T20 World Cup 2022: ಟಿ20 ವಿಶ್ವಕಪ್‌ಗೆ ಹೊಸ ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ ಟೀಂ ಇಂಡಿಯಾ, ವೈರಲ್​ ಆಯ್ತು ವಿಡಿಯೋ

Team India: ಅಕ್ಟೋಬರ್ 16ರಿಂದ ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಅದರ ಜೊತೆಗೆ ವಿಶ್ವಕಪ್​ನಲ್ಲಿ ಟೀಂ ಇಂಡಿಯಾದ ಜರ್ಸಿ ಸಹ ಬದಲಾಗಲಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
T20 ವಿಶ್ವಕಪ್ 2022ಗಾಗಿ (T20 World Cup 2022) 15 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿದ ಒಂದು ದಿನದ ನಂತರ, ಇದೀಗ BCCI ಕ್ರಿಕೆಟ್ ಅಭಿಮಾನಿಗಳಿಗೆ ಟೀಂ ಇಂಡಿಯಾದ (Team India) ಹೊಸ ಜೆರ್ಸಿ ಅನಾವರಣ ಗೊಳಿಸುವುದಾಗಿ ಅಧಿಕೃತವಾಗಿ ತಿಳಿಸಿದೆ. ಈ ಕುರಿತು ಭಾರತೀಯ ಕ್ರಿಕೆಟ್ ಮಂಡಳಿ (BCCI) ಸೋಮವಾರ ತನ್ನ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮತ್ತು ಎಂಪಿಎಲ್​ ಸ್ಪೋರ್ಟ್ಸ್ (MPL Sports) ಸಹ ಟ್ವಿಟರ್​ನಲ್ಲಿ ವೀಡಿಯೊವನ್ನು ಹಂಚಿಕೊಂಡಿದೆ. ಈ ಬಾರಿ ಟೀಂ ಇಂಡಿಯಾದ ಜೆರ್ಸಿಯ ಪ್ರಾಯೋಜಕತ್ವವನ್ನು  MPL ​ ತೆಗೆದುಕೊಂಡಿದೆ. ಬಿಡುಗಡೆ ಆದ ವಿಡಿಯೋದಲ್ಲಿ ನಾಯಕ ರೋಹಿತ್ ಶರ್ಮಾ (Rohit Sharma) , ಶ್ರೇಯಸ್ ಅಯ್ಯರ್ ಮತ್ತು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಕಾಣಿಸಿಕೊಂಡಿದ್ದು, ಹೊಸ ಜೆರ್ಸಿ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದಾರೆ.

ನೂತನ ಜೆರ್ಸಿಯಲ್ಲಿ ಟೀಂ ಇಂಡಿಯಾ:

ಅಕ್ಟೋಬರ್​ 16ರ ರಿಂದ ಆರಂಭವಾಗುವ ಐಸಿಸಿ ಟಿ20 ವಿಶ್ವಕಪ್​ 2022ರಲ್ಲಿ ಭಾರತ ತಂಡ ನೂತನ ಜೆರ್ಸಿಯೊಂದಿಗೆ ಕಣಕ್ಕಿಳಿಯಲಿದೆ. ಈಗಾಗಲೇ ವಿಶ್ವಕಪ್​ಗಾಗಿ ತಂಡವನ್ನು ಪ್ರಕಟಿಸಲಾಗಿದ್ದು, ನೂತನ ಜೆರ್ಸಿಯಲ್ಲಿ ಭಾರತ ತಂಡ ಹೇಗಿರಲಿದೆ ಎಮದು ಕಾದು ನೋಡಬೇಕಿದೆ. ವೀಡಿಯೊದಲ್ಲಿ, ಭಾರತೀಯ ನಾಯಕ ರೋಹಿತ್, ನೀವು ನಮ್ಮನ್ನು ಇಂದು ಕ್ರಿಕೆಟಿಗರನ್ನಾಗಿ ಮಾಡುತ್ತೀರಿ' ಎಂದು ಹೇಳಿದ್ದಾರೆ. ಅಂತೆಯೇ ಅಯ್ಯರ್ ಅವರು, ‘ನಿಮ್ಮ ಪ್ರೋತ್ಸಾಹದಿಂದಲೇ ನಮಗೆ ಶಕ್ತಿ ಬಂದಿದೆ’ ಎಂದಿದ್ದಾರೆ. ಅಲ್ಲದೇ ಲಿಂಕ್ ಮೇಲೆ ಕ್ಲಿಕ್ ಮಾಡಿ ಮತ್ತು ಟೀಮ್ ಇಂಡಿಯಾದ ಹೊಸ ಜೆರ್ಸಿಯ ಭಾಗವಾಗಿರಿ' ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.





T20 ವಿಶ್ವಕಪ್‌ಗೆ ಬುಮ್ರಾ ವಾಪಸ್ಸ್​, ಜಡ್ಡು ಔಟ್​:

BCCI ಅಕ್ಟೋಬರ್ 16 ರಿಂದ ಆಸ್ಟ್ರೇಲಿಯಾದಲ್ಲಿ ಪ್ರಾರಂಭವಾಗುವ T20 ವಿಶ್ವಕಪ್‌ಗೆ 15 ಸದಸ್ಯರ ಭಾರತೀಯ ತಂಡವನ್ನು ಪ್ರಕಟಿಸಿದೆ. ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಮತ್ತು ಡೆತ್ ಓವರ್ ಸ್ಪೆಷಲಿಸ್ಟ್ ಹರ್ಷಲ್ ಪಟೇಲ್ ಗಾಯದಿಂದ ಚೇತರಿಸಿಕೊಂಡ ನಂತರ ತಂಡಕ್ಕೆ ಮರಳಿದ್ದಾರೆ. ಆದಾಗ್ಯೂ, ಅವೇಶ್ ಖಾನ್ ಮತ್ತು ರವಿ ಬಿಷ್ಣೋಯ್ ಅವರು 15 ಜನರ ವಿಶ್ವಕಪ್ ತಂಡದಲ್ಲಿ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಬಿಷ್ಣೋಯ್ ಅವರಿಗಿಂತ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಗೆ ಆದ್ಯತೆ ನೀಡಲಾಗಿದೆ.

ಇದನ್ನೂ ಓದಿ: Team India: ಆಸೀಸ್- ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಪ್ರಕಟ, ತಂಡದಿಂದ ಸ್ಟಾರ್​ ಆಲ್​ರೌಂಡರ್​ ಔಟ್​

ವಿಶ್ವಕಪ್‌ಗೂ ಮುನ್ನ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿನ್ನು ತವರಿನಲ್ಲಿ ಆಡಲಿದೆ. ಈ ಸರಣಿಗೂ ತಂಡವನ್ನು ಆಯ್ಕೆ ಮಾಡಲಾಗಿದ್ದು, ಟಿ20 ವಿಶ್ವಕಪ್​ಗೆ ಆಯ್ಕೆ ಆದ ಹೆಚ್ಚಿನ ಆಟಗಾರರೇ ಈ ಸರಣಿಯಲ್ಲಿಯೂ ಕಣಕ್ಕಿಳಿಯಲಿದ್ದಾರೆ. ಆದರೆ ಈ ಬಾರಿ ಗಾಐದ ಸಮಸ್ಯೆಯಿಂದ ಏಷ್ಯಾ ಕಪ್​ನಿಂದ ಹೊರನಡೆದ ರವೀಂದ್ರ ಜಡೇಜಾ ಅವರು ಟಿ20 ವಿಶ್ವಕಪ್​ಗೂ ಸಹ ಆಯ್ಕೆ ಆಗಿಲ್ಲ.

ಟಿ20 ವಿಶ್ವಕಪ್​ಗೆ ಭಾರತ ತಂಡ:

ಟಿ20 ವಿಶ್ವಕಪ್​ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (WC), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಆರ್ ಪಂತ್ (WK), ದಿನೇಶ್ ಕಾರ್ತಿಕ್ (WK), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ವೈ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಬಿ. ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಸ್ಟ್ಯಾಂಡ್-ಬೈ ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹಾರ್
Published by:shrikrishna bhat
First published: