವಿಡ್‌ಗೆ (Rahul Dravid) ವಿಶ್ರಾಂತಿ ನೀಡಲು ನಿರ್ಧರಿಸಿದೆ ಎನ್ನಲಾಗುತ್ತಿದೆ. ರಾಹುಲ್ ದ್ರಾವಿಡ್ ಕಳೆದ ವರ್ಷದಿಂದ ಟೀಂ ಇಂಡಿಯಾದ ಮುಖ್ಯ ಕೋಚ್ ಪಾತ್ರದಲ್ಲಿದ್ದಾರೆ. ದ್ರಾವಿಡ್ ಅವರ ಕೋಚಿಂಗ್‌ನಲ್ಲಿಯೂ ಟೀಂ ಇಂಡಿಯಾ ಐಸಿಸಿ ಟೂರ್ನಿಗಳಲ್ಲಿ ಅದ್ಭುತ ಪ್ರದರ್ಶನ ನೀಡಲು ಸಾಧ್ಯವಾಗುತ್ತಿಲ್ಲ. ಟಿ20 ವಿಶ್ವಕಪ್‌ನ (T20 WC 2022) ಸೆಮಿಫೈನಲ್‌ನಲ್ಲಿ ಭಾರತ ತಂಡ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಈ ಹಿಂದೆ ಏಷ್ಯಾಕಪ್‌ನಲ್ಲಿಯೂ (Asia Cup) ತಂಡಕ್ಕೆ ಅದ್ಭುತ ಪ್ರದರ್ಶನ ನೀಡಲು ಸಾಧ್ಯವಾಗಿರಲಿಲ್ಲ. ಇದೀಗ ದ್ರಾವಿಡ್ ತಂಡದ ನಿರ್ಧಾರದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ.


ಟೀಂ ವಿಶ್ವಕಪ್​ನಿಂದ ಭಾರತ ಔಟ್​:


ಅಡಿಲೇಡ್‌ನಲ್ಲಿ ನಡೆದ ಸೆಮಿಫೈನಲ್ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡವನ್ನು ಇಂಗ್ಲೆಂಡ್ ಸೋಲಿಸಿತು. ಜೋಸ್ ಬಟ್ಲರ್ ನಾಯಕತ್ವದ ಆಂಗ್ಲರು ಭಾರತವನ್ನು 10 ವಿಕೆಟ್‌ಗಳಿಂದ ಸೋಲಿಸಿದರು. ಈ ಮೂಲಕ ತಂಡದ ಸೋಲನ್ನು ಅರಗಿಸಿಕೊಳ್ಳಲು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಾಧ್ಯವಾಗುತ್ತಿಲ್ಲ. ಈ ಪಂದ್ಯದಲ್ಲಿ ಭಾರತದ ದಿಗ್ಗಜ ಬ್ಯಾಟ್ಸ್‌ಮನ್ ಉತ್ತಮ ಪ್ರದರ್ಶನ ನೀಡುವಲ್ಲಿ ಎಡವಿದರು. ಭಾರತದ ಬೌಲರ್‌ಗಳು ಒಂದು ವಿಕೆಟ್‌ ಸಹ ತೆಗೆಯಲಾಗದೇ ಹೆಣಗಾಡಿದರು.


ಕಿವೀಸ್​ ಸರಣಿಗೆ ಲಕ್ಷ್ಮಣ್ ಆಯ್ಕೆ:


 ಟೈಮ್ಸ್ ಆಫ್ ಇಂಡಿಯಾ ವರದಿ ಪ್ರಕಾರ, ‘ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಬೌಲಿಂಗ್ ಕೋಚ್ ಪಾರಸ್ ಮಾಬ್ರೆ ಮತ್ತು ಬ್ಯಾಟಿಂಗ್ ಕೋಚ್ ವಿಕ್ರಮ್ ರಾಥೋರ್ T20 ವಿಶ್ವಕಪ್‌ನಲ್ಲಿ ಭಾರತ ತಂಡದೊಂದಿಗೆ ಆಸ್ಟ್ರೇಲಿಯಾಕ್ಕೆ ತೆರಳಿದ್ದರು. ಆದರೆ ಈ ಟಿ20 ವಿಶ್ವಕಪ್​ ತಂಡಕ್ಕೆ ವಿಶ್ರಾಂತಿ ನೀಡಲಾಗುವುದು. ವಿಶ್ರಾಂತಿಯ ನಂತರ, ಈ ಎಲ್ಲಾ ಕೋಚಿಂಗ್ ಸಿಬ್ಬಂದಿ ನಂತರ ಭಾರತ ತಂಡದೊಂದಿಗೆ ಬಾಂಗ್ಲಾದೇಶ ಪ್ರವಾಸಕ್ಕೆ ಹೋಗುತ್ತಾರೆ. ನ್ಯೂಜಿಲೆಂಡ್ ಪ್ರವಾಸದಲ್ಲಿ ಟೀಂ ಇಂಡಿಯಾ ಜೊತೆಗೆ ಬ್ಯಾಟಿಂಗ್ ಕೋಚ್ ಹೃಷಿಕೇಶ್ ಕಾನಿಟ್ಕರ್ ಮತ್ತು ಬೌಲಿಂಗ್ ಕೋಚ್ ಸಾಯಿರಾಜ್ ಬಹುಲೆ ಕೋಚಿಂಗ್ ಸಿಬ್ಬಂದಿಯಲ್ಲಿರುತ್ತಾರೆ. ಅದೇ ರೀತಿ ವಿವಿಎಸ್ ಲಕ್ಷ್ಮಣ್ ಅವರು ದ್ರಾವಿಡ್ ಬದಲಿಗೆ ಕೋಚ್​ ಆಗಿ ಕಿವೀಸ್ ಸರಣಿಗೆ ಆಯ್ಕೆ ಆಗಬಹುದು ಎನ್ನಲಾಗುತ್ತದೆ.


ವಿವಿಎಸ್ ಲಕ್ಷ್ಮಣ್ ಅವರು ಎನ್‌ಸಿಎ ಅಧ್ಯಕ್ಷರಾಗಿದ್ದಾರೆ, ವಿವಿಎಸ್ ಲಕ್ಷ್ಮಣ್ ಪ್ರಸ್ತುತ
ಬೆಂಗಳೂರಿನಲ್ಲಿ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲಕ್ಷ್ಮಣ್ ಈ ವರ್ಷದ ಆರಂಭದಲ್ಲಿ ಭಾರತ ತಂಡದೊಂದಿಗೆ ಐರ್ಲೆಂಡ್ ಮತ್ತು ಜಿಂಬಾಬ್ವೆ ಪ್ರವಾಸ ಕೈಗೊಂಡಿದ್ದರು. ಇದಲ್ಲದೇ, ಟಿ20 ವಿಶ್ವಕಪ್‌ಗೂ ಮುನ್ನ ಅಕ್ಟೋಬರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸ್ವದೇಶಿ ಸರಣಿಯಲ್ಲಿ ಟೀಮ್ ಇಂಡಿಯಾ ಜೊತೆಗಿದ್ದರು.


ಭಾರತ vs ನ್ಯೂಜಿಲೆಂಡ್ ಸರಣಿ:


ಭಾರತ ತಂಡ T20 ಸರಣಿಯೊಂದಿಗೆ ನ್ಯೂಜಿಲೆಂಡ್ ಪ್ರವಾಸವನ್ನು ಪ್ರಾರಂಭಿಸಲಿದೆ. 3 ಪಂದ್ಯಗಳ ಸರಣಿಯ ಮೊದಲ ಟಿ20 ಪಂದ್ಯ ನವೆಂಬರ್ 18 ರಂದು ವೆಲ್ಲಿಂಗ್ಟನ್‌ ಸ್ಟೇಡಿಯಂನಲ್ಲಿ ನಡೆಯಲಿದೆ. ಟಿ20 ಸರಣಿಯ ಬಳಿಕ ಭಾರತ ತಂಡ 3 ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ.


ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ರಿಷಬ್ ಪಂತ್ (ಉಪನಾಯಕ), ಇಶಾನ್ ಕಿಶನ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಯಾದವ್, ಹರ್ಷಲ್ ಪಟೇಲ್ ಸಿರಾಜ್, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್ ಮತ್ತು ಅರ್ಷದೀಪ್ ಸಿಂಗ್.


ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ: ಶಿಖರ್ ಧವನ್ (ನಾಯಕ), ರಿಷಬ್ ಪಂತ್ (ಉಪನಾಯಕ), ಶುಭಮನ್ ಗಿಲ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಶಹಬಾಜ್ ಅಹ್ಮದ್, ವಾಷಿಂಗ್ಟನ್ ಸುಂದರ್ ಮಲಿಕ್, ಕುಲದೀಪ್ ಸೇನ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್ ಮತ್ತು ಅರ್ಷದೀಪ್ ಸಿಂಗ್

Published by:shrikrishna bhat
First published: