• Home
  • »
  • News
  • »
  • sports
  • »
  • T20 WC IND vs PAK: ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕಿಸ್ತಾನಕ್ಕೆ ಬಿಗ್ ಶಾಕ್, ಸ್ಟಾರ್ ಬ್ಯಾಟ್ಸ್ ಮನ್ ತಲೆಗೆ ಗಾಯ

T20 WC IND vs PAK: ಭಾರತದ ವಿರುದ್ಧದ ಪಂದ್ಯಕ್ಕೂ ಮುನ್ನ ಪಾಕಿಸ್ತಾನಕ್ಕೆ ಬಿಗ್ ಶಾಕ್, ಸ್ಟಾರ್ ಬ್ಯಾಟ್ಸ್ ಮನ್ ತಲೆಗೆ ಗಾಯ

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

T20 WC IND vs PAK: ಭಾನುವಾರ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಹಣಾಹಣಿ ನಡೆಯಲಿದೆ. ಈ ಪಂದ್ಯ ಉಭಯ ತಂಡಗಳಿಗೂ ಅತ್ಯಂತ ಮಹತ್ವದ್ದಾಗಿದೆ.

  • Share this:

ಟಿ20 ವಿಶ್ವಕಪ್‌ಗೂ (T20 WC) ಮುನ್ನ ಪಾಕಿಸ್ತಾನ ಕ್ರಿಕೆಟ್ (PAK Cricket) ತಂಡ ಭಾರೀ ಹಿನ್ನಡೆ ಅನುಭವಿಸಿದೆ. ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಶಾನ್ ಮಸೂದ್ (Shan Masood) ಅವರು ಮೆಲ್ಬೋರ್ನ್ (Melbourne) ಕ್ರಿಕೆಟ್ ಗ್ರೌಂಡ್‌ನಲ್ಲಿ ನೆಟ್ ಸೆಷನ್‌ನಲ್ಲಿ ತಲೆಗೆ ಗಾಯ ಮಾಡಿಕೊಂಡರು, ನಂತರ ಅವರನ್ನು ಸ್ಕ್ಯಾನ್‌ಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೊಹಮ್ಮದ್ ನವಾಜ್ (Mohammad Nawaz) ಹೊಡೆದ ಹೊಡೆತದಿಂದ ಮಸೂದ್ ಅವರ ತಲೆಯ ಬಲಭಾಗಕ್ಕೆ ಪೆಟ್ಟಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಅವರು ಸದ್ಯ ಭಾರತ ಮತ್ತು ಪಾಕಿಸ್ತಾನ (IND vs PAK) ಪಂದ್ಯಕ್ಕೆ ಲಭ್ಯ ಇರುತ್ತಾರೆಯೇ ಎಂಬ ಬಗ್ಗೆ ಪಾಕ್ ಮಂಡಳಿ ಮಾಹಿತಿ ನೀಡಿಲ್ಲ.


ಭಾರತ-ಪಾಕಿಸ್ತಾನ ಪಂದ್ಯ:


ಪಾಕಿಸ್ತಾನ ಕ್ರಿಕೆಟ್ ತಂಡ ಟಿ20 ವಿಶ್ವಕಪ್‌ನಲ್ಲಿ ತನ್ನ ಮೊದಲ ಪಂದ್ಯವನ್ನು ಅಕ್ಟೋಬರ್ 23 ರಂದು ಭಾರತದ ವಿರುದ್ಧ ಆಡಲಿದೆ. ಶಾನ್ ಮಸೂದ್ ಕಳೆದ ತಿಂಗಳು ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದಿದ್ದರು. ಪಾಕಿಸ್ತಾನದ ತಂಡದಲ್ಲಿ ಮಸೂದ್ ಅವರ ಬ್ಯಾಟಿಂಗ್​ ಅವಶ್ಯಕತೆ ತುಂಬಾ ಉಪಯುಕ್ತವಾಗಿದೆ. ಆದರೆ ಫಖರ್ ಕೂಡ ಗಾಯದಿಂದ ಚೇತರಿಸಿಕೊಂಡು ಇತ್ತೀಚೆಗೆ ತಂಡಕ್ಕೆ ಮರಳಿದ್ದಾರೆ. ಇಬ್ಬರೂ ಆಟಗಾರರು ಮೂರನೇ ಕ್ರಮಾಂಕದ ಸ್ಪರ್ಧಿಗಳಾಗಿದ್ದಾರೆ.ಸದ್ಯ ಮಸೂದ್ ಅವರು ಗಾಯಗೊಂಡಿರುವ ವಿಡಿಯೋ ವೈರಲ್ ಆಗಿದ್ದು, ಶಾನ್ ಮಸೂದ್ ಗಾಯಗೊಂಡು ನೆಲದ ಮೇಲೆ ಮಲಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಅವರು ಎಲ್ಲಾ ಕಡೆಯಿಂದ ತಂಡದ ಜೊತೆಗೆ ಆಟಗಾರರಿಂದ ಸುತ್ತುವರೆದಿದ್ದಾರೆ. ತಂಡದ ವೈದ್ಯಕೀಯ ಸಿಬ್ಬಂದಿ ಅವರಿಗೆ ಪ್ರಥಮ ಚಿಕಿತ್ಸೆ ನೀಡುವಲ್ಲಿ ನಿರತರಾಗಿದ್ದಾರೆ. ಆದಾಗ್ಯೂ, ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಇದರಿಂದ ಅವರ ಗಾಯವು ಎಷ್ಟು ಗಂಭೀರವಾಗಿದೆ ಎಂದು ತಿಳಿಯಬಹುದು.


ಇದನ್ನೂ ಓದಿ: T20 WC India vs Pakistan: ಭಾರತ-ಪಾಕಿಸ್ತಾನ ನಡುವಿನ ಪಂದ್ಯ ರದ್ದಾದರೆ ಯಾರಿಗೆ ಲಾಭ? ಯಾರಿಗೆ ನಷ್ಟ? ಇಲ್ಲಿದೆ ಮಾಹಿತಿ


ಟಿ20 ಕ್ರಿಕೆಟ್​ನಲ್ಲಿ ಉತ್ತಮ ಬ್ಯಾಟ್ಸ್​ಮನ್ ಶಾನ್:


ಶಾನ್ ಮಸೂದ್ 12 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. 33ರ ಹರೆಯದ ಶಾನ್ ಮಸೂದ್ 12 ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 220 ರನ್ ಗಳಿಸಿದ್ದಾರೆ. ಈ ಸಮಯದಲ್ಲಿ ಅವರ ಸ್ಟ್ರೈಕ್ ರೇಟ್ 125 ಆಗಿತ್ತು. ಮಸೂದ್ ಇದುವರೆಗೆ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎರಡು ಅರ್ಧಶತಕಗಳನ್ನು ಗಳಿಸಿದ್ದಾರೆ.


IND vs PAK ಹೆಡ್​ ಟು ಹೆಡ್​:


ಟಿ20 ವಿಶ್ವಕಪ್‌ನ ದಾಖಲೆಯನ್ನು ನೋಡಿದರೆ ಇಲ್ಲಿಯವರೆಗೆ ಭಾರತ ಮತ್ತು ಪಾಕಿಸ್ತಾನ ನಡುವೆ 6 ಪಂದ್ಯಗಳು ನಡೆದಿವೆ. 5 ಪಂದ್ಯಗಳನ್ನು ಗೆಲ್ಲುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ. ಒಂದು ಪಂದ್ಯದಲ್ಲಿ ಪಾಕಿಸ್ತಾನ ಗೆದ್ದಿತ್ತು. ಒಟ್ಟಾರೆ ಟಿ20 ದಾಖಲೆ ನೋಡಿದರೆ ಭಾರತ 11 ಪಂದ್ಯಗಳಲ್ಲಿ 8ರಲ್ಲಿ ಗೆದ್ದಿದ್ದರೆ, 3ರಲ್ಲಿ ಸೋತಿದೆ.


ಇದನ್ನೂ ಓದಿ: IND vs PAK: ಟೀಂ ಇಂಡಿಯಾ ಅಭಿಮಾನಿಗಳಿಗೆ ಭರ್ಜರಿ ಗುಡ್​ ನ್ಯೂಸ್, ಭಾರತ-ಪಾಕ್​ ಪಂದ್ಯದ ಬಗ್ಗೆ ಸಿಕ್ತು ಬಿಗ್​ ಅಪ್​ಡೇಟ್​


ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ:


ಬಾಬರ್ ಅಜಮ್ (ನಾಯಕ), ಶಾದಾಬ್ ಖಾನ್ (ಉಪನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಫಖರ್ ಜಮಾನ್, ಆಸಿಫ್ ಅಲಿ, ಹೈದರ್ ಅಲಿ, ಹಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಶಾನ್ ಮಸೂದ್, ಮೊಹಮ್ಮದ್ ನವಾಜ್, ಶಾಹೀನ್ ಶಾ ಆಫ್ರಿದಿ, ಖುಷ್ದಿಲ್ ಶಾ, ಮೊಹಮ್ಮದ್ ವಾಸಿಂ, ನಸೀಮ್ ಶಾ, ಮೊಹಮ್ಮದ್ ಹಸ್ನೈನ್.

Published by:shrikrishna bhat
First published: