ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್‌ಗೆ (WTC Final 2023) 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ (BCCI) ಪ್ರಕಟಿಸಿದೆ. ಐಪಿಎಲ್ 2023ರಲ್ಲಿ (IPL 2023) ಉತ್ತಮ ಪ್ರದರ್ಶನ ನೀಡಿದ ಅಜಿಂಕ್ಯ ರಹಾನೆ (Ajinkya Rahane) ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ಸೂರ್ಯಕುಮಾರ್ ಯಾದವ್ (Suryakumar Yadav) ಅವರನ್ನು ಬಿಸಿಸಿಐ ತಂಡದಿಂದ ಕೈಬಿಟ್ಟಿದೆ. ಜೂನ್ 7 ರಿಂದ ಭಾರತ ಮತ್ತು ಆಸ್ಟ್ರೇಲಿಯಾ (IND vs AUS) ನಡುವೆ ಫೈನಲ್ ಪಂದ್ಯ ನಡೆಯಲಿದೆ. ವಿಕೆಟ್ ಕೀಪರ್ ಆಗಿ ಕೆಎಸ್ ಭರತ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಶಾರ್ದೂಲ್ ಠಾಕೂರ್ ವೇಗದ ಬೌಲರ್ ಆಗಿ ಹಾಗೂ ಆಲ್‌ರೌಂಡರ್ ಆಗಿ ಆಯ್ಕೆಯಾಗಿದ್ದಾರೆ. ಆಸ್ಟ್ರೇಲಿಯನ್ ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಅವರ ಪ್ರದರ್ಶನ ಈ ಹಿಂದೆ ವಿಶೇಷವೇನೂ ಆಗಿರಲಿಲ್ಲ.
ರಹಾನೆಗೆ ಸ್ಥಾನ:
ಐಪಿಎಲ್ 2023 ರಲ್ಲಿ, ಅವರು ಇಲ್ಲಿಯವರೆಗೆ ಚೆನ್ನೈ ಸೂಪರ್ ಕಿಂಗ್ಸ್‌ಗಾಗಿ ಅಜಿಂಕ್ಯ ರಹಾನೆ ಅದ್ಭುತ ಪ್ರದರ್ಶನ ನೀಡಿದ್ದಾರೆ. ರಹಾನೆ ಐಪಿಎಲ್ 16 ನೇ ಸೀಸನ್‌ನಲ್ಲಿ ಒಟ್ಟು 105 ಎಸೆತಗಳನ್ನು ಎದುರಿಸಿದ್ದಾರೆ ಮತ್ತು 29 ಬೌಂಡರಿಗಳನ್ನು ಬಾರಿಸಿದ್ದಾರೆ. ಇದರಲ್ಲಿ 18 ಬೌಂಡರಿ ಹಾಗೂ 11 ಸಿಕ್ಸರ್‌ಗಳು ಸೇರಿವೆ. 209 ರನ್ ಗಳಿಸಿದ್ದಾರೆ. 15 ತಿಂಗಳ ಬಳಿಕ ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದರು. ಅವರು 82 ಟೆಸ್ಟ್‌ಗಳ 140 ಇನ್ನಿಂಗ್ಸ್‌ಗಳಲ್ಲಿ 39 ಸರಾಸರಿಯಲ್ಲಿ 4931 ರನ್ ಗಳಿಸಿದ್ದಾರೆ. 12 ಶತಕ ಹಾಗೂ 25 ಅರ್ಧ ಶತಕ ಬಾರಿಸಿದ್ದಾರೆ.
🚨 NEWS 🚨#TeamIndia squad for ICC World Test Championship 2023 Final announced.
Details 🔽 #WTC23 https://t.co/sz7F5ByfiU pic.twitter.com/KIcH530rOL
— BCCI (@BCCI) April 25, 2023
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಗೆ ಆಯ್ಕೆಯಾಗಿರುವ ತಂಡದಲ್ಲಿ ಶಾರ್ದೂಲ್ ಠಾಕೂರ್ ಹೊರತಾಗಿ ವೇಗಿಗಳಾದ ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸ್ಪಿನ್ ಆಲ್ ರೌಂಡರ್ ಗಳಾದ ಅಕ್ಷರ್ ಪಟೇಲ್, ರವೀಂದ್ರ ಜಡೇಜಾ ಮತ್ತು ಅಶ್ವಿನ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಸರಣಿಯಲ್ಲಿ ಇಶಾನ್ ಕಿಶನ್ ವಿಕೆಟ್ ಕೀಪರ್ ಆಗಿ ತಂಡದಲ್ಲಿದ್ದರು. ಆದರೆ ಈ ಬಾರಿ ಕೆ.ಎಸ್ ಭರತ್ ಮಾತ್ರ ಸೇರ್ಪಡೆಯಾಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕೆಎಲ್ ರಾಹುಲ್ ಕೂಡ ವಿಕೆಟ್ ಕೀಪಿಂಗ್ಗೆ ಆಯ್ಕೆಯಾಗಬಹುದು.
ಇದನ್ನೂ ಓದಿ: IPL 2023: ಆರ್ಸಿಬಿ ಪಂದ್ಯದ ವೇಳೆ ಮೊಳಗಿದ ವರಾಹ ರೂಪಂ ಸಾಂಗ್, ಮ್ಯಾಚ್ ಗೆಲ್ಲೋಕೆ ದೈವ ಕಾರಣ ಅಂದ್ರು ಫ್ಯಾನ್ಸ್!
ಸೂರ್ಯಕುಮಾರ್ ಔಟ್:
ಆದರೆ, ಸೂರ್ಯಕುಮಾರ್ ಯಾದವ್ ಗೆ ಅವಕಾಶ ಸಿಗಲಿಲ್ಲ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ನಾಯಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಆರಂಭಿಕರಾಗಿದ್ದಾರೆ. ಗಿಲ್ ಕಳೆದ ಎರಡು ತಿಂಗಳಿನಿಂದ ಎಲ್ಲಾ ಫಾರ್ಮ್ಯಾಟ್‌ಗಳಲ್ಲಿ ಫಾರ್ಮ್‌ನಲ್ಲಿದ್ದಾರೆ ಮತ್ತು ಎಲ್ಲಾ ಫಾರ್ಮ್ಯಾಟ್‌ಗಳಲ್ಲಿ ಶತಕಗಳನ್ನು ಗಳಿಸಿದ್ದಾರೆ. ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಹಿಂದಿನ ಸರಣಿಯಲ್ಲೂ ಶತಕ ಸಿಡಿಸಿದ್ದರು. ಚೇತೇಶ್ವರ ಪೂಜಾರ ಭಾರತದ ಮಧ್ಯಮ ಕ್ರಮಾಂಕದಲ್ಲಿ ವಿಶ್ವಾಸಾರ್ಹ ಬ್ಯಾಟ್ಸ್‌ಮನ್ ಆಗಿದ್ದಾರೆ. ಪ್ರಸ್ತುತ ಕೌಂಟಿ ಕ್ರಿಕೆಟ್ ಆಡುತ್ತಿದ್ದು, ಇಂಗ್ಲೆಂಡ್ ಪರಿಸರದಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಇದಲ್ಲದೇ ರನ್ ಮೆಷಿನ್ ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ ಕೂಡ ಇದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್.
ಬ್ರೇಕಿಂಗ್ ನ್ಯೂಸ್ ಎಲ್ಲರಿಗಿಂತ ಮೊದಲು ನ್ಯೂಸ್ 18 ಕನ್ನಡದಲ್ಲೇ ಓದಿ. ಪ್ರತಿದಿನದ ತಾಜಾ ಸುದ್ದಿ, ಲೈವ್ ನ್ಯೂಸ್ ಅಪ್ಡೇಟ್ ನಂಬಿಕೆಯುಳ್ಳ ನ್ಯೂಸ್ 18 ಕನ್ನಡದಲ್ಲೇ ಪಡೆಯಿರಿ