T20 World Cup 2022: ಮತ್ತೆ ಭಾರತ-ಪಾಕ್​ ಮುಖಾಮುಖಿ, ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ ಸ್ಟಾರ್​ ಬೌಲರ್​

T20 World Cup: ಪಾಕಿಸ್ತಾನ ತಂಡದ ವೇಗದ ಬೌಲರ್ ಶಾಹೀನ್ ಶಾ ಆಫ್ರಿದಿ ಗಾಯದ ಸಮಸ್ಯೆಯಿಂದ ಏಷ್ಯಾ ಕಪ್​ ಟೂರ್ನಿಯಿಂದ ಹೊರಗುಳಿದಿದ್ದರು. ಆದರೆ ಇದೀಗ ಅವರು  ಫಿಟ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ.

ಶಾಹೀನ್ ಅಫ್ರಿದಿ

ಶಾಹೀನ್ ಅಫ್ರಿದಿ

  • Share this:
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ICC T20 ವಿಶ್ವಕಪ್ 2022 ಗಾಗಿ 15 ಸದಸ್ಯರ ತಂಡವನ್ನು(India T20 World Cup Squad) ಘೋಷಿಸಿದೆ. ರೋಹಿತ್ ಶರ್ಮಾ (Rohit Sharma) ಟೀಂ ಇಂಡಿಯಾವನ್ನು ಮುನ್ನಡೆಸಲಿದ್ದಾರೆ. ಅಕ್ಟೋಬರ್ 16 ರಿಂದ ನವೆಂಬರ್ 13 ರವರೆಗೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ವಿಶ್ವಕಪ್​ಗೆ ಈಗಾಗಲೇ ಭಾರತ ತಂಡ ಭರ್ಜರಿ ಸಿದ್ಧತೆಯಲ್ಲಿ ತೊಡಗಿದೆ. ICC ಪುರುಷರ T20 ವಿಶ್ವಕಪ್ 2022 ರಲ್ಲಿ, ಭಾರತ ಮತ್ತು ಪಾಕಿಸ್ತಾನವು (IND vs PAK) ಅಕ್ಟೋಬರ್ 23 ರಂದು ಮುಖಾಮುಖಿಯಾಗಲಿದೆ. ಉಭಯ ತಂಡಗಳ ನಡುವಿನ ಈ ಹೈ ವೋಲ್ಟೇಜ್ ಪಂದ್ಯ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಪಾಕ್​ ಮಾಜಿ ಆಟಗಾರ ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ್ದಾರೆ.

ಟೀಂ ಇಂಡಿಯಾಗೆ ಎಚ್ಚರಿಕೆ ನೀಡಿದ ಅಫ್ರಿದಿ:

ಪಾಕಿಸ್ತಾನ ತಂಡದ ವೇಗದ ಬೌಲರ್ ಶಾಹೀನ್ ಶಾ ಆಫ್ರಿದಿ ಗಾಯದ ಸಮಸ್ಯೆಯಿಂದ ಏಷ್ಯಾ ಕಪ್​ ಟೂರ್ನಿಯಿಂದ ಹೊರಗುಳಿದಿದ್ದರು. ಆದರೆ ಇದೀಗ ಅವರು  ಫಿಟ್ ಆಗಿ ಕಾಣಿಸಿಕೊಂಡಿದ್ದಾರೆ. ಅವರು ವರ್ಕೌಟ್ ಮಾಡುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಅವರು ಈ ಬಾರಿಯ ಟಿ20 ವಿಶ್ವಕಪ್​ಗೆ ಮರಳುವ ಸೂಚನೆ ನೀಡಿದ್ದಾರೆ.

ಜುಲೈನಲ್ಲಿ ಗಾಲೆಯಲ್ಲಿ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಶಾಹೀನ್ ಅಫ್ರಿದಿ ಫೀಲ್ಡಿಂಗ್ ಮಾಡುವಾಗ ಬಲ ಮೊಣಕಾಲು ಗಾಯಗೊಂಡಿದ್ದರು. ಈ ಕಾರಣದಿಂದಾಗಿ ಅವರು ಏಷ್ಯಾ ಕಪ್ 2022 ಮತ್ತು ಇಂಗ್ಲೆಂಡ್ ವಿರುದ್ಧದ ತವರು ಸರಣಿಯಿಂದ ಹೊರಗುಳಿದಿದ್ದರು. ಶಾಹೀನ್ ಅಫ್ರಿದಿ ಟ್ವಿಟರ್‌ನಲ್ಲಿ ವಿಡಿಯೋ ಹಾಕಿದ್ದಾರೆ. ಇದರಲ್ಲಿ ಅವರು ವೇಟ್ ಲಿಫ್ಟಿಂಗ್ ಮಾಡುತ್ತಿರುವುದು ಕಂಡುಬಂದಿದೆ. ಈ ಪಾಕಿಸ್ತಾನದ ವೇಗದ ಬೌಲರ್ ಅಕ್ಟೋಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ T20 ವಿಶ್ವಕಪ್‌ಗೆ ಮೊದಲು ನ್ಯೂಜಿಲೆಂಡ್ ತ್ರಿಕೋನ ಸರಣಿಯಿಂದ ತಂಡಕ್ಕೆ ಮರಳಲಿದ್ದಾರೆ.

ಇದನ್ನೂ ಓದಿ: Dinesh Karthik Tweet: ಟಿ 20 ವಿಶ್ವಕಪ್​ ಆಯ್ಕೆ ನಂತರ ದಿನೇಶ್​ ಕಾರ್ತಿಕ್ ಮಾಡಿದ ಟ್ವೀಟ್​ ವೈರಲ್, ಅಷ್ಟಕ್ಕೂ ಏನಂದ್ರು ಡಿಕೆ?

ಟಿ20 ಅಲ್ಲಿ ಅಪಾಯಕಾರಿ ಬೌಲರ್​ ಅಫ್ರಿದಿ:

ಶಾಹೀನ್ ಅಫ್ರಿದಿ ಪಾಕಿಸ್ತಾನದ ಪರವಾಗಿ 40 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ 47 ವಿಕೆಟ್ ಪಡೆದಿದ್ದಾರೆ. ಶಹೀನ್ ಶಾ ಆಫ್ರಿದಿ ಟಿ20ಯಲ್ಲಿ ಅತ್ಯಂತ ಅಪಾಯಕಾರಿ ಬೌಲರ್. ಈ ವರ್ಷ 22ರ ಹರೆಯದ ಅವರು 119 ಟಿ20 ಪಂದ್ಯಗಳಲ್ಲಿ 165 ವಿಕೆಟ್‌ಗಳನ್ನು ಪಡೆದಿದ್ದಾರೆ. 19 ರನ್‌ಗಳಿಗೆ 6 ವಿಕೆಟ್ ಕಬಳಿಸಿರುವುದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಅವರು ತಮ್ಮ ಟಿ20 ವೃತ್ತಿಜೀವನದಲ್ಲಿ ನಾಲ್ಕು ಬಾರಿ ಐದು ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ: T20 World Cup 2022: 15 ವರ್ಷಗಳ ನಂತರ ಟಿ20 ವಿಶ್ವಕಪ್​ ಗೆಲ್ಲಲು ಮತ್ತೆ ಒಂದಾದ್ರು ಸ್ಟಾರ್​ ಜೋಡಿ, ಈ ಸಲ ಕಪ್ ನಮ್ದೇ ಎಂದ ಫ್ಯಾನ್ಸ್​

ಟಿ20 ವಿಶ್ವಕಪ್​ಗೆ ಭಾರತ ತಂಡ ಪ್ರಕಟ:

ಈಗಾಗಲೇ ಟಿ20 ವಿಶ್ವಕಪ್​ಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಓರ್ವ ಆಟಗಾರರನ್ನು ಹೊರತುಪಡಿಸಿ ಉಳಿದೆಲ್ಲಾ ಆಟಗಾರರು ಏಷ್ಯಾ ಕಪ್​ 2022ರಲ್ಲಿ ಕಣಕ್ಕಿಳಿದವರೇ ಆಗಿದ್ದಾರೆ. ಇದಕ್ಕೂ ಮುನ್ನ ಆಸೀಸ್​ ಮತ್ತು ಆಫ್ರಿಕಾ ನಡುವೆ ಸರಣಿಗಳನ್ನು ಭಾರತ ತಂಡ ಆಡಲಿದೆ.

ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (WC), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಆರ್ ಪಂತ್ (WK), ದಿನೇಶ್ ಕಾರ್ತಿಕ್ (WK), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ವೈ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಬಿ. ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.
ಸ್ಟ್ಯಾಂಡ್-ಬೈ ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್
Published by:shrikrishna bhat
First published: