Asia Cup 2022: ಏಷ್ಯಾ ಕಪ್​ಗೆ ಟೀಂ ಇಂಡಿಯಾ ಪ್ರಕಟ, ಕನ್ನಡಿಗನಿಗೆ ಉಪ ನಾಯಕನ ಪಟ್ಟ

ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್ ಗೆ ಬಿಸಿಸಿಐ ಟೀಂ ಇಂಡಿಯಾವನ್ನು ಪ್ರಕಟಿಸಿದೆ.  15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಕೆಎಲ್​ ರಾಹುಲ್​ ಅವರನ್ನು ಉಪ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

  • Share this:
ಏಷ್ಯಾ ಕಪ್ 2022 (Asia Cup 2022) ಟೂರ್ನಿಯು ಈ ಬಾರಿ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ ಶ್ರೀಲಂಕಾದ ಆಂತರಿಕ ಬಿಕ್ಕಟ್ಟಿನಿಂದಾಗಿ ಟೂರ್ನಿಯನ್ನು ಈಗಾಗಲೇ ಯುಎಇಗೆ (UAE) ಸ್ಥಳಾಂತರಿಸಲಾಗಿದೆ. ಸದ್ಯ ಟೂರ್ನಿಯ ವೇಳಾಪಟ್ಟಿ ಸಹ ಪ್ರಕಟವಾಗಿದೆ. ಇದರ ನಡುವೆ ಇದೀಗ ಬಿಸಿಸಿಐ (BCCI) ಏಷ್ಯಾ ಕಪ್​ಗಾಗಿ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಭಾರತ ತಂಡವನ್ನು ರೋಹಿತ್​ ಶರ್ಮಾ (Rohit Sharma) ಅವರನ್ನು ನಾಯಕರನ್ನಾಗಿ ಆಯ್ಕೆ ಮಾಡಿದರೆ, ಕನ್ನಡಿಗ ಕೆಎಲ್​ ರಾಹುಲ್ (KL Rahul)​ ಅವರನ್ನು ಉಪ ನಾಯಕನನ್ನಾಗಿ ಆಯ್ಕೆ ಮಾಡಿದೆ. ಒಟ್ಟಾರೆಯಾಗಿ ಏಷ್ಯಾ ಕಪ್​ಗಾಗಿ ಟೀಂ ಇಂಡಿಯಾದ ಬಲಿಷ್ಠ ತಂಡವನ್ನು ಇದೀಗ ಪ್ರಕಟಿಸಲಾಗಿದೆ.

ಏಷ್ಯಾ ಕಪ್​ಗೆ ಟೀಂ ಇಂಡಿಯಾ ಪ್ರಕಟ:

ಆಗಸ್ಟ್ 27 ರಿಂದ ಶುರುವಾಗಲಿರುವ ಏಷ್ಯಾಕಪ್ ಗೆ ಬಿಸಿಸಿಐ ಟೀಂ ಇಂಡಿಯಾವನ್ನು ಪ್ರಕಟಿಸಿದೆ.  15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಕೆಎಲ್​ ರಾಹುಲ್​ ಅವರನ್ನು ಉಪ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಲೋಕೇಶ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್ ಅರ್ಷದೀಪ್ ಸಿಂಗ್, ಅವೇಶ್ ಖಾನ್.

ಇದನ್ನೂ ಓದಿ: Asia Cup 2022: ಏಷ್ಯಾ ಕಪ್​ ವೇಳಾಪಟ್ಟಿ ಪ್ರಕಟ, ಇಂಡೋ-ಪಾಕ್​ ಕದನಕ್ಕೆ ಡೇಟ್ ಫಿಕ್ಸ್

ವಿರಾಟ್-ರಾಹುಲ್ ಕಂಬ್ಯಾಕ್​:

ಇಂಗ್ಲೆಂಡ್ ಪ್ರವಾಸದ ಬಳಿಕ ವಿಶ್ರಾಂತಿ ಪಡೆದಿದ್ದ ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆದ ಟೆಸ್ಟ್ ಮತ್ತು ಸೀಮಿತ ಓವರ್‌ಗಳ ಸರಣಿಯ ನಂತರ ವಿರಾಟ್ ವೆಸ್ಟ್ ಇಂಡೀಸ್ ಪ್ರವಾಸದಿಂದ ಹಿಂದೆ ಸರಿದಿದ್ದರು. ವಿರಾಟ್ ಜೊತೆಗೆ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದ ಕೆಎಲ್​ ರಾಹುಲ್ ಕೂಡ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದಾರೆ.

ಏಷ್ಯಾ ಕಪ್ ತಂಡಗಳ ಗ್ರೂಪ್​:

ಗ್ರೂಪ್ A- ಭಾರತ, ಪಾಕಿಸ್ತಾನ, ಕ್ವಾಲಿಫೈಯರ್ ತಂಡ
ಗ್ರೂಪ್B- ಬಾಂಗ್ಲಾದೇಶ, ಅಫ್ಘಾನಿಸ್ತಾನ, ಶ್ರೀಲಂಕಾ

ಇದನ್ನೂ ಓದಿ:  Asia Cup 2022: ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಬಿಗ್​ ಶಾಕ್​, ಸ್ಟಾರ್​ ಬೌಲರ್ ಔಟ್

ಏಷ್ಯಾ ಕಪ್ 2022 ವೇಳಾಪಟ್ಟಿ:

ಶ್ರೀಲಂಕಾ vs ಅಫ್ಘಾನಿಸ್ತಾನ - ಆಗಸ್ಟ್ 27
ಭಾರತ vs ಪಾಕಿಸ್ತಾನ - ಆಗಸ್ಟ್ 28
ಬಾಂಗ್ಲಾದೇಶ vs ಅಫ್ಘಾನಿಸ್ತಾನ - ಆಗಸ್ಟ್ 30
ಭಾರತ vs ಕ್ವಾಲಿಫೈಯರ್ ತಂಡ - ಆಗಸ್ಟ್ 31
ಶ್ರೀಲಂಕಾ vs ಬಾಂಗ್ಲಾದೇಶ - ಸೆಪ್ಟೆಂಬರ್ 1
ಪಾಕಿಸ್ತಾನ vs ಕ್ವಾಲಿಫೈಯರ್ ತಂಡ - ಸೆಪ್ಟೆಂಬರ್ 2
B1 vs B2 - ಸೆಪ್ಟೆಂಬರ್ 3
A1 vs A2 – ಸೆಪ್ಟೆಂಬರ್ 4
A1 vs B1 – ಸೆಪ್ಟೆಂಬರ್ 6
A2 vs B2 – ಸೆಪ್ಟೆಂಬರ್ 7
A1 vs B2 – ಸೆಪ್ಟೆಂಬರ್ 8
B1 vs A2 - ಸೆಪ್ಟೆಂಬರ್ 9
ಫೈನಲ್ ಪಂದ್ಯ - ಸೆಪ್ಟೆಂಬರ್ 11
ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆಯಲಿದ್ದು, ಭಾರತೀಯ ಕಾಲಮಾನ ರಾತ್ರಿ 7.30ಕ್ಕೆ ಪ್ರಾರಂಭವಾಗಲಿದೆ.
Published by:shrikrishna bhat
First published: